ದಿನದ ಸುದ್ದಿ

ಏ.07 ರಂದು ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಇಂಟವ್ರ್ಯೂವ್

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಇವರ ವತಿಯಿಂದ ಏ.07 ರಂದು ಬೆಳಗ್ಗೆ 10 ಗಂಟೆಗೆ, ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗಾಸಕ್ತ ಅಭ್ಯರ್ಥಿಗಳಿಗೆ ವಾಕ್ ಇನ್ ಇಂಟವ್ರ್ಯೂವ್ ಅನ್ನು ಆಯೋಜಿಸಲಾಗಿದೆ.

ವಾಕ್ ಇನ್ ಇಂಟವ್ರ್ಯೂವ್‍ನಲ್ಲಿ ಯುಕ್ತಿ ಡಾಟಾಸಾಫ್ಟ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಖಾಸಗಿ ಕಂಪನಿಯು ಭಾಗವಹಿಸುತ್ತಿದ್ದು, ಬಿ.ಇ(ಸಿ.ಎಸ್, ಇ&ಇ, ಇ&ಸಿ) ಮತ್ತು ಡಿಪ್ಲೊಮೋ (ಸಿ.ಎಸ್, ಇ&ಇ, ಇ&ಸಿ) ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಕನಿಷ್ಠ 2 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ಹೆಸರು ನೋಂದಾಯಿಸಿಕೊಂಡು, ವಾಕ್-ಇನ್ ಇಂಟವ್ರ್ಯೂವ್‍ನಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 08192-259446, 6361550016, 7406323294 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಗಿರೀಶ್ ಕೆ.ಎನ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version