Connect with us

ಕ್ರೀಡೆ

ಸೋತ ಟೀಂ ಇಂಡಿಯಾಗೆ ಧೈರ್ಯ ತುಂಬಿದ ವೀರೇಂದ್ರ ಸೆಹ್ವಾಗ್

Published

on

ಸುದ್ದಿದಿನ ಡೆಸ್ಕ್: ಇಂಗ್ಲೆಂಡ್ ವಿರುದ್ಧದ ಏಕದಿನ ಹಾಗೂ ಟೆಸ್ಟ್ ಸರಣಿಯಲ್ಲಿ ಹೀನಾಯವಾಗಿ ಸೋತ ಟೀಮ್ ಇಂಡಿಯಾಗೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಧೈರ್ಯ ತುಂಬಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್, ವಿರಾಟ್ ಕೊಹ್ಲಿ
ನೇತ್ರತ್ವದ ಭಾರತ ತಂಡ ಹಲವು ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಆದರೆ ಕೆಲವೊಂದು ಸಲ ಬ್ಯಾಟ್ ನಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿ ಬರುವುದಿಲ್ಲ. ಜೊತೆಗೆ ವಿದೇಶಿ ಪ್ರವಾಸಕ್ಕೂ ಮುನ್ನ ಅಭ್ಯಾಸ ಮಾಡುವುದು ಅವಶ್ಯಕ ಎಂದು ಧೈರ್ಯದ ಮಾತು ಹೇಳಿದ್ದು, ಟೀಮ್ ಇಂಡಿಯಾ ಆಟಗಾರರಿಗೆ ಆತ್ಮ ಸ್ಥೈರ್ಯ ತುಂಬಿದಂತಾಗಿದೆ.

ಕ್ರೀಡೆ

ವಿಶ್ವಕಪ್ ಶೂಟಿಂಗ್ ಪಂದ್ಯಾವಳಿ; ಭಾರತದ ರೈತಮ್ ಸಂಗ್ವಾನ್‌ಗೆ ಕಂಚಿನ ಪದಕ

Published

on

ಸುದ್ದಿದಿನ ಡೆಸ್ಕ್ : ಅಜರ್ ಬೈಜಾನ್‌ನ ಬಾಕುವಿನಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್ ಪಂದ್ಯಾವಳಿಯ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ರೈತಮ್ ಸಂಗ್ವಾನ್ ಕಂಚಿನ ಪದಕ ಗೆದ್ದಿದ್ದಾರೆ.

ಅಂತಿಮ ಸುತ್ತಿನಲ್ಲಿ ಅವರು,219.1 ಅಂಕ ಗಳಿಸುವ ಮೂಲಕ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟು, ಕಂಚಿನ ಪದಕ ತಮ್ಮದಾಗಿಸಿಕೊಂಡರು. ವಿಶ್ವಕಪ್ ಶೂಟಿಂಗ್ ಪಂದ್ಯಾವಳಿಯಲ್ಲಿ ಇದು ಸಂಗ್ವಾನ್ ಅವರ ಪ್ರಥಮ ವೈಯಕ್ತಿಕ ಪದಕವಾಗಿದೆ.

 

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್: ಭಾರತದ ಚಿರಾಗ್ ಮತ್ತು ಸಾತ್ವಿಕ್ ಜೋಡಿಗೆ ಸ್ವರ್ಣ ಪದಕ

Published

on

ಸುದ್ದಿದಿನ, ದುಬೈ : ದುಬೈನಲ್ಲಿ ನಡೆದ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನ ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿ ರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ನಿನ್ನೆ ನಡೆದ ಫೈನಲ್ ಪಂದ್ಯದಲ್ಲಿ 8ನೇ ಶ್ರೇಯಾಂಕಿತ ಮಲೇಷ್ಯಾದ ಟಿಯೊ ಇ ಯಿ ಮತ್ತು ಒಂಗ್ ಯೆವ್ ಸಿನ್ ವಿರುದ್ಧ 16-21,21-17ಮತ್ತು 21-19 ಗೇಮ್ ಗಳ ಅಂತರದಿಂದ ಗೆದ್ದು ಇತಿಹಾಸ ನಿರ್ಮಿಸಿದೆ.1965ರಲ್ಲಿ ದಿನೇಶ್ ಖನ್ನಾ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಚಿನ್ನ ಗೆದ್ದ ನಂತರ ಭಾರತಕ್ಕೆ ಒಲಿದ ಮೊದಲ ಸ್ವರ್ಣ ಪದಕ ಇದಾಗಿದೆ.

ಭಾರತ ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿರುವ ಚಿರಾಗ್ ಮತ್ತು ಸಾತ್ವಿಕ್ ಜೋಡಿಗೆ ಪ್ರಧಾನಿ ನರೇಂದ್ರ ಮೋದಿ, ಕ್ರೀಡಾ ಸಚಿವ ಹಾಗೂ ಭಾರತ ಬ್ಯಾಡ್ಮಿಂಟನ್ ಸಂಸ್ಥೆ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್ ನಲ್ಲಿ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಪುರುಷರ ಡಬಲ್ಸ್ ಜೋಡಿಯಾಗಿರುವ ಸಾತ್ವಿಕ್‌ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿಗೆ ಅಭಿನಂದನೆಗಳು ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಐಪಿಎಲ್ ಕ್ರಿಕೆಟ್ : ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಇಂದು ಮುಖಾಮುಖಿ

Published

on

ಸುದ್ದಿದಿನ ಡೆಸ್ಕ್ : ಐಪಿಎಲ್ ಟೂರ್ನಿಯ ಇಂದಿನ ಬಹು ನಿರೀಕ್ಷಿತ ಪಂದ್ಯದಲ್ಲಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 3 ನೇ ಸ್ಥಾನದಲ್ಲಿರುವ ಆತಿಥೇಯ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.

ಟೂರ್ನಿಯೂದ್ದಕ್ಕೂ ಅತ್ಯೂತ್ತಮ ಪ್ರದರ್ಶನ ನೀಡುತ್ತಿರುವ ಎರಡೂ ತಂಡಗಳು ಜಯ ಗಳಿಸಲಿಕ್ಕೆ ತಮ್ಮದೇ ಆದ ಕಾರ್ಯತಂತ್ರ ರೂಪಿಸುತ್ತಿವೆ. ಆಡಿರುವ 7 ಪಂದ್ಯಗಳಲ್ಲಿ ತಮ್ಮ ಅಮೋಘ ನಾಯಕತ್ವದ ಪ್ರದರ್ಶನದಿಂದಾಗಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ತಂಡ ಐದು ಪಂದ್ಯ ಜಯಿಸಿ ಅಪಾರ ಆತ್ಮ ವಿಶ್ವಾಸದಿಂದ ಬೀಗುತ್ತಿದೆ.

ಇತ್ತ ಆರ್ ಆರ್ ತಂಡ ಸಹ ಸಂಜು ಸ್ಯಾಮ್ಸನ್ ನಾಯಕತ್ವದ ಗರಡಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಇಂದಿನ ಪಂದ್ಯ ತೀವೃ ಪೈಪೋಟಿಯಿಂದ ಕೂಡಿರಲಿದೆ. ಇನ್ನೊಂದೆಡೆ ಕಳೆದ ರಾತ್ರಿ ಐಪಿಎಲ್ ಪಂದ್ಯಾವಳಿಯ ಬಹು ನೀರಿಕ್ಷಿತ ರಾಯಲ್ ಚಾಲೆಂಜರ್‍ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್‍ಸ್ ತಂಡದ ಮಧ್ಯೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ 36ನೇ ಪಂದ್ಯದಲ್ಲಿ, ಕೆಕೆಆರ್ ತಂಡ ಆತಿಥೇಯ ರಾಯಲ್ಸ್ ಚಾಲೆಂಜರ್‍ಸ್ ತಂಡವನ್ನು 21ರನ್‌ಗಳಿಂದ ಮಣಿಸಿತು.

ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕ ಕೋಹ್ಲಿ ಮೊದಲು ಎದುರಾಳಿ ತಂಡವನ್ನು ಬ್ಯಾಟಿಂಗ್‌ಗೆ ಅಹ್ವಾನಿಸಿದರು. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡ ಕೋಲ್ಕತ್ತಾ ತಂಡ, ಜೆಸನ್ ರಾಯ್, ನಾಯಕ ನಿತಿಶ್ ರಾಣಾ ಮತ್ತು ವೆಂಕಟೇಶ್ ಐಯ್ಯರ್ ಅವರ ಅತ್ಯೂತ್ತಮ ಬ್ಯಾಟಿಂಗ್‌ನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಇದಕ್ಕೆ ಪ್ರತ್ಯೂತ್ತರವಾಗಿ ಬ್ಯಾಟ್ ಬೀಸಿದ ಆತೀಥೇಯ ರಾಯಲ್ ಚಾಲೇಂಜರ್‍ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 179 ರನ್ ಗಳಿಸಿ ಎದುರಾಳಿ ತಂಡಕ್ಕೆ 21 ರನ್‌ಗಳಿಂದ ಶರಣಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ11 hours ago

ಒಡಿಶಾ ರೈಲು ದುರಂತ; 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮನ

ಸುದ್ದಿದಿನ, ಬೆಂಗಳೂರು: ಒಡಿಶಾದ ರೈಲು ದುರಂತದಲ್ಲಿ ಪಾರಾದ 80ಕ್ಕೂ ಹೆಚ್ಚು ಕನ್ನಡಿಗರು ವಿಮಾನದ ಮೂಲಕ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾರ್ಮಿಕ ಸಚಿವ...

ದಿನದ ಸುದ್ದಿ12 hours ago

ರೈತರಿಂದ ಖರೀದಿಸುವ ಹಾಲಿನ ದರ ಕಡಿಮೆ ಮಾಡುವಂತಿಲ್ಲ : ಸಿಎಂ ಸಿದ್ದರಾಮಯ್ಯ ಸೂಚನೆ

ಸುದ್ದಿದಿನ, ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಮೂಲ್...

ಲೈಫ್ ಸ್ಟೈಲ್20 hours ago

ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!

ಸಂಜಯ್ ಹೊಯ್ಸಳ ಕೆನ್ನಾಯಿಗಳು ಕಾಡಿನ ಬೇಟೆಗಾರ ಪ್ರಾಣಿಗಳಲ್ಲಿ ಅತ್ಯಂತ ನಿಷ್ಣಾತ, ಅತ್ಯಂತ ಯಶಸ್ವಿ ಬೇಟೆಗಾರ ಪ್ರಾಣಿಗಳು. ಅತ್ಯಂತ ಬಲಶಾಲಿ ಪ್ರಾಣಿಯಾದ ಹುಲಿಗಳ ಬೇಟೆಯ ಯಶಸ್ಸಿನ ಸರಾಸರಿಯೆ ಕೇವಲ...

ದಿನದ ಸುದ್ದಿ20 hours ago

ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ

ಸುದ್ದಿದಿನ ಡೆಸ್ಕ್ : ಕೋಲ್ಕತಾದ ಹೌರಾದಲ್ಲಿ ಸಿಲುಕಿರುವ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರ್ನಾಟಕಕ್ಕೆ ಕರೆ ತರಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಇಂದು ಬೆಳಗ್ಗೆ ವಿಶೇಷ...

ದಿನದ ಸುದ್ದಿ23 hours ago

ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ಕ್ರೀಡಾಪಟುಗಳ ಆಯ್ಕೆ

ಸುದ್ದಿದಿನ,ದಾವಣಗೆರೆ: ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಆಯ್ಕೆಯಾಗಿರುವರು. ಜೂನ್.6 ರಿಂದ 12ರ ವರೆಗೆ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎಸ್.ಜಿ.ಎಫ್.ಐ. 19 ವರ್ಷದೊಳಗಿನ...

ದಿನದ ಸುದ್ದಿ23 hours ago

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ

ಸುದ್ದಿದಿನ,ದಾವಣಗೆರೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜೂನ್ 5 ಮತ್ತು 6 ರಂದು...

ದಿನದ ಸುದ್ದಿ23 hours ago

ಜೂನ್ 8 ರಿಂದ ಕೋಳಿ ಸಾಕಾಣಿಕೆ ತರಬೇತಿ ಶಿಬಿರ

ಸುದ್ದಿದಿನ,ದಾವಣಗೆರೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜೂನ್ 8 ಮತ್ತು 9 ರಂದು 25...

ದಿನದ ಸುದ್ದಿ24 hours ago

ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಜೂನ್ 5 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 5 ರಂದು ಮಧ್ಯಾಹ್ನ 12.15 ಕ್ಕೆ ಹೆಲಿಕ್ಯಾಪ್ಟರ್ ಮೂಲಕ...

ದಿನದ ಸುದ್ದಿ2 days ago

ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2023-24ನೇ ಸಾಲಿನ 2 ವರ್ಷದ ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು www.schooleducation.kar.nic.in ನಲ್ಲಿ ಡೌನ್‍ಲೋಡ್ ಮಾಡಿಕೊಂಡು ನಿಗದಿತ...

ದಿನದ ಸುದ್ದಿ2 days ago

ದಾವಣಗೆರೆ | ಶತಮಾನದ ಕೆ.ಆರ್.ಪೇಟೆ ಸರ್ಕಾರಿ ಶಾಲೆಗೆ ಡಿಸಿ ಶಿವಾನಂದ ಕಾಪಶಿ ಭೇಟಿ ; ಕಟ್ಟಡದ ಗುಣಮಟ್ಟದ ವರದಿ ನೀಡಲು ಇಂಜಿನಿಯರ್‍ಗೆ ಸೂಚನೆ

ಸುದ್ದಿದಿನ,ದಾವಣಗೆರೆ : ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಿಸಲಾದ ದಾವಣಗೆರೆ ಕೆ.ಆರ್.ಪೇಟೆ ಸರ್ಕಾರಿ ಮಾಧ್ಯಮಿಕ ಶಾಲೆಗೆ ಶುಕ್ರವಾರ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ ಪರಿಶೀಲಿಸಿದರು. ಈ ಶಾಲೆಯನ್ನು ನಿರ್ಮಿಸಿ...

Trending