ದಿನದ ಸುದ್ದಿ
ದಾವಣಗೆರೆ | ಈ ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ:ಕುಕ್ಕುವಾಡ ಮತ್ತು ಶ್ಯಾಗಲೆ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯ ಹಮ್ಮಿಕೊಂಡಿರುವುದರಿಂದ ಫೆ.20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ವಿದ್ಯುತ್ ವ್ಯತ್ಯಯ
ದಾವಣಗೆರೆ: ಹೆಚ್.ಎಂ.ಹೊಳೆ 66/11 ಕೆವಿ ವಿ.ವಿ ಕೇಂದ್ರದಲ್ಲಿ 4ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.20 ರಂದು ಬೆಳಿಗ್ಗೆ 10 ಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ವಿದ್ಯುತ್ ವಿತರಣಾ ಕೇಂದ್ರದ ಎಲ್ಲ ಎನ್.ಜೆ.ವೈ ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243