Connect with us

ಲೈಫ್ ಸ್ಟೈಲ್

ವೈರಲ್ ಆಯ್ತು ‘ತಿರಂಗ ಮೇಕಪ್’..!

Published

on

72 ನೇ ಸ್ವತಂತ್ರ ದಿನಾಚರಣೆ ಗೆ ದಿನಗಣನೆ ಶುರುವಾಗಿ ರುವ ಹಿನ್ನೆಲೆಯಲ್ಲಿ ಬ್ಯೂಟಿ ಪ್ರಪಂಚವೂ ಕೇಸರಿ-ಬಿಳಿ-ಹಸಿರು ಅಲೆಯಲ್ಲಿ ಮಿಂದೇಳುತ್ತಿದೆ..ತಿರಂಗ ಬಣ್ಣದ ಬಟ್ಟೆ ಅಷ್ಟೇ ಅಲ್ಲದೆ, ಮೇಕಪ್ ದುನಿಯಾದಲ್ಲಿ ತಿರಂಗ ದರ್ಬಾರು ಶುರುವಾಗಿದೆ.

ದೇಶಪ್ರೇಮ ಸಾರುವ ತಿರಂಗ ಮೇಕಪ್ ಈ ತಿಂಗಳ ಪ್ರಮುಖ ಆಕರ್ಷಣೆ. ಚಿಣ್ಣರಿಂದ ಹಿರಿಯರ ವರೆಗೂ ಪ್ರತಿ ಭಾರತೀಯನೂ  ಹೆಮ್ಮೆಯಿಂದ ಬೀಗುವ ದಿನ ಆಗಸ್ಟ್ 15. ಈ ವಿಶೇಷ ದಿನದ ಸಂಭ್ರಮಾಚರಣೆಯ  ಸಲುವಾಗಿ ತಿರಂಗ ಮೇಕಪ್ ಬ್ಯೂಟಿ ಪ್ರಪಂಚದಲ್ಲಿ ರಂಗೇರಿದೆ.

ತಿರಂಗ ಐ-ಮೇಕಪ್, ತಿರಂಗ ಐ-ಲೈನರ್, ತಿರಂಗ
ಲಿಪ್ ಆರ್ಟ್..ಹೀಗೆ ತಮ್ಮದೇ ಆದ ವಿನೂತನ ರೀತಿಯಲ್ಲಿ ಬ್ಯೂಟಿ ತಜ್ಞರು ದೇಶಪ್ರೇಮ ವ್ಯಕ್ತ ಪಡಿಸುತ್ತಿದ್ದಾರೆ. ಮಹಿಳಾಲೋಕ ಸ್ವತಂತ್ರ ದಿನಾಚರಣೆ ಗೆ ತನ್ನದೇ ವಿಭಿನ್ನ ರೀತಿಯಲ್ಲಿ ಸಿದ್ಧ ಗೊಂಡಿದೆ.

ಎಚ್ಚರಿಕೆ!

ತಿರಂಗ ಮೇಕಪ್ ಮಾಡುವಾಗ ರಾಷ್ಟ್ರ ಧ್ವಜಕ್ಕೆ ಅಪಮಾನ ಆಗದಂತೆ ಜಾಗರೂಕತೆ ವಹಿಸಬೇಕು.

-ಚಿತ್ರಶ್ರೀ ಹರ್ಷ
ಬೆಂಗಳೂರು

ದಿನದ ಸುದ್ದಿ

Photo Gallery | ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025

Published

on

Photo Gallery: ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025'

ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ (ಮಾರ್ಚ್-22) ‘ಜಾನಪದ ಉತ್ಸವ – 2025″ ಅದ್ದೂರಿಯಾಗಿ ನಡೆಯಿತು.

ಜಾನಪದ ತಜ್ಞ, ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ, ಅವರು ಉತ್ಸವಕ್ಕೆ ಚಾಲನೆ ನೀಡಿದರು.

ಎತ್ತಿನ ಬಂಡಿಯಲ್ಲಿ ಅಧ್ಯಾಪಕರು, ಅತಿಥಿಗಳ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನೀರು ತುಂಬಿದ ಪೂರ್ಣ ಕುಂಭಗಳನ್ನು ಹೊತ್ತು ಅತಿಥಿಗಳನ್ನು ಸ್ವಾಗತಿಸಿದರು.
 

ಅಂದು ಕಾಲೇಜಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ವರ್ಷದಲ್ಲಿ ಬರುವ ಯುಗಾದಿ, ಸಂಕ್ರಾಂತಿ, ಶಿವರಾತ್ರಿ, ಕ್ರಿಸ್ ಮಸ್, ರಂಜಾನ್, ದಸರಾ, ಭೂಮಿ ಹುಣ್ಣಿಮೆ, ರಾಶಿ ಪೂಜೆ ಸೇರಿದಂತೆ, ಬಳೆಗಾರ, ಕಣಿಹೇಳುವ, ಚೌಕಾಬಾರಾ, ಗುರುಕುಲ, ಆಯುರ್ವೇದ, ಗೋ ಪೂಜೆ ಎಲ್ಲವೂ ಜಾನಪದ ಸಂಸ್ಕೃತಿಯನ್ನು ಪುನರ್ ನಿರ್ಮಾಣಮಾಡಿದ್ದವು.

ಉತ್ಸವದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು, ಪಂಚೆ, ಅಂಗಿ, ಕುರ್ತಾ, ಲಂಗಾದಾವಣಿ, ಸೀರೆ ಉಟ್ಟು ,ಬುರ್ಕಾ, ತೊಟ್ಟು ಸಡಗರ ಸಂಭ್ರಮದಿಂದ ಕುಣಿದಾಡಿದರು.

ರಾಮನವಮಿಯ ಬೆಲ್ಲದ ಪಾನಕ – ಕೋಸಂಬರಿ, ಕ್ರಿಸ್ಮಸ್ ನ ಕೇಕ್, ರಂಜಾನ್ ಹಬ್ಬದ ಇಪ್ತಾರ್ ಕೂಟದ ಫಲಾಹಾರ, ಗಣಪತಿ ಹಬ್ಬದ ಕಡುಬು, ಯುಗಾದಿಯ ಹೋಳಿಗೆ, ಭೂಮಿ‌ಪೂಜೆಯ ಪಾಯಸ ಹೀಗೆ ವಿವಿಧ ಬಗೆಯ ತಿಂಡಿತಿನಿಸುಗಳು 30 ಜಿಲ್ಲೆಗಳ ವಿಶೇಷ ಖಾಧ್ಯಗಳು ಹಬ್ಬದ ಸಡಗರವನ್ನು ಇಮ್ಮಡಿಗೊಳಿಸಿದವು.

 

ವಸ್ತು ಪ್ರದರ್ಶನ

 

ಸುಮಾರು ವರ್ಷಗಳ ಹಿಂದೆ ಬಳಕೆಯಲ್ಲಿದ್ದ ಬೀಸು ಕಲ್ಲು, ಒನಕೆ, ಸೌದೆ ಒಲೆ, ಕೊಡಲಿ, ಮಚ್ಚು, ಬರ್ಜಿ, ಚನ್ನೆಮಣೆ, ಕೀಲುಗೊಂಬೆ, ಪಾರಂಪರಿಕ ಔಷಧಿ, ಕುಡುಗೋಲು, ಬಂಡಿ,ನಾಣ್ಯಗಳು,ಸೇರು, ಒಳಕಲ್ಲು, ಶಹನಾಯಿ,ಮಜ್ಜಿಗೆಯ ಕಡೆಗೋಲು, ತಾಳ, ಹಾರ್ಮೊನಿಯಂ, ಗಂಡುಕೊಡಲಿ,ಶಾವಿಗೆ ಒತ್ತು,ಹುತ್ತದ ಮಾದರಿ,ವಿಭಿನ್ನ ಬಗೆಯ ರಂಗವಲ್ಲಿ, ವಿವಿಧ ಧಾನ್ಯದ ರಾಶಿ,ಕಳಸ, ದಸರಾ ಗೊಂಬೆಗಳು, ನವರಾತ್ರಿಯ ಮಾತೃದೇವತೆ, ಕುರಾನ್ ಪ್ರತಿ, ಜಾನಮಾಜ್,ಕ್ರಿಸ್ತನ ಜನನದ ಗೋದರಿ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಮಾದರಿ ಚಿತ್ರಗಳು ವಸ್ತುಪ್ರದರ್ಶನದಲ್ಲಿದ್ದವು.

 

ದೇಸೀ ಆಟಗಳು

 

ದೇಸೀ ಆಟಗಳಾದ ಹಗ್ಗ ಜಗ್ಗಾಟ, ಲಗೋರಿ, ಬುಗುರಿ, ಕುಂಟೋಬಿಲ್ಲೆ ಹಾಗೂ ಜನಪದ ನೃತ್ಯ-ಹಾಡು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಂತಸದಿಂದ ಭಾಗವಹಿಸಿದರು.

ಉತ್ಸವದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಬಿ.ಜಿ.ಅಮೃತೇಶ್ವರ ಅವರು ವಹಿಸಿಕೊಂಡಿದ್ದರು. ಹಾಗೂ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಪಕ ಹಾಗೂ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಷ್ಮುಖಪ್ಪ ಕೆ.ಹೆಚ್, ಐಕ್ಯುಎಸಿ ಸಂಚಾಲಕ ಪ್ರೊ.ವಿಜಯ್ ಕುಮಾರ್, ಉತ್ಸವದ ಕ್ರೀಡೆಗಳ ಆಯೋಜಕ ಹಾಗೂ ದೈಹಿಕ ನಿರ್ದೇಶಕರಾದ ಕಲ್ಲೇಶಪ್ಪ ಎಸ್.ಜಿ ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕರು ಹಾಗೂ ಬೋಧಕೇತರ ಸಿಬಂದಿಗಳು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

Janapada Utsava Channagiri Govt collage (24)
Continue Reading

ದಿನದ ಸುದ್ದಿ

ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

Published

on

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.

ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.

ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕವಿತೆ | ಮತ್ತಿನ ಕುಣಿಕೆ

Published

on

  • ಗುರು ಸುಳ್ಯ

ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ

ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ

ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…

ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ

ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ

ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)

ಕವಿ : ಗುರು ಸುಳ್ಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ11 hours ago

ದಾವಣಗೆರೆ | ಭ್ರಷ್ಟಾಚಾರದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು.!

ಸುದ್ದಿದಿನ,ದಾವಣಗೆರೆ:ಸಮಾನತೆ ಪಡೆದ ಮಹಿಳೆಯರು ಸದ್ಯ ಎಲ್ಲ ರಂಗಗಲ್ಲೂ ಪುರುಷರಿಗೆ ಸಮಾನವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ರ್ದುದೈವದ ಸಂಗತಿ ಎಂದರೆ ಪುರಷರನ್ನು ಮೀರಿ ಮಹಿಳಾ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಉಪಲೊಕಾಯಕ್ತನಾಗಿ...

ದಿನದ ಸುದ್ದಿ11 hours ago

ಅಧಿಕಾರಿಗಳ ಮೇಲೆ ಸುಳ್ಳು ಕೇಸು ದಾಖಲಿಸಿದರೆ 3 ವರ್ಷಗಳ ಜೈಲು ಶಿಕ್ಷೆ : ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ

ಸುದ್ದಿದಿನ,ದಾವಣಗೆರೆ:ಸ್ವಾರ್ಥಕ್ಕಾಗಿ ಕೆಲ ವ್ಯಕ್ತಿ ಹಾಗೂ ಸಂಘಟನೆಗಳು, ಅಧಿಕಾರಿಗಳ ಮೇಲೆ ಸುಳ್ಳು ಕೇಸು ದಾಖಲಿಸುತ್ತಿರುವುದು ಭ್ರಷ್ಟಾಚಾರ ಆರೋಪ ಪ್ರಕರಣಗಳ ವಿಚಾರಣೆ ವೇಳೆ ಲೋಕಾಯುಕ್ತ ಗಮನಕ್ಕೆ ಬರುತ್ತಿವೆ. ಲೋಕಾಯುಕ್ತ ಕಾಯ್ದೆ...

ದಿನದ ಸುದ್ದಿ13 hours ago

ಉಗ್ರರನ್ನು ಸದೆಬಡಿಯಲು ಕೇಂದ್ರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಪಹಲ್ಗಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ಭರತ್ ಭೂಷಣ್ ಅವರ ಪಾರ್ಥಿವ ಶರೀರವನ್ನು ಮತ್ತಿಕೆರೆಯ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್,...

ದಿನದ ಸುದ್ದಿ15 hours ago

ಅರಿವಿನ ವಿಸ್ತಾರದ ಪ್ರಕ್ರಿಯೆಯೇ ಸಂಶೋಧನೆ : ಡಾ.ಚಿತ್ತಯ್ಯ

ಸುದ್ದಿದಿನ,ಚನ್ನಗಿರಿ:ಭೂತದ ಮಾಹಿತಿ ಕೆದಕುತ್ತಾ ವರ್ತಮಾನಕ್ಕೆ ಹೊಸ ಹೊಳಹು ನೀಡುವ ಕ್ರಮ ಮತ್ತು ಅರಿವಿನ ವಿಸ್ತಾರದ ಪ್ರಕ್ರಿಯೆಯನ್ನೇ ನಾವು ಸಂಶೋಧನೆ ಎಂದು ಕರೆಯುತ್ತೇವೆ ಎಂದು ಚಳ್ಳಕೆರೆ ಸರ್ಕಾರಿ ಪ್ರಥಮ...

ದಿನದ ಸುದ್ದಿ16 hours ago

ಬಳ್ಳಾರಿ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ಹಗಲು ದರೋಡೆ ; ಹಣ ಕೊಡದಿದ್ರೆ ಪರೀಕ್ಷೇಲಿ ಫೇಲ್ ..! ವಿದ್ಯಾರ್ಥಿಗಳ ಗೋಳು ಕೇಳೋರ್ ಯಾರು..? ಓದಿ ಈ ಸ್ಟೋರಿ..!

ವಿಶೇಷ ವರದಿ : ಗಿರೀಶ್ ಕುಮಾರ್, ಬಳ್ಳಾರಿ ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ನಗರದ ಕಿಷ್ಕಿಂದ ವಿಶ್ವವಿದ್ಯಾಲಯ ಆರಂಭವಾಗಿ ಎರಡು ವರ್ಷ ಕಳೆದಿಲ್ಲ, ಆಗಾಲೇ ವಿದ್ಯಾರ್ಥಿಗಳಿಗೆ ಡೋನೇಷನ್ ಹಾವಾಳಿ ಹೆಚ್ಚಾಗಿದೆ....

ದಿನದ ಸುದ್ದಿ3 days ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ:ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಏಪ್ರಿಲ್ 24 ಮತ್ತು 25 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್...

ದಿನದ ಸುದ್ದಿ4 days ago

ಆಸ್ತಿ ಕಲಹವೇ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆಗೆ ಕಾರಣವಾಯ್ತಾ..?

ಸುದ್ದಿದಿನಡೆಸ್ಕ್:ಭಾನುವಾರ ಹತ್ಯೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಹಿಂದೆ ಆಸ್ತಿ ಕಲಹವಿರಬಹುದು ಎಂಬ ಆರೋಪಗಳು ಕೇಳಿ ಬರುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕೋಟ್ಯಂತರ ಮೌಲ್ಯದ...

ಅಂಕಣ4 days ago

ಕವಿತೆ | ಅವಳೀಗ ಕಾಯುವುದಿಲ್ಲ

ಶಮೀಮ ಕುತ್ತಾರ್, ಮಂಗಳೂರು ಬೆಳಕು ಬರಲೆಂದು ಕಿಟಕಿಯನ್ನೊಂಚೂರು ಸರಿಸಹೊರಟಿದ್ದಳು… ಒಳಗಿನಿಂದಲೇ ಸರಪಳಿಗಳು ಕೈಗಳ ಬಿಗಿದಾಗ ಬೆಳಕಿಗಿಂತ ಬಿಡುಗಡೆಯೇ ಸಾಕೆನಿಸಿತ್ತು. ಬಯಕೆಗಳು ಶಾಪವಾದಾಗ ಇರವನ್ನೂ ಮರೆಯಬೇಕವಳು ಓದಿ ಮುಗಿಸಲಾಗದ...

ದಿನದ ಸುದ್ದಿ5 days ago

ಬಳ್ಳಾರಿ ಪೊಲೀಸ್ ಅಧಿಕಾರಿಗಳ ಪಡಿತರ ಅಕ್ಕಿ ಕಳ್ಳಾಟ : ಠಾಣೆ ಮುಂದೆ ಇದ್ದ ಲಾರಿ ಮಾಯ ; ಈ ಸ್ಟೋರಿ ಓದಿ..!

ಗಿರೀಶ್ ಕುಮಾರ್ ಗೌಡ,ಬಳ್ಳಾರಿ ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ರಾತ್ರಿ ವೇಳೆ ಜಿಲ್ಲೆಯಿಂದ ಬೇರೆ ಬೇರೆ ರಾಜ್ಯಗಳಿಗೆ ಲಾರಿಗಳಲ್ಲಿ ಕಳ್ಳತನದ ಮೂಲಕ...

ದಿನದ ಸುದ್ದಿ5 days ago

ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆಯಾಗಿ 50 ವರ್ಷ; ನೆಹರು ತಾರಾಲಯದಲ್ಲಿ ವಿಶೇಷ ಕಾರ್ಯಕ್ರಮ

ಸುದ್ದಿದಿನಡೆಸ್ಕ್:ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆ ಮಾಡಿ ಇಂದಿಗೆ 50 ವರ್ಷಗಳು ಸಂದಿವೆ. 1975ರಲ್ಲಿ ಈ ದಿನದಂದು ಉಡಾವಣೆ ಮಾಡಲಾದ ಈ ಉಪಗ್ರಹಕ್ಕೆ ಪ್ರಾಚೀನ ಭಾರತೀಯ ಗಣಿತಜ್ಞ...

Trending