ದಿನದ ಸುದ್ದಿ
ರಾಜ್ಯಾದ್ಯಂತ ಮುಂದುವರೆದ ’ಮತದಾನ ಜಾಗೃತಿ’ ಅಭಿಯಾನ
ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸ್ವೀಪ್ ಸಮಿತಿ ಸಹಯೋಗದಲ್ಲಿ ವಿವಿಧ ಕಾರ್ಯಕ್ರಮ ಆಯೋಜನೆ ಮೂಲಕ ಜನರಲ್ಲಿ ಮತದಾನ ಮಹತ್ವ ಕುರಿತು ಅರಿವು ಮೂಡಿಸಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ಕನಳ್ಳಿ ಗ್ರಾಮದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಆಯೋಜಿಸಿದ್ದ ’ಮತದಾನ ಜಾಗೃತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಎಂದು ಹಾಸ್ಯ ಕಲಾವಿದ ಹಾಗೂ ಯಾದಗಿರಿ ಜಿಲ್ಲಾ ಚುನಾವಣಾ ಪ್ರಚಾರ ರಾಯಭಾರಿ ಬಸವರಾಜ್ ಮಹಾಮನಿ, ಈ ಚುನಾವಣೆಯಲ್ಲಿ ಶೇಕಡಾ 100ರಷ್ಟು ಮತದಾನದ ಗುರಿ ತಲುಪುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕಿದೆ.
ಮತದಾನ ಮಾಡಿ ಪ್ರಜಾಪ್ರಭುತ್ವಕ್ಕೆ ಗಟ್ಟಿ ಬುನಾದಿ ಹಾಕಬೇಕು ಎಂದರು. ಗದಗ ಜಿಲ್ಲೆಯ ರೋಣದಲ್ಲಿ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿದ ಚುನಾವಣಾ ಅಧಿಕಾರಿ ಪ್ರಶಾಂತ ವರಗಪ್ಪನವರ, ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243