ದಿನದ ಸುದ್ದಿ
ಉಗ್ರ ಸಂಘಟನೆಗಳ ಮೇಲೆ ದಾಳಿಯಷ್ಟೆ ; ನಾಗರಿಕರನ್ನು ಟಾರ್ಗೆಟ್ ಮಾಡಿಲ್ಲ : ವಿದೇಶಾಂಗ ಕಾರ್ಯದರ್ಶಿ ವಿಜಯ್ ಕೇಶವ್ ಗೋಖಲೆ
ಸುದ್ದಿದಿನ, ದೆಹಲಿ : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಇಂದು ನಸುಕಿನ ಜಾವ ನಡೆದ ಏರ್ಸ್ಟ್ರೈಕ್ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಜಯ್ ಕೇಶವ್ ಗೋಖಲೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
Foreign Secretary Vijay Gokhale: Credible intelligence was received that Jaish-e-Mohammed was attempting another suicide terror attack in various parts of the country & fidayeen jihadis were being trained for this purpose pic.twitter.com/1SRgYvqjtv
— ANI (@ANI) February 26, 2019
2004ರಿಂದಲೂ ತನ್ನ ನೆಲದಲ್ಲಿರುವ ಉಗ್ರರ ನೆಲೆಗಳನ್ನು ನಾಶ ಮಾಡುವಂತೆ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದೆವು ಆದ್ರೂ ಪಾಕ್ ಕ್ರಮ ಕೈಗೊಂಡಿಲ್ಲ.
Vijay Gokhale: In an intelligence lead operation in the early hours today, India struck the biggest training camp of Jaish-e-Mohammed in Balakot. In this operation, a very large number of JeM terrorists, trainers, senior commander & Jihadis were eliminated pic.twitter.com/bdHGdZLhdU
— ANI (@ANI) February 26, 2019
ಪದೇ ಪದೇ ಭಾರತದ ಮೇಲೆ ಪಾಕ್ ಪ್ರಚೋದಿತ ಉಗ್ರರು ದಾಳಿ ನಡೆಸುತ್ತಲೇ ಇದ್ದರು. ಹೀಗಾಗಿ ಜೈಷ್- ಇ-ಮೊಹ್ಮದ್ ಸಂಘಟನೆಗಳ ನೆಲೆ ಮೇಲೆ ದಾಳಿ ನಡೆಸಿದ್ದೇವೆ. ಯಾವುದೇ ನಾಗರಿಕರನ್ನು ನಾವು ಟಾರ್ಗೆಟ್ ಮಾಡಿಲ್ಲ ಎಂದು ಹೇಳಿದರು.
#WATCH Foreign Secy says,"This facility in Balakot was headed by Maulana Yusuf Azhar alias Ustad Ghauri, brother in law of JeM Chief Masood Azhar…The selection of the target was also conditioned by our desire to avoid civilian casualty. It's located in deep forest on a hilltop" pic.twitter.com/QENnnkU5Rh
— ANI (@ANI) February 26, 2019
ಕೇವಲ 24 ಗಂಟೆಗಳಲ್ಲಿ ಕಾರ್ಯಾಚರಣೆಗೆ ಗ್ರೀನ್ ಸಿಗ್ನಲ್ ನೀಡಿದ್ದು, POKಯಲ್ಲಿ ಜೈಷ್ ಉಗ್ರರು ಜಮಾಯಿಸಿದ್ದ ಮಾಹಿತಿ ನೀಡಿದ್ದ ಗುಪ್ತಚರ ಇಲಾಖೆ ಪ್ರಧಾನಿಗಳ ಭದ್ರತಾ ಸಲಹೆಗಾರ ಅಜಿತ್ ಧೋವಲ್‌ಗೆ ಮಾಹಿತಿ ನೀಡಿದ್ದಾರೆ.
Foreign Secretary Vijay Gokhale: Credible intelligence was received that Jaish-e-Mohammed was attempting another suicide terror attack in various parts of the country & fidayeen jihadis were being trained for this purpose pic.twitter.com/1SRgYvqjtv
— ANI (@ANI) February 26, 2019
ಕೂಡಲೇ ಪ್ರಧಾನಿ ಮೋದಿಗೆ ವಿಚಾರ ತಿಳಿಸಿದ ಧೋವಲ್,ತಡಮಾಡದೇ POKಯ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಲು ಆದೇಶ
ಮುಂಜಾನೆ 3.30ರ ಸುಮಾರಿಗೆ ಜೈಷ್-ಎ-ಮಹ್ಮಮದ್ ಕ್ಯಾಂಪ್‌ಗಳು ಉಡೀಸ್
ಮಿರಾಜ್ ಯುದ್ಧ ವಿಮಾನಗಳ ಮೂಲಕ ಅಟ್ಯಾಕ್ ಮಾಡಿದೆ ಭಾರತೀಯ ಸೇನೆ ಎಂದರು.
Foreign Secretary: India is firmly&resolutely committed to taking all measures to fight the menace of terrorism.This non-military pre-emptive action was targeted specifically at JeM camp. The selection of the target was also conditioned by our desire to avoid civilian casualties. pic.twitter.com/IKoK9G2NS5
— ANI (@ANI) February 26, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ವಿಶಾಖಪಟ್ಟಣಂನಲ್ಲಿ ಆಲ್ ಇಂಡಿಯ ಕ್ರೀಡಾಕೂಟಕ್ಕೆ ಪೇದೆ ಕೆ.ಆರ್.ಹುಲಿರಾಜ ಆಯ್ಕೆ
- ಗಿರೀಶ್ ಕುಮಾರ್ ಗೌಡ, ಬಳ್ಳಾರಿ
ಸುದ್ದಿದಿನ,ಬಳ್ಳಾರಿ: ಉದ್ಯೋಗದೊಂದಿಗೆ ಆರೋಗ್ಯದ ದೃಷ್ಟಿಯಿಂದ ಪ್ರತಿನಿತ್ಯ ಒಂದು ತಾಸಿನ ಕಾಲ ದೇಹದಂಡನೆ ಮಾಡಿದರೇ ಕರ್ತವ್ಯ ನಿರ್ವಹಿಸಲು ಅನುಕೂಲಕರವಾಗುತ್ತದೆ ಎಂದು ವಿಶಾಲಪಟ್ಟಣಂ ಆಲ್ ಇಂಡಿಯಾ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾದ ಪೇದೆ ಕೆ.ಆರ್ ಹುಲಿರಾಜ ತಿಳಿಸಿದರು.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬೊಮ್ಮಗಟ್ಟ ಗ್ರಾಮದ ತಂದೆ ಕೆ.ರಮೇಶ್, ತಾಯಿ ಲಕ್ಷ್ಮೀ ಅವರ ಮೊದಲನೇ ಮಗ ಕೆ.ಆರ್ ಹುಲಿರಾಜ, ವೃತ್ತಿಯಲ್ಲಿ ಕೆ.ಎಸ್.ಆರ್.ಟಿ.ಸಿ ಪೇದೆ, ಪತ್ನಿ ಸವಿತಾ ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗಿ, ಇಬ್ಬರು ಮಕ್ಕಳು ಇದ್ದಾರೆ.
ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆಗೆ ಖೋ-ಖೋ, ಓಟ, ವಾಲಿಬಾಲ್, ಕ್ರಿಕೆಟ್ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಜೊತೆಗೆ ಬಳ್ಳಾರಿ ಡಯಟ್ ನಲ್ಲಿ ಡಿ.ಎಡ್. ಪದವಿ ಪಡೆದು ನಂತರ ಬಿ.ಎ. ಪದವಿಯನ್ನು ಕುವೆಂಪು ವಿಶ್ವವಿದ್ಯಾಲಯದಲ್ಲಿ ಪೂರ್ಣಗೊಳಿಸಿದ್ದಾರೆ.
ಪೇದೆಯಾಗಿ ಆಯ್ಕೆ
2014ನೇ ಮಾರ್ಚ್ 3ನೇ ತಾರೀಖು ಬೆಂಗಳೂರಿನ ಕೆ.ಎಸ್.ಆರ್.ಟಿ.ಸಿ.ಯಲ್ಲಿ ಪೇದೆಯಾಗಿ ಆಯ್ಕೆಯಾಗಿ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಎರಡು ವರ್ಷಗಳ ಕಾಲ ತರಬೇತಿ ಪೂರ್ಣಗೊಳಿಸಿದ್ದಾರೆ.
ಬೆಂಗಳೂರಿನಲ್ಲಿ 6 ವರ್ಷಗಳ ಕಾಲ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿ ನಂತರ ಪ್ರಸ್ತುತ ಚಿತ್ರದುರ್ಗ ಜಿಲ್ಲೆಯ ಚಳ್ಳಕೇರೆ ತಾಲೂಕಿನ ಡಿಪೋದಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
800,1500 ಮೀಟರ್ ಓಟದ ಸ್ಪರ್ಧೆ ಆಯ್ಕೆ
ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗಿ, ನಂತರ ರಾಜ್ಯ ಮಟ್ಟದಲ್ಲಿ 800 ಮೀಟರ್ ಹಾಗೂ 1500 ಮೀಟರ್ ಓಟದಲ್ಲಿ ದ್ವೀತಿಯ ಸ್ಥಾನ ಪಡೆದುಕೊಂಡು, 2024ನೇ ಸಾಲಿನ ಡಿಸೆಂಬರ್ 6, 7 ಹಾಗೂ 8 ರಂದು ನಡೆಯುವ ಆಲ್ ಇಂಡಿಯಾ ರೋಡ್ ಟ್ರಾನ್ಸ್‌ಪೋರ್ಟ್ ಕಾರ್ಪೋರೇಷನ್ ಲಿಮಿಟೆಡ್ ಅಥ್ಲೆಟಿಕ್ ಮೀಟ್, ಪಾರ್ಟ್ ಸೇಡಿಯಂ, ವಿಶಾಖಪಟ್ಟಣಂನಲ್ಲಿ ನಡೆಯುವ ಅಥ್ಲೆಟಿಕ್ಸ್ ಗೆ ಆಯ್ಕೆಯಾಗಿ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ.
ಇಲಾಖೆ ಪ್ರೋತ್ಸಾಹ
ASRTU ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುವ ನಿಗಮದ ಆಟಗಾರರಿಗೆ ಅಭ್ಯಾಸ ಮಾಡಲು ವೇತನ ಸಹಿತ ರಜೆ ಹಾಗೂ ಕ್ರೀಡಾ ಸಾಮಗ್ರಿ ಕೊಟ್ಟಿದ್ದಾರೆ .ASRTU ವತಿಯಿಂದ ದೇಶದ ಎಲ್ಲಾ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ವಿಶಾಖಪಟ್ಟಣಂನಲ್ಲಿ ಆಯೋಜಿಸಲಾಗಿದೆ. ರಾಜ್ಯದ ಹಾಗೂ ಜಿಲ್ಲೆಯ ಇಲಾಖೆಯ ಅಧಿಕಾರಿಗಳಿಗೆ ಪೇದೆ ಕೆ.ಆರ್. ಹುಲಿರಾಜ್ ರಿಗೆ ಧನ್ಯವಾದಗಳನ್ನು ತಿಳಿಸಿದರು.
ಒಟ್ಟಾರೆಯಾಗಿ ASRTU Athletics ಡಿಸೆಂಬರ್-2024 ಕ್ರೀಡಾಕೂಟವನ್ನು ಡಿಸೆಂಬರ್ 06 ರಿಂದ 8 ವರೆಗೆ ವಿಶಾಖಪಟ್ಟಣಂನಲ್ಲಿ ಆಯೋಜಿಸಿದೆ. ಅದರಲ್ಲಿ ಬಳ್ಳಾರಿ ಜಿಲ್ಲೆಯ ನಿವಾಸಿ ಪೇದೆ ಕೆ.ಆರ್ ಹುಲಿರಾಜ ಭಾಗವಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಈ ಸಮಯದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ತಂದೆ ತಾಯಿ, ಪೋಷಕರು ಹಾಗೂ ಸ್ನೇಹಿತರು ಶುಭಕೋರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚನ್ನಗಿರಿ |ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ
ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಹಾಗೂ ಇತರೆ ಚಟುವಟಿಕೆ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು.
ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು.
ಮುಖ್ಯ ಅತಿಥಿಗಳಾಗಿ ಡಿವೈಎಸ್ ಪಿ ಸ್ಯಾಮ್ ವರ್ಗೀಸ್ ಐಪಿಸ್ ಹಾಗೂ ಕಿರುತೆರೆಯ ರಿಯಾಲಿಟಿ ಶೋ ಮಹಾನಟಿ ಖ್ಯಾತಿಯ ಬಿಂದು ಹೊನ್ನಾಳಿ ಭಾಗವಹಿಸಿದ್ದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅಮೃತೇಶ್ವರ ಬಿ.ಜಿ ವಹಿಸಿದ್ದರು. ಐ ಕ್ಯು ಎಸ್ ಸಿ ಸಂಚಾಲಕರಾದ ವಿಜಯ್ ಕುಮಾರ್ ಎನ್.ಸಿ ಅವರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಷಣ್ಮುಖಪ್ಪ ಕೆ.ಹೆಚ್ ಅವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಡಿವೈಎಸ್ ಪಿ ಸ್ಯಾಮ್ ವರ್ಗೀಸ್ ಐ ಪಿ ಎಸ್ ಅವರ ವ್ಯಕ್ತಿಪರಿಚಯವನ್ನು ಪ್ರಾಧ್ಯಾಪಕಿ ಡಾ.ದಾಕ್ಷಾಯಿಣಿ ಡೋಂಗ್ರೆ ಅವರು ಹಾಗೂ ಕಿರುತೆರೆ ನಟಿ ಬಿಂದು ಹೊನ್ನಾಳಿಯವರ ವ್ಯಕ್ತಿಪರಿಚಯವನ್ನು ಡಾ.ಶಕೀಲ್ ಅಹಮ್ಮದ್ ಅವರು ಮಾಡಿಕೊಟ್ಟರು.
ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಸಂಯೋಜಕರಾದ ಡಾ.ರಮೇಶ್ ಅಯ್ಯನಹಳ್ಳಿ ಹಾಗೂ ಪ್ರಸನ್ನ ಷ, ರೆಡ್ ಕ್ರಾಸ್ ನ ಸಂಯೋಜಕರಾದ ಡಾ.ಪ್ರದೀಪ್ ಕುಮಾರ್ ಜಿಎಂ, ರೋವರ್ಸ್ ನ ಸುರೇಶ್ ಜಿ.ಎಸ್, ರೇಂಜರ್ಸ್ ನ ಡಾ.ಶಕುಂತಲಾ ಹಾಗೂ ಸುಪ್ರಿಯಾ ಬುಟ್ಟಿ, ಉದ್ಯೋಗ ಕೋಶದ ಸಂಚಾಲಕರಾದ ಡಾ.ಮಂಜುಳ ಟಿ, ಕಾಲೇಜು ಸಮಿತಿಯ ಸದಸ್ಯರು, ಬೋಧಕವರ್ಗ ಹಾಗೂ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳಾದ ತೇಜು, ಭಾಗ್ಯ ಜಿ.ಜಿ ಆಶಯಗೀತೆ ಹಾಡಿದರು. ಮಂಜುನಾಥ ಮತ್ತು ಲೋಹಿತ್ ನಿರೂಪಿಸಿದರು. ಸಿದ್ದೇಶ್ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..
ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.
ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.
ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಬದಲಾಯಿಸದಂತೆ ಬ್ರಿಕ್ಸ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯ
-
ದಿನದ ಸುದ್ದಿ6 days ago
ಇಂದು ವಿಶ್ವ ಏಡ್ಸ್ ದಿನ; ಎಚ್‌ಐವಿ ಚಿಕಿತ್ಸೆ – ನಿರ್ಮೂಲನೆ ಕುರಿತು ಜಾಗೃತಿ ಅಭಿಯಾನ
-
ಕ್ರೀಡೆ3 days ago
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
-
ದಿನದ ಸುದ್ದಿ2 days ago
ಚನ್ನಗಿರಿ |ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ
-
ಕ್ರೀಡೆ3 days ago
ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ
-
ದಿನದ ಸುದ್ದಿ4 days ago
ಫೆಂಗಲ್ ಚಂಡಮಾರುತ | ರಾಜ್ಯದ ವಿವಿಧೆಡೆ ಮಳೆ ; ಕೆಲವು ಜಿಲ್ಲೆಯಲ್ಲಿ ರಜೆ ಘೋಷಣೆ
-
ಕ್ರೀಡೆ4 days ago
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ2 days ago
ವಿಶಾಖಪಟ್ಟಣಂನಲ್ಲಿ ಆಲ್ ಇಂಡಿಯ ಕ್ರೀಡಾಕೂಟಕ್ಕೆ ಪೇದೆ ಕೆ.ಆರ್.ಹುಲಿರಾಜ ಆಯ್ಕೆ