ದಿನದ ಸುದ್ದಿ

ಡಿ.29 ಕ್ಕೆ ವಿಜಯನಗರ ವಿಶ್ವವಿದ್ಯಾಲಯದ ಎಂಟನೇ ಘಟಿಕೋತ್ಸವ

Published

on

ಸುದ್ದಿದಿನ,ಬಳ್ಳಾರಿ : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಎಂಟನೇ ಘಟಿಕೋತ್ಸವವು ಡಿ.29 ರ ಬೆಳಗ್ಗೆ 11ಕ್ಕೆ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಸಿದ್ದು ಪಿ.ಆಲಗೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಶ್ವವಿದ್ಯಾಲಯ ಅನುದಾನನ ಆಯೋಗದ ಕಾರ್ಯದರ್ಶಿಗಳು ಮತ್ತು ಸಿ.ವಿ.ಓ ಪ್ರೊ.ರಂಜನೀಶ್ ಜೈನ್ ಘಟಿಕೋತ್ಸವದ ಭಾಷಣ ನುಡಿಯಲಿದ್ದಾರೆ. ಕುಲಪತಿಗಳಾದ ಪ್ರೊ.ಸಿದ್ದು ಪಿ.ಆಲಗೂರು, ಕುಲಸಚಿವರಾದ (ಮೌಲ್ಯಮಾಪನ) ಪ್ರೊ ಶಶಿಕಾಂತ ಎಸ್.ಉಡಿಕೇರಿ, ಕುಲಸಚಿವರಾದ ಪ್ರೊ.ಬಿ.ಕೆ ತುಳಸಿಮಾಲ ಮುಂತಾದವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version