ದಿನದ ಸುದ್ದಿ

ಅವಳಿ ಜಿಲ್ಲೆಗಳಲ್ಲಿ ಶ್ರವಣದೋಷವುಳ್ಳ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಜಿ ಆಹ್ವಾನ

Published

on


ಸುದ್ದಿದಿನ,ಬಳ್ಳಾರಿ/ವಿಜಯನಗರ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿರುವ ಶ್ರವಣದೋಷವುಳ್ಳ ವಿಕಲಚೇತನ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ 2021-22ನೇ ಸಾಲಿನ ಹೊಲಿಗೆ ಯಂತ್ರಗಳನ್ನು ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮ್ಮ ವ್ಯಾಪ್ತಿಗೊಳಪಡುವ ಎಮ್.ಆರ್.ಡಬ್ಲ್ಯೂಗಳಿಂದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿ ಫಾರ್ಮ್‍ನ್ನು ಅಗತ್ಯ ದೃಢೀಕೃತ ದಾಖಲಾತಿಗಳೊಂದಿಗೆ ಮೇ.06ರೊಳಗೆ ತಾಲೂಕು ಪಂಚಾಯತಿಯಲ್ಲಿರುವ ಎಮ್.ಆರ್.ಡಬ್ಲ್ಯೂಗಳಲ್ಲಿ ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.

ಬೇಕಾದ ದಾಖಲಾತಿಗಳು

ನಿಗದಿತ ಅರ್ಜಿ ನಮೂನೆ, ಫೋಟೋ(ಎರಡು), ಆಧಾರ್ ಕಾರ್ಡ, ಚುನಾವಣೆ ಗುರುತಿನ ಚೀಟಿ, ಕರ್ನಾಟಕದಲ್ಲಿ ಹಿಂದಿನ ಕನಿಷ್ಠ 10 ವರ್ಷಗಳಿಂದ ವಾಸವಾಗಿರುವ ಬಗ್ಗೆ ತಹಶೀಲ್ದಾರರಿಂದ ಪಡೆದ ರಹವಾಸಿ ಪ್ರಮಾಣ ಪತ್ರ, ಜಾತಿ ಆದಾಯ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ವ್ಯಾಸಂಗ ಮಾಡಿರುವ ಬಗ್ಗೆ ದಾಖಲಾತಿ ಹಾಗೂ ವೃತ್ತಿಗೆ ಸಂಬಂಧಿಸಿದ ಅನುಭವ ಪ್ರಮಾಣ ಪತ್ರ, ಶೇ.40 ಅಥವಾ ಅದಕ್ಕಿಂತ ಹೆಚ್ಚು ಶ್ರವಣ ದೋಷವುಳ್ಳವರಾಗಿರಬೇಕು, ವೈದ್ಯಕೀಯ ಪ್ರಾಧಿಕಾರದಿಂದ ಪಡೆದ ವಿಕಲಚೇತನರ ಗುರುತಿನ ಚೀಟಿ/ಯು.ಡಿ.ಐ.ಡಿ ಕಾರ್ಡ್, ರೂ.20 ಛಾಪಾಕಾಗದದಲ್ಲಿ ಮುಚ್ಚಳಿಕೆ ಪ್ರಮಾಣ ಪತ್ರ ನೋಟರಿ ಮೂಲಕ ದೃಡಿಕರಿಸಿರಬೇಕು.

ಹೆಚ್ಚಿನ ಮಾಹಿತಿಗಾಗಿ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರ ತಾಲೂಕುವಾರು ದೂರವಾಣಿ ಸಂಖ್ಯೆ ಬಳ್ಳಾರಿ-8880875620, ಸಿರುಗುಪ್ಪ-9743509698, ಸಂಡೂರು-9632052270. ಕೂಡ್ಲಿಗಿ-9731747832, ಹೊಸಪೇಟೆ-9945252991, ಹಡಗಲಿ-9900890403, ಹಗರಿಬೊಮ್ಮನಹಳ್ಳಿ-9741185924, ಹರಪನಹಳ್ಳಿ-9110246455 ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ದೂ.08392-267886 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version