Connect with us

ದಿನದ ಸುದ್ದಿ

ಮತದಾನ ; ಭಾರತ ಜಾಗತಿಕ ದಾಖಲೆ ನಿರ್ಮಾಣ..!

Published

on

ಸುದ್ದಿದಿನ ಡೆಸ್ಕ್ : ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ದೇಶದ 64.2 ಕೋಟಿ ಮತದಾರರು ಭಾಗವಹಿಸುವ ಮೂಲಕ ಭಾರತ ಜಾಗತಿಕ ದಾಖಲೆ ನಿರ್ಮಿಸಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಈ ಬಾರಿಯ ಚುನಾವಣೆಯಲ್ಲಿ 31.2 ಕೋಟಿ ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು, ಜಗತ್ತಿನಲ್ಲೇ ಗರಿಷ್ಠ ದಾಖಲೆಯಾಗಿದೆ ಎಂದರು.

ಮತದಾನದಲ್ಲಿ ಸಕ್ರಿಯವಾಗಿ ಭಾಗವಹಿಸಿದ ಎಲ್ಲ ಮತದಾರರಿಗೆ ಮುಖ್ಯ ಆಯುಕ್ತರು ಸೇರಿದಂತೆ ಚುನಾವಣಾ ಆಯೋಗದ ಸಿಬ್ಬಂದಿ ಎದ್ದುನಿಂತು ಅಭಿನಂದನೆ ಸಲ್ಲಿಸಿದರು.
ಈ ಬಾರಿ ಮತದಾನ ಮಾಡಿದ ಒಟ್ಟು ಮತದಾರರ ಸಂಖ್ಯೆ ಜಿ-7 ರಾಷ್ಟ್ರಗಳಾದ ಅಮೆರಿಕಾ, ಯುನೈಟೆಡ್ ಕಿಂಗ್‌ಡಮ್, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್ ಮತ್ತು ಕೆನಡಾ ರಾಷ್ಟ್ರಗಳ ಒಟ್ಟು ಮತದಾರರ ಸಂಖ್ಯೆಗಿAತ ಒಂದೂವರೆ ಪಟ್ಟು ಹೆಚ್ಚಿದೆ. ಅಲ್ಲದೇ, ಯೂರೋಪಿಯನ್ ಒಕ್ಕೂಟದ 27 ರಾಷ್ಟ್ರಗಳ ಒಟ್ಟು ಮತದಾರರ ಸಂಖ್ಯೆಗಿಂತ ಎರಡೂವರೆ ಪಟ್ಟು ಹೆಚ್ಚಿದೆ ಎಂದು ರಾಜೀವ್ ಕುಮಾರ್ ತಿಳಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಹಿಂಸಾಚಾರದ ಯಾವುದೇ ಗಂಭೀರ ಪ್ರಕರಣಗಳು ದಾಖಲಾಗಿಲ್ಲ. ಆದರೆ, ಸುಮರು 10 ಸಾವಿರ ಕೋಟಿ ರೂಪಾಯಿ ಹಣ ಜಪ್ತಿಯಾಗಿದ್ದು, ಕಳೆದ 2019ರ ಚುನಾವಣೆಯಲ್ಲಿ 3 ಸಾವಿರದ 500 ಕೋಟಿ ರೂಪಾಯಿ ಜಪ್ತಿಯಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ಕೇವಲ 39 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸಲಾಗಿದ್ದು, ಕಳೆದ ಲೋಕಸಭಾ ಚುನಾವಣೆಯಲ್ಲಿ 540 ಮರುಮತದಾನ ನಡೆಸಲಾಗಿತ್ತು ಎಂದರು.

ಚುನಾವಣೆ ವೇಳೆ ಸುಮಾರು 1.5 ಕೋಟಿ ಮತಗಟ್ಟೆ ಹಾಗೂ ಭದ್ರತಾ ಸಿಬ್ಬಂದಿ ಹಾಗೂ 68 ಸಾವಿರ ನಿರ್ವಹಣಾ ತಂಡಗಳನ್ನು ನಿಯೋಜನೆ ಮಾಡಲಾಗಿತ್ತು. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕುರಿತು ದಾಖಲಾದ 495 ಪ್ರಕರಣಗಳ ಪೈಕಿ ಶೇಕಡ 90 ರಷ್ಟು ದೂರುಗಳನ್ನು ಈಗಾಗಲೇ ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು.

ನಾಳೆ ನಡೆಯಲಿರುವ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಲಾಗಿದ್ದು, ಎಣಿಕೆ ಕೇಂದ್ರಗಳಲ್ಲಿ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ ಮೂರು ಹಂತಗಳ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಎಣಿಕೆ ವೇಳೆ, ಮೊದಲು ಅಂಚೆ ಮತಗಳ ಎಣಿಕೆ ನಂತರ ಇವಿಎಂ ಮತ ಎಣಿಕೆ ಮಾಡಲಾಗುವುದು ಎಂದು ತಿಳಿಸಿದರು.

ಜಮ್ಮು-ಕಾಶ್ಮೀರದಲ್ಲಿ ಈ ಬಾರಿ ಶೇಕಡ 58.58ರಷ್ಟು ಮತದಾನವಾಗಿದ್ದು, ಕಳೆದ 4 ದಶಕಗಳಲ್ಲೇ ಇದು ಗರಿಷ್ಠ ದಾಖಲೆಯಾಗಿದೆ ಎಂದ ಆಯುಕ್ತರು, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣಾ ಪ್ರಕ್ರಿಯೆಯನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮತ ಎಣಿಕೆ ಕುರಿತಂತೆ ವಿರೋಧ ಪಕ್ಷಗಳ ನಿಯೋಗ ಸಲ್ಲಿಸಿರುವ ಎಲ್ಲ ಬೇಡಿಕೆಗಳನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending