ದಿನದ ಸುದ್ದಿ
ಜಗಳೂರು| ವಿವಿಧ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಜಗಳೂರು ಪಟ್ಟಣ ಪಂಚಾಯಿತಿ ವತಿಯಿಂದ ಪ್ರಸಕ್ತ ಸಾಲಿನ ಶೇ. 24.10, 7.25 ಮತ್ತು 5 ರಷ್ಟು ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ, ಅಲ್ಪಸಂಖ್ಯಾತ ಮತ್ತು ದೈಹಿಕ ಅಂಗವಿಕಲರ ಅರ್ಹ ಫಲಾನಿಭವಿಗಳಿಂದ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವವರು ಜಗಳೂರು ಪಟ್ಟಣ ಪಂಚಾಯತಿ ವ್ಯಾಪ್ತಿಯ ಖಾಯಂ ನಿವಾಸಿಯಾಗಿರಬೇಕು.
ಶೇ. 24.10 ರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮನೆಯ ಮೇಲ್ಛಾವಣಿಯ ದುರಸ್ತಿ ಸಾಮಗ್ರಿಗಳನ್ನು ಅಥವಾ ಅವಶ್ಯಕ ಸಾಮಗ್ರಿಗಳನ್ನು ಖರೀದಿಸಲು ಸಹಾಯಧನ ಕಲ್ಪಿಸುವ ಯೋಜನೆಗೆ ಅರ್ಜಿ ಸಲ್ಲಿಸಬಹುದು. ನಿಗದಿತ ಅರ್ಜಿ ನಮೂನೆಯೊಂದಿಗೆ ಪಾಸ್‍ಪೋರ್ಟ್ ಅಳತೆಯ-2 ಭಾವಚಿತ್ರ , ಆಧಾರ್ ಕಾರ್ಡ್ ಜೆರಾಕ್ಸ್, ಚುನಾವಣಾ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ , ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಲಗತ್ತಿಸಿ ಸಲ್ಲಿಸಬೇಕು.
ಶೇ. 7.25 ರ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಫಲಾನುಭವಿಗಳು ಹಾಗೂ ಶೇ 5 ರಷ್ಟು ಯೋಜನೆಯ ದೈಹಿಕ ಅಂಗವಿಕಲರ ಫಲಾನುಭವಿಗಳಿಗೆ ಕೃತಕ ಅಂಗಜೋಡಣೆಗೆ ಸಹಾಯಧನ ನೀಡುವ ಕಲ್ಯಾಣ ಕಾರ್ಯಕ್ರಮ ಇತರೆ ಬಡವರ್ಗದ ಅಂಗವಿಕಲರು ಮತ್ತು ಪೋಲಿಯೋ ರೋಗಕ್ಕೊಳಪಟ್ಟವರಿಗೆ ಕೃತಕವಾದ ಇತರೆ ಬೇಧಿತ ಅವಯವಗಳ ಜೋಡಣೆಗೆ ತಗಲುವ ವಾಸ್ತವಿಕ ಮೊತ್ತದ ಸಹಾಯಧನ ಒದಗಿಸುವ ಯೋಜನೆಗೆ ಅರ್ಜಿ ಆಹ್ವಾನಿಸಿದ್ದು, ನಿಗದಿತ ಅರ್ಜಿ ನಮೂನೆಯೊಂದಿಗೆ ಪಾಸ್‍ಪೋರ್ಟ್ ಅಳತೆಯ 2 ಭಾವಚಿತ್ರ , ವಿಕಲಚೇತನ ಗುರುತಿನ ಚೀಟಿ, ಆಧಾರ್ ಕಾರ್ಡ್ ಜೆರಾಕ್ಸ್, ಚುನಾವಣಾ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ , ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಸಲ್ಲಿಸಬೇಕು.
ಇದನ್ನೂ ಓದಿ | ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೆಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ನಿಗದಿತ ಅರ್ಜಿ ನಮೂನೆಯನ್ನು ಪಟ್ಟಣ ಪಂಚಾಯತಿ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆ.08 ರ ಒಳಗಾಗಿ ಸಲ್ಲಿಸಬೇಕು ಎಂದು ಜಗಳೂರು ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಆರ್.ತಿಪ್ಪೇಸ್ವಾಮಿ ಹಾಗೂ ಮುಖ್ಯಾಧಿಕಾರಿ ರಾಜು ಬಣಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


