ಕ್ರೀಡೆ
ಅನುಮಾನ ಬೇಡ ಮುಂದಿನ ಅವಧಿಗೂ ವಿರಾಟ್ ಕೊಹ್ಲಿ ಆರ್ ಸಿ ಬಿ ನಾಯಕ
ಸುದ್ದಿದಿನ ಡೆಸ್ಕ್ : ಕಳಪೆ ಆಟ ಪ್ರದರ್ಶನದ ಕಾರಣಕ್ಕೆ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಬದಲಾವಣೆಗೆ ಚಿಂತನೆ ನಡೆದಿದೆ ಎಂಬ ಸುದ್ದಿಯನ್ನು ತಂಡದ ಆಡಳಿತ ಮಂಡಳಿ ತಳ್ಳಿ ಹಾಕಿದೆ.
2019 ರ ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಅವರೇ ಮುಂದುವರಿಯಲಿದ್ದಾರೆ ಎಂದು ತಂಡದ ಮುಖ್ಯಸ್ಥರು ತಿಳಿಸಿದ್ದಾರೆ.
ಮುಂದಿನ ಸೀಸನ್ ನಲ್ಲಿ ವಿರಾಟ್ ಕೊಹ್ಲಿ ಬದಲಿಗೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮಾಜಿ ಆಟಗಾರ ಎಬಿಡಿ ವಿಲಿಯರ್ಸ್ ನಾಯಕರಾಗಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿತ್ತು. ಇದನ್ನು ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಮುಖ್ಯಸ್ಥರು ನಿರಾಕರಿಸಿದ್ದಾರೆ.