ದಿನದ ಸುದ್ದಿ
ವಿಆರ್‍ಡಬ್ಲ್ಯು ಮತ್ತು ಯುಆರ್‍ಡಬ್ಲ್ಯು ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಜಗಳೂರು, ಚನ್ನಗಿರಿ ತಾಲ್ಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿಆರ್‍ಡಬ್ಲೂ) ಹುದ್ದೆ ಹಾಗೂ ಚನ್ನಗಿರಿ ಪುರಸಭೆ ವ್ಯಾಪ್ತಿಯಲ್ಲಿ ನಗರ ಪುನರ್ವಸತಿ ಕಾರ್ಯಕರ್ತರ (ಯುಆರ್‍ಡಬ್ಲೂ) ಹುದ್ದೆಗೆ ಮಾಸಿಕ ರೂ. 6,000/-ಗಳ ಗೌರವಧನ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 18 ರಿಂದ 45 ವರ್ಷದ ವಯೋಮಾನದವರಾಗಿದ್ದು, ಎಸ್.ಎಸ್.ಎಲ್.ಸಿ. ಉತ್ತೀರ್ಣ/ ಅನುತ್ತೀರ್ಣರಾಗಿರಬೇಕು ಹಾಗೂ (ವಿಆರ್‍ಡಬ್ಲೂ) ಹುದ್ದೆಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ & (ಯುಆರ್‍ಡಬ್ಲೂ) ಹುದ್ದೆಗೆ ಆಯಾ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ವಾಸವಿರಬೇಕು. ಜ.21 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ನಮೂನೆ, ಎರಡು ಸ್ಟ್ಯಾಂಪ್ ಸೈಜ್ ಅಳತೆಯ ಭಾವಚಿತ್ರ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಸಕ್ಷಮ ಪ್ರಾಧಿಕಾರದಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ, ವಿಕಲಚೇತನರ ಗುರುತಿನಚೀಟಿ (ಯು.ಡಿ.ಐ.ಡಿ. ಕಾರ್ಡ್) ಜಾತಿ & ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್ ಸಲ್ಲಿಸಬೇಕು.
ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ: 08192-263939 ಇವರನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಜಿ.ಎಸ್ ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


