ರಾಜಕೀಯ
ಮಲ್ಯ ಆಸ್ತಿ ಮುಟ್ಟುಗೋಲು: ಮುಗಿಯದ ಗೊಂದಲ

ಸುದ್ದಿದಿನ ಡೆಸ್ಕ್: ಮದ್ಯ ದೊರೆ ವಿಜಯ್ ಮಲ್ಯ ಅವರನ್ನು ಉದ್ದೇಶಿತ ಸುಸ್ತಿದಾರ ಎಂದು ಘೋಷಿಸಿದ ನಂತರ ಲಂಡನ್‍ನಲ್ಲಿರುವ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಕೋರ್ಟ್ ಆದೇಶ ನೀಡಿದ್ದರೂ, ಈ ಕುರಿತ ಗೊಂದಲ ಇನ್ನು ಮುಂದುವರಿದಿದೆ.
ಲಂಡನ್ ಹಾಗೂ ವೇಲ್ಸ್‍ನಲ್ಲಿರುವ ಅವರ ಆಸ್ತಿ ಮೌಲ್ಯನ್ನು 10,500 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಬ್ರಿಟನ್ ಕೋರ್ಟ್ ಈ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಮ್ಮತಿ ನೀಡಿದ್ದರೂ, ಬ್ರಿಟನ್‍ನಲ್ಲಿರುವ ಬಹುತೇಕ ಆಸ್ತಿಯು ಪತ್ನಿ ರೇಖಾ ಹಾಗೂ ಮಲ್ಯ ಅವರ ತಾಯಿಗೆ ಸೇರಿದ್ದಾಗಿದೆ.
ಬ್ರಿಟನ್‍ನಲ್ಲಿ ಮಲ್ಯ ಅವರ ಹೆಸರಿನಲ್ಲಿ ಕೆಲವೇ ಕಾರುಗಳು ಹಾಗೂ ಆಭರಣಗಳಿದ್ದು, ಇದರ ಮೌಲ್ಯ ಕೆಲವೇ ಕೋಟಿ ರೂಪಾಯಿಗಳಾಗಿವೆ ಎಂದು ತಿಳಿದುಬಂದಿದೆ. ಹಾಗಾಗಿ ಬ್ರಿಟನ್‍ನಲ್ಲಿರುವ ಆಸ್ತಿ ತಮ್ಮ ಪಾಲಿಗೆ ಬರುತ್ತದೋ ಇಲ್ಲವೋ ಎಂಬ ಗೊಂದಲದಲ್ಲಿ ಬ್ಯಾಂಕ್ ಅಧಿಕಾರಿಗಳು ನಿದ್ರೆಇಲ್ಲದ ರಾತ್ರಿ ಕಳೆಯುತ್ತಿದ್ದಾರೆ.
ಮಲ್ಯ ಅವರನ್ನು ಉದ್ದೇಶಿತ ಸುಸ್ತಿದಾರ ಎಂದು ಘೋಷಿಸುವ ಮೂಲಕ ಆರ್ಥಿಕ ಕಾನೂನಿನಲ್ಲಿ ಕೆಲ ಬದಲಾವಣೆ ತಂದು ಬ್ರಿಟನ್‍ನಲ್ಲಿರುವ ಮಲ್ಯ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಕೋರ್ಟ್ ಮೂಲಕ ಆದೇಶ ತರಲಾಗಿತ್ತು

ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು.
ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.
ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರವರಿ-2025 ರ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 05 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಸರ್ಕಾರ ಆದೇಶಿಸಿದೆ.
ಅದರಂತೆ ಫೆಬ್ರವರಿ-2025 ಮಾಹೆಯಲ್ಲಿ ವಿತರಿಸಬೇಕಾದ ಅಕ್ಕಿ ಪ್ರಮಾಣವನ್ನು ಸೇರಿ ಮಾರ್ಚ್-2025 ಮಾಹೆಯಲ್ಲಿ ವಿತರಿಸಲಾಗುವುದು. ಮಾರ್ಚ್ 1 ರಿಂದ ಮಾರ್ಚ್ 31 ರ ವರಗೆ ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಹಾಗೂ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು.
ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಿ ಕ್ರಮಕೈಗೊಳ್ಳಲಾಗುವುದು. ಅನಧಿಕೃತವಾಗಿ ಕಾಳಸಂತೆಯಲ್ಲಿ ಆಹಾರಧಾನ್ಯವನ್ನು ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಕೈಗೊಳ್ಳಲಾಗುವುದು.
ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ6 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ5 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ4 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ6 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ4 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ4 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ