Connect with us

ದಿನದ ಸುದ್ದಿ

ಹಳೆಹುಬ್ಬಳ್ಳಿ ಪೊಲೀಸ್ ಠಾಣೆ ,ಆಸ್ಪತ್ರೆ, ಪ್ರಾರ್ಥನಾ ಮಂದಿರಗಳಿಗೆ ಭೇಟಿ ; ಶಾಂತಿ ಸೌಹಾರ್ದತೆ ಕಾಪಾಡುವುದು ದೊಡ್ಡ ಜವಾಬ್ದಾರಿ : ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್

Published

on

ಸುದ್ದಿದಿನ,ಹುಬ್ಬಳ್ಳಿ : ಹುಬ್ಬಳ್ಳಿಯ ಜನರು ಶಾಂತಿ ಸೌಹರ್ದತೆಯಿಂದ ಬಾಳಬೇಕು. ಶಾಂತಿ ಸೌಹಾರ್ದತೆಯನ್ನು ಕಾಪಾಡುವುದು ಆಯೋಗದ ದೊಡ್ಡ ಜವಾಬ್ದಾರಿಯಾಗಿದೆ. ಯಾವುದೇ ಕಾರಣಕ್ಕೂ ರಾಜ್ಯ ಹಾಗೂ ದೇಶದಲ್ಲಿ ಸೌಹಾರ್ದತೆಗೆ ಧಕ್ಕೆ ಉಂಟಾಗಬಾರದು‌ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ನಜೀಮ್ ಹೇಳಿದರು.

ಹಳೆಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಪೊಲೀಸ್ ಠಾಣೆ, ಆಸ್ಪತ್ರೆ, ಪ್ರಾರ್ಥನಾ ಮಂದಿರಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು,

ಭಾರತೀಯರೆಲ್ಲರೂ ಒಂದೇ ತಾಯಿ ಮಕ್ಕಳು. ಶಾಂತಿ ಸೌಹಾರ್ದತೆ ಮೂಲಕ ದೇಶ ಹಾಗೂ ರಾಜ್ಯ ಅಭಿವೃದ್ಧಿ ಕಾಣಲು ಸಾಧ್ಯ. ಪೊಲೀಸ್ ಅಧಿಕಾರಿಗಳು ಹಾಗೂ ಇಲ್ಲಿನ ಜನರ ಜೊತೆ ಸಭೆ ನಡೆಸಿ ಶಾಂತಿ ಕಾಪಾಡಲು ಮುಂದಿನ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು.

ಹುಬ್ಬಳ್ಳಿಯಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು. ದಕ್ಷ ಪೊಲೀಸ್ ಅಧಿಕಾರಿಗಳು ಸಮರ್ಥವಾಗಿ ಕಾನೂನು ರೀತಿಯಲ್ಲಿ ತನಿಖೆ ಮಾಡುತ್ತಿದ್ದಾರೆ.ಘಟನೆಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು. ಪೊಲೀಸರು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ಸಂಪೂರ್ಣ ನಂಬಿಕೆಯಿದೆ. ಹುಬ್ಬಳ್ಳಿ ನಗರದಲ್ಲಿ ಶಾಂತಿಯ ವಾತಾವರಣವಿರಲು ಪೊಲೀಸರು ಕಾರಣರಾಗಿದ್ದಾರೆ ಎಂದರು‌.

ದಿಡ್ಡಿ ಓಣಿಯ ಹನುಮಂತ ದೇವಸ್ಥಾನಕ್ಕೆ ಭೇಟಿ ನೀಡಿ, ಅರ್ಚಕರಾದ ಪ್ರಕಾಶ ಬಾದ್ರಿ ಹಾಗೂ ಟ್ರಸ್ಟ್ ಕಮೀಟಿಯ ಮಂಜುನಾಥ ಶಿರೂರ ಅವರಿಂದ ದೇವಸ್ಥಾನಕ್ಕೆ ಧಕ್ಕೆ ಉಂಟಾಗಿದ್ದರ ಬಗ್ಗೆ ಮಾಹಿತಿ ಪಡೆದುಕೊಂಡರು. ಹಿಂದೂ ಮುಸ್ಲಿಂ ಎಲ್ಲರೂ ಒಂದೇ. ಪೊಲೀಸರು ನಿಮಗೆ ರಕ್ಷಣೆ ನೀಡುತ್ತಾರೆ. ನಾವು ಇದ್ದೇವೆ. ಯಾವುದೇ ಕಾರಣಕ್ಕೂ ಹೆದರಬೇಡಿ. ಹಿಂದೂ ಮುಸ್ಲಿಂ ಎಂಬ ಭೇದಭಾವ ಮಾಡದೇ ಎಲ್ಲರೂ ಸೌಹಾರ್ದತೆಯಿಂದ ಇರೋಣ ಎಂದು ಭರವಸೆ ನೀಡಿದರು.

ಸಂಜೀವಿನಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ, ಡಾ.ರವೀಂದ್ರ ಗುರವ ಅವರಿಂದ ಆಸ್ಪತ್ರೆಗೆ ಹಾನಿ ಆಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.

ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ.ಬಿ.ಗೋಪಾಲಕೃಷ್ಣ, ಡಿಸಿಪಿ ಸಾಹಿಲ್ ಬಾಗ್ಲಾ,ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಹಾಗೂ ಪ್ರಭಾರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಡಾ.ಎನ್.ಆರ್.ಪುರುಷೋತ್ತಮ, ಆಯೋಗದ ಕಾರ್ಯದರ್ಶಿ ಮೊಹಮದ್ ನಜೀರ್,ಮುಖಂಡರಾದ ಡಾ.ಎನ್.ಎಫ್. ಮೋಸಿನ್, ಕಮರ್ ಬುರಬುರಿ ಸೇರಿದಂತೆ ಇತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending