ದಿನದ ಸುದ್ದಿ
ರಾಜ್ಯದ ಹಲವು ಪ್ರದೇಶಗಳಲ್ಲಿ ತಾಪಮಾನ ಏರಿಕೆ
ಸುದ್ದಿದಿನ ಡೆಸ್ಕ್ : ರಾಜ್ಯದ ಹಲವು ಪ್ರದೇಶಗಳಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಈ ಕುರಿತಂತೆ 20 ನಿರ್ವಹಣಾ ಪ್ರಾಧಿಕಾರ ಮತ್ತು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ತಂಡ ಪರಾಮರ್ಶೆ ನಡೆಸಿದೆ.
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ತಾಪಮಾನ ಏರಿಕೆಯಿಂದ ಆಗುವ ತೊಂದರೆಗಳ ಬಗ್ಗೆ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪ್ರಸ್ತುತ ಹವಾಮಾನದ ಬದಲಾವಣೆ, ತಾಪಮಾನದ ಏರಿಕೆ ಮುಂತಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ನಿರ್ದೇಶನ ನೀಡಿದರು ಎಂದು ವರದಿಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243