Connect with us

ದಿನದ ಸುದ್ದಿ

ಎಫ್‌ಬಿಯಲ್ಲಿ ವೈರಲ್ ಆದ ರಿಜಿಜು ಫಿಟ್‌ನೆಸ್ ವಿಡಿಯೊ..!

Published

on

ಸುದ್ದಿದಿನ,ಡೆಸ್ಕ್ :  ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರ ‘Hum Fit Toh India Fit’ ಕ್ಯಾಂಪೇನ್‌ಗೆ ಕೇಂದ್ರ ಗೃಹ ಇಲಾಖೆ ಸಹಾಯಕ ಸಚಿವ ಕಿರಣ್ ರಿಜಿಜು ಅವು ಕೈ ಜೋಡಿಸಿದ್ದಾರೆ.

ರಿಜಿಜು ಅವರು ತಮ್ಮ ಕಚೇರಿಯಲ್ಲಿ ಪ್ರದರ್ಶಿಸಿರುವ ಫಿಟ್‌ನೆಸ್ ವಿಡಿಯೊ ಸದ್ಯ ವೈರಲ್ ಆಗಿದೆ. ಈಗಾಗಲೇ 90 ಸಾವಿರ ಮಂದಿ ಈ ವಿಡಿಯೊವನ್ನು ಲೈಕ್ ಮಾಡಿದ್ದು, ಹದಿನೈದು ಸಾವಿರಕ್ಕೂ ಹೆಚ್ಚು ಜನ ಶೇರ್ ಮಾಡಿದ್ದಾರೆ. ಹತ್ತು ಲಕ್ಷಕ್ಕೂ ಹೆಚ್ಚು ಮಂದಿ ಈ ವಿಡಿಯೊ ವೀಕ್ಷಿಸಿದ್ದಾರೆ.

ಫಿಟ್‌ನೆಸ್ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಥೋಡ್ ಅವರು ಇತ್ತೀಚೆಗೆ ‘Hum Fit Toh India Fit’  ಎಂಬ ಹೊಸ ಆಂದೋಲನ ಆರಂಭಿಸಿದ್ದರು. ಇದನ್ನು ಸ್ವೀಕರಿಸಿದ್ದ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಚಾಲೆಂಜ್ ಸ್ವೀಕರಿಸಲಿ ಎಂದು ಟ್ವೀಟ್ ಮಾಡಿದ್ದರು. ಕೊಹ್ಲಿ ಅವರ ಫಿಟ್‌ನೆಸ್ ವಿಡಿಯೊ ಕೂಡ ಈ ಹಿಂದೆ ವೈರಲ್ ಆಗಿತ್ತು.

Fabulous campaign by Sports Minister Rajyavardhan Rathore on #HumFitTohIndiaFit to make India a healthy nation. Yes, I accept the #FitnessChallenge. Here's my video & I challenge three others Salman Khan, Pema Khandu & Saumya Tandon.

Posted by Kiren Rijiju on Wednesday, 23 May 2018

ದಿನದ ಸುದ್ದಿ

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

Published

on

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.

“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.

ಶ್ರೀ ಎ. ಜಯಪ್ಪ ಅವರು ಎನ್‌.ಎಸ್‌.ಎಸ್‌. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.

ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್‌. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

Published

on

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್

Published

on

ಸುದ್ದಿದಿನ ವಿಶೇಷ – ವಿದ್ಯಾನಾಯ್ಕ್ ಅರೇಹಳ್ಳಿ

ಸುದ್ದಿದಿನ,ದಾವಣಗೆರೆ : ಕಂಪ್ಯೂಟರ್ ತರಬೇತುದಾರರೊಬ್ಬರು ತನ್ನ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ಬರುವ ಶಿಭಿರಾರ್ಥಿ ಗಳಿಗೆ ಕೇವಲ ಕಂಪ್ಯೂಟರ್ ತರಬೇತಿ ಮಾತ್ರವಲ್ಲದೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಿಶಿಷ್ಟ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಮನೆಮಾತಾಗಿದ್ದಾರೆ.

ಹೌದು ಚನ್ನಗಿರಿ ತಾಲ್ಲೂಕಿನ ತ್ಯಾವಣಿಗೆ ಗ್ರಾಮದಲ್ಲಿರುವ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರದ ಚೇತನ್ ಕುಮಾರ್ ವಿಶಿಷ್ಟ ರೀತಿಯಲ್ಲಿ ತಮ್ಮ ಕಾಯಕ ವೃತ್ತಿಯನ್ನು ನಿರ್ವಹಿಸುವ ಜೊತೆಗೆ ಸಾಂಸ್ಕೃತಿಕ ರಾಯಭಾರಿಯಂತೆ ಕಾರ್ಯ ನಿರ್ವಹಿಸುತ್ತಿರುವುದು ಮನುಷ್ಯತ್ವದ ಅಚಲ ನಂಬಿಕೆಯನ್ನ ಪ್ರತಿಬಿಂಬಿಸುತ್ತದೆ.

ಇಲ್ಲಿನ ವೈವಿಧ್ಯಮಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಕಲಿಕೆಯ ಜೊತೆಗೆ ಸಂಭ್ರಮ ಮತ್ತು ಸಂಸ್ಕಾರವನ್ನು ಬೆಳೆಸುತ್ತಿವೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಜೂನ್ 27,2022ರಲ್ಲಿ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ಶುರು ಮಾಡಿದ ಇವರು ಕೇವಲ ಕಂಪ್ಯೂಟರ್ ಕಲಿಕೆ ಮಾತ್ರವಲ್ಲದೆ ಮಕ್ಕಳಿಗೆ ಬೇರೆ ಬೇರೆಯ ವಿಷಯಗಳ ಬಗ್ಗೆ ಅರಿವು ನೀಡಬೇಕು ಎಂದು ತೀರ್ಮಾನ ಮಾಡಿ ತಮ್ಮದೇ ಶೈಲಿಯಲ್ಲಿ ವಿಭಿನ್ನ ಪ್ರಯತ್ನ ಮಾಡುತ್ತಿದ್ದಾರೆ.

ಜೀವನದ ಜಂಜಾಟದಲ್ಲಿ ಮನೆಯ ಕಷ್ಟ ಜೀವನವನ್ನ ಅರಿತ ಮಕ್ಕಳು ಗೊಂದಲಕ್ಕೆ ಈಡಾಗುತ್ತಾರೆ ಎಂಬುದನ್ನು ಮನಗಂಡ ಇವರು ಮಕ್ಕಳ ಒತ್ತಡವನ್ನು ಕಡಿಮೆ ಮಾಡಲು ಮತ್ತು ವಿದ್ಯಾರ್ಥಿಗಳಲ್ಲಿ ಹಾಸ್ಯ ಪ್ರಜ್ಞೆ ಹಾಗೂ ಅಭಿವ್ಯಕ್ತಿ ಕಲೆ ಬೆಳೆಸಲು ಈ ವಿಶಿಷ್ಟ ಕಾರ್ಯಕ್ರಮವನ್ನ ಪ್ರತಿ ಶುಕ್ರವಾರ ಹಮ್ಮಿಕೊಂಡು ಮಕ್ಕಳನ್ನ ನಕ್ಕು ನಗಿಸುವ ಮೂಲಕ ಕಲಿಕೆಗೆ ಸ್ಫೂರ್ತಿ ನೀಡುತ್ತಿದ್ದಾರೆ.

ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರದೊಳಗೆ

ಆಟೋಟಗಳು

ಬೆಳೆವ ಮಕ್ಕಳು ದೇಶದ ಆಸ್ತಿ.. ಆ ಮಕ್ಕಳು ದೈಹಿಕ ಮತ್ತು ಮಾನಸಿಕ ಸದೃಢರಾಗಿರಬೇಕು ಆಗಲೇ ಕಲಿಕೆಗೆ ಸ್ಫೂರ್ತಿ ಸಿಗುತ್ತೆ ಎನ್ನುವ ಕಾರಣಕ್ಕೆ ಮಕ್ಕಳ ಜೊತೆಯಲ್ಲಿ ಮಕ್ಕಳಾಗಿ ಕೆಲವು ಆಟಗಳನ್ನ ಆಡಿಸುವ ಪರಿಪಾಠವನ್ನು ಮುಂದುವರಿಸುತ್ತ ಬಂದಿದ್ದಾರೆ.

ಒಂದು ದಿನದ ಪಿಕ್ನಿಕ್

ಸದರಿ ತರಬೇತಿ ಕೇಂದ್ರದಲ್ಲಿ ಬರುವ ವಿದ್ಯಾರ್ಥಿಗಳಿಗೆ ವರ್ಷಕ್ಕೊಮ್ಮೆ ಪ್ರವಾಸಕ್ಕೆ ಕರೆದುಕೊಂಡು ಹೋಗಿ ನಕ್ಕು ನಲಿಸಿ ಪ್ರವಾಸಿ ತಾಣಗಳ ಪರಿಚಯ ಮಾಡಿಕೊಂಡು ಬರುವ ವಾಡಿಕೆ ಮುಂದುವರೆಯುತ್ತಲೇ ಇದೆ. ಇದರ ಮೂಲಕ ವಿದ್ಯಾರ್ಥಿಗಳಲ್ಲಿ ಸ್ನೇಹಭಾವ ಮತ್ತು ಹೊರಜಗತ್ತಿನ ಅರಿವು ಮೂಡಿಸಲು ಸಹಕಾರಿಯಾಗಿದ್ದಾರೆ.

​​ಸಾಮೂಹಿಕ ಭೋಜನ

ಇತ್ತೀಚಿಗೆ ರಾಜಕೀಯ ವ್ಯವಸ್ಥೆಯಲ್ಲಿ ಬಡಜನರ ಮನೆಯಲ್ಲಿ ಊಟ ಮಾಡುವುದೇ ದೊಡ್ಡ ಸುದ್ದಿಯನ್ನಾಗಿ ಬಿಂಬಿಸುವ ಕಾಲಘಟ್ಟದಲ್ಲಿ ಮಕ್ಕಳಲ್ಲಿ ಬಡತನ ಸಿರಿತನ ಹಾಗೂ ಜಾತಿ-ಭೇದದ ಅರಿವು ಇರದೇ ಎಲ್ಲರು ಎಲ್ಲರನ್ನು ಪ್ರೀತಿಸಬೇಕು, ಎಲ್ಲರೊಟ್ಟಿಗೆ ಸಾಮೂಹಿಕವಾಗಿ ಒಬ್ಬರ ಮನೆಯಲ್ಲಿನ ಊಟ ಮತ್ತೊಬ್ಬರು ಮಾಡುವ ಮೂಲಕ ಬೇಧ ಭಾವ ಅಳಿಸುವ ಕಾರ್ಯಕ್ಕೆ ಮುನ್ನಡಿ ಬರೆದಿದ್ದಾರೆ.

​ಜನ್ಮ ದಿನಾಚರಣೆ

ಈ ತರಬೇತಿ ಕೇಂದ್ರಕ್ಕೆ ಬರುವ ಮಕ್ಕಳ ಜನ್ಮ ದಿನಾಚರಣೆ ಮಾಡಿ ಶುಭ ಹಾರೈಸಿ ಸಿಹಿ ಹಂಚಿ ಸಂಭ್ರಮ ಪಡುತ್ತಾರೆ.

ಪೂಜೆ ಪುನಸ್ಕಾರ

ಇನ್ನು ಮಕ್ಕಳಲ್ಲಿ ಸಂಪ್ರದಾಯ, ದೇಶದ ಮೇಲೆ ಅಭಿಮಾನ, ದೇವರ ಮೇಲೆ ನಂಬಿಕೆ, ಉತ್ತಮ ಕೆಲಸದ ಬಗ್ಗೆ ಸಾರ್ಥಕತೆ ಭಾವ ಬರಬೇಕು ಎಂಬ ಕಾರಣಕ್ಕೆ ಪೂಜೆ ಪುನಸ್ಕಾರ, ಮಹಾನ್ ವ್ಯಕ್ತಿಗಳ ಜಯಂತಿ ಕಾರ್ಯಕ್ರಮಗಳನ್ನು ಆಚರಿಸಿ ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿರುವುದು ಸ್ವಾಗತರ್ಹ.

ಆರೋಗ್ಯ ಶಿಬಿರ ಆಯೋಜನೆ

ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ತಮ್ಮ ತರಬೇತಿ ಕೇಂದ್ರದಿಂದ ಆರೋಗ್ಯ ಶಿಬಿರಗಳನ್ನು ಆಯೋಜಿಸುವುದು ಅತ್ಯಂತ ಮೆಚ್ಚುವಂತಹ ಕೆಲಸವಾಗಿದೆ.

ಕೌಶಲ್ಯ ಸ್ಪರ್ಧೆ

ಇನ್ನು ಪ್ರತಿವರ್ಷ ತಮ್ಮ ತರಬೇತಿ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಲ್ಲಿ ಸ್ಪರ್ಧೆ ಅರಿವು ಮೂಡಿಸುವ ಸಲುವಾಗಿ ಕಂಪ್ಯೂಟರ್ ಜ್ಞಾನಕ್ಕೆ ಸಂಬಂಧಿಸಿದ ಸ್ಪರ್ಧೆಗಳನ್ನು ನಡೆಸಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರಲಾಗುತ್ತದೆ. ಇದರ ಜೊತೆಗೆ ಅತ್ಯುತ್ತಮ ವಿದ್ಯಾರ್ಥಿಗಳಿಗೆ

​ಬಹುಮಾನ ವಿತರಿಸುವ ಮೂಲಕ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಐವಿನ್ ತರಬೇತಿ ಕೇಂದ್ರ ಸಾಮಾಜಿಕವಾಗಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ.

 

ಬೀಳ್ಕೊಡುಗೆ ಸಮಾರಂಭ

ಇನ್ನೂ ಕೋರ್ಸ್ ಮುಗಿಸಿ ಹೋಗುವ ವಿದ್ಯಾರ್ಥಿಗಳಿಗೆ ಗೌರವಪೂರ್ವಕವಾಗಿ ವಿದಾಯ ಹೇಳುವ ಮೂಲಕ ಗುರುವಿನ ಮತ್ತು ಸಂಸ್ಥೆಯ ಬಾಂಧವ್ಯವನ್ನು ಗಟ್ಟಿಗೊಳಿಸಲಾಗುತ್ತದೆ.

300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ

ಜೂನ್ 27, 2022ರಲ್ಲಿ ಆರಂಭವಾದ ಈ ತರಬೇತಿ ಕೇಂದ್ರದಲ್ಲಿ ಇಲ್ಲಿಯವರೆಗೆ 300ಕ್ಕೂ ಹೆಚ್ಚು ಶಿಬಿರಾರ್ಥಿಗಳು ತರಬೇತಿ ಪಡೆದಿದ್ದಾರೆ. ಒಂದು ಬ್ಯಾಚ್ ಗೆ 8 ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ.

ನಮಗೆ ಕಂಪ್ಯೂಟರ್ ಕಲಿಕೆಯೊಂದಿಗೆ ಉತ್ತಮ ವಿಚಾರಗಳನ್ನು ಇಲ್ಲಿ ಕಲಿಸಲಾಗುತ್ತಿದೆ. ಪ್ರತಿ ವಾರವು ಒಂದೊಂದು ವಿಭಿನ್ನ ಪ್ರಯತ್ನ ಮಾಡುವ ಮೂಲಕ ಚೇತನ್ ಸರ್ ಹೊಸ ವಿಚಾರಗಳನ್ನು ಕಲಿಸುತ್ತಾರೆ. ನಮ್ಮಲ್ಲಿರುವ ಭಯ ಹೊರಗಡೆ ತಗೆಯೋಕೆ ತುಂಬಾ ಪ್ರಯತ್ನ ಪಡ್ತಾರೆ.. ಅವರ ಆದರ್ಶ ಗುಣಗಳೇ ನಮಗೆ ನಮ್ಮ ಸಾಧನೆಯ ಮೆಟ್ಟಿಲುಗಳಾಗಬೇಕು ಅದಕ್ಕಾಗಿ ನಮ್ಮ ಪ್ರಯತ್ನ ಇದ್ದೇ ಇದೆ.

~ಶಿಬಿರಾರ್ಥಿಗಳು

ಗ್ರಾಮೀಣ ಭಾಗದ ಒಂದು ಕಂಪ್ಯೂಟರ್ ಸೆಂಟರ್ ಇಷ್ಟೊಂದು ಸೃಜನಶೀಲ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವುದು ಅಭಿನಂದನೀಯ. ಇದು ಮಕ್ಕಳಲ್ಲಿ ಕೇವಲ ಡಿಜಿಟಲ್ ಕೌಶಲ್ಯವನ್ನಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿಯನ್ನು ಕೂಡ ಬೆಳೆಸುತ್ತದೆ.

​ತ್ಯಾವಣಿಗೆಯ ಐವಿನ್ ಕಂಪ್ಯೂಟರ್ ಸೆಂಟರ್‌ನ ಈ ಮಾದರಿ ಕಾರ್ಯಕ್ರಮಗಳು ಸುತ್ತಮುತ್ತಲಿನ ಹಳ್ಳಿಗಳ ವಿದ್ಯಾರ್ಥಿಗಳಿಗೆ ವರದಾನವಾಗಿದೆ.

ತ್ಯಾವಣಿಗೆ, ಅರೇಹಳ್ಳಿ -ಕದರನಹಳ್ಳಿ, ಕಬ್ಬಳ, ಕರೆಕಟ್ಟೆ, ಮತ್ತಿ, ಬೆಳಲಗೆರೆ, ಮಿಯಾಪುರ ಸೇರಿದಂತೆ ಅಕ್ಕಪಕ್ಕ ಗ್ರಾಮದ ಹಲವಾರು ಮಕ್ಕಳು ಈ ತರಬೇತಿ ಕೇಂದ್ರಕ್ಕೆ ಬಂದು ತರಬೇತಿ ಪಡೆದಿದ್ದಾರೆ.

ಸಮಾಜದಲ್ಲಿ ಆದಷ್ಟು ಒಳ್ಳೆಯ ಕೆಲಸಗಳನ್ನ ಮಾಡಿ ಮಕ್ಕಳಿಗೆ ಮಾದರಿ ಯಾಗಿರಬೇಕು. ಈ ತರಬೇತಿ ಕೇಂದ್ರ ಆರಂಭಕ್ಕೆ ತುಂಬಾ ಕಷ್ಟಪಟ್ಟಿದ್ದೇನೆ. ನಾವು ಪಟ್ಟ ಕಷ್ಟ ಮುಂದಿನ ಪೀಳಿಗೆ ಪಡಬಾರದು. ಕಲಿಕೆಗೂ ಕಷ್ಟಪಡಬೇಕಾದ ಪರಿಸ್ಥಿತಿ ಇದೆ. ಎಷ್ಟೋ ಮಕ್ಕಳಿಗೆ ನಾವು ಹೇಳಿದಷ್ಟು ಹಣ ಕೊಡೋಕೆ ಆಗಲ್ಲ ಹಾಗಂತ ಅವರನ್ನು ಕಲಿಸದೇ ಕಳಿಸಲ್ಲ.. ಹಣದಲ್ಲಿ ರಿಯಾಯ್ತಿ ನೀಡಿ ಅವರನ್ನು ಕಲಿಸೋಕೆ ಹುರಿದುಂಬಿಸುತ್ತೇವೆ ಎನ್ನುತ್ತಾರೆ ಚೇತನ್ ಕುಮಾರ್.

ಇನ್ನು ಟ್ರೈನರ್ ಗಾಯತ್ರಿ ಅವರು ಕೂಡ ಇಲ್ಲಿ ಬರುವ ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿ ಕಂಪ್ಯೂಟರ್ ಕಲಿಸುತ್ತಾರೆ. ಹಾಗೆಯೇ ಈ ಹಿಂದೆ ಇದ್ದ ವಿನುತಾ ಎಂಬ ಟ್ರೈನರ್ ಅವರ ಶ್ರಮ ತುಂಬಾ ಇದೆ ಎನ್ನುತ್ತಾರೆ ಚೇತನ್ ಕುಮಾರ್. ಒಟ್ಟಾರೆ ವಿಭಿನ್ನ ರೀತಿಯಲ್ಲಿ ಕಂಪ್ಯೂಟರ್ ಕಲಿಕೆ ಜೊತೆಗೆ ಬೇರೆ ಬೇರೆ ವಿಷಯಗಳ ಬಗ್ಗೆ ಅರಿವು ಮೂಡಿಸುವ ಇವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿ ಎನ್ನುವುದು ಸುದ್ದಿದಿನ ಪತ್ರಿಕೆಯ ಹಾರೈಕೆ ಆಗಿದೆ.

ಸುದ್ದಿದಿನ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 hours ago

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ....

ದಿನದ ಸುದ್ದಿ2 hours ago

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ...

ದಿನದ ಸುದ್ದಿ16 hours ago

ತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್

ಸುದ್ದಿದಿನ ವಿಶೇಷ – ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ : ಕಂಪ್ಯೂಟರ್ ತರಬೇತುದಾರರೊಬ್ಬರು ತನ್ನ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ಬರುವ ಶಿಭಿರಾರ್ಥಿ ಗಳಿಗೆ ಕೇವಲ ಕಂಪ್ಯೂಟರ್ ತರಬೇತಿ ಮಾತ್ರವಲ್ಲದೆ...

ದಿನದ ಸುದ್ದಿ1 day ago

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಕುಡಿಯುವ ನೀರು ಬಿಡುಗಡೆ: ನದಿ ದಂಡೆಯ ಸಾರ್ವಜನಿಕರು, ರೈತರಿಗೆ ಎಚ್ಚರಿಕೆ

ಸುದ್ದಿದಿನ,ದಾವಣಗೆರೆ: ಹಾವೇರಿ, ರಾಣೇಬೆನ್ನೂರ, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಹಾಗೂ ನದಿ ಪಾತ್ರದ ಗ್ರಾಮಗಳಿಗೆ ಬಹುಗ್ರಾಮ ಯೋಜನೆಯಡಿ ಕುಡಿಯುವ ನೀರನ್ನು ಪೂರೈಸಲು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ...

ದಿನದ ಸುದ್ದಿ1 day ago

ಶಿಕ್ಷಕರು, ವಾರ್ಡನ್‌ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ‘ಚೈಲ್ಡ್ ಹೆಲ್ಪ್‌ಲೈನ್’ ಸಂಖ್ಯೆಯನ್ನು ಪ್ರದರ್ಶಿಸಬೇಕು ಹಾಗೂ ಶಿಕ್ಷಕರು ಮತ್ತು ವಾರ್ಡನ್‌ಗಳಿಗೆ ಪೋಕ್ಸೊ ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಆನ್‌ಲೈನ್ ವಂಚನೆಗಳ ಕುರಿತು...

ದಿನದ ಸುದ್ದಿ2 days ago

ಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?

ಡಾ. ಗಿರೀಶ್ ಕುಮಾರ್ ಗೌಡ ಬಳ್ಳಾರಿ ಸುದ್ದಿದಿನ,ಬಳ್ಳಾರಿ:ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ನಾಪತ್ತೆ. ಲಾರಿಗಳ ಮಾಲೀಕರೊಂದಿಗೆ ಶ್ಯಾಮಿಲು. ಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್...

ಅಂಕಣ2 days ago

ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ

~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ...

ದಿನದ ಸುದ್ದಿ2 days ago

ಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ

ಸುದ್ದಿದಿನ,ದಾವಣಗೆರೆ:ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಸ್‌ಜೆಎಂ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ.ಶಿವರಾಜಕುಮಾರ್ ಮಂಡಿಸಿದ ‘ಪ್ರಧಾನ ಮಂತ್ರಿ ಜನಧನ ಯೋಜನಾ ಆಯ್ಯಂಡ್ ಫೈನಾನ್ಸಿಯಲ್...

ದಿನದ ಸುದ್ದಿ4 days ago

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು. ಚಲನಚಿತ್ರ ರಂಗ – 2005ರಲ್ಲಿ ‘ಬಾಯ್...

ದಿನದ ಸುದ್ದಿ4 days ago

ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ...

Trending