ದಿನದ ಸುದ್ದಿ
ಡಿ ಬಾಸ್ ನಾಯಕಿ ‘ನವ್ಯಾ ನಾಯರ್ ರ ಅದ್ಭುತ ನೃತ್ಯ’ದ ವೀಡಿಯೋ ನೋಡಿ..!
ಸುದ್ದಿದಿನ ಡೆಸ್ಕ್ : ಚಾಲೆಂಜ್ ಸ್ಟಾರ್ ದರ್ಶನ್ ಅಭಿನಯದ ‘ಗಜ’ ಸಿನೆಮಾದ ನಾಯಕಿ ನವ್ಯಾನಾಯರ್ ಅವರು ನಟನೆಯ ಜೊತೆಗೆ ಭರತನಾಟ್ಯ ನೃತ್ಯಗಾರ್ತಿಯೂ ಹೌದು. ಇವರು ಗಜ ಸಿನೆಮಾದಲ್ಲಿ ತಮ್ಮ ಅಭಿನಯದ ಮೂಲಕ ಕರ್ನಾಟಕದ ಮನೆಮಾತಾಗಿದ್ದರೂ ಕೂಡ.
ಮೂಲತಃ ಕೇರಳದವರಾದ ಇವರು ಭರತನಾಟ್ಯವನ್ನು ಚಿಕ್ಕವಸ್ಸಿನಿಂದಲೇ ಅಭ್ಯಾಸಮಾಡಿದ್ದಾರೆ. ಹಲವು ಶೋಗಳನ್ನು ಕೂಡಾ ಕೊಟ್ಟಿದ್ದಾರೆ. ಸಿನೆಮಾಕ್ಕಿಂತಲೂ ಈಗ ಇವರು ಭರತನಾಟ್ಯದ ಕಡೆಗೆ ಹೆಚ್ಚಿನ ಗಮನ ಕೊಡುತ್ತಿದ್ದಾರೆ.
ಕನ್ನಡದಲ್ಲಿ ಇವರು ಶಿವಣ್ಣ ಅಭಿನಯದ ‘ಭಾಗ್ಯದ ಬಳೆಗಾರ’ ಸಿನೆಮಾದಲ್ಲೂ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ನಂತರ ಉದ್ಯಮಿಯೊಬ್ಬರ ಜೊತೆ ವಿವಾಹವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇವರು ಒಂದು ಗಂಡು ಮಗುವಿನ ತಾಯಿಯೂ ಕೂಡ.
ಇತ್ತೀಚಿನ ಇವರ ‘ಭರತನಾಟ್ಯದ ನೃತ್ಯ ರೂಪಕ ‘ ‘ಚಿನ್ನನ್ ಚಿರು ಕಿಲಿಯೇ’ ಎಂಬ ಗೀತೆಗೆ ಅದ್ಭುತವಾದ ನೃತ್ಯಮಾಡಿದ್ದಾರೆ. ಈಗ ಅದು ತುಂಬಾ ಹಿಟ್ ಆಗಿ ಎಲ್ಲರಮೆಚ್ಚುಗೆಗೆ ಪಾತ್ರವಾಗಿದೆ.
ನೃತ್ಯದ ವೀಡಿಯೋ ನೋಡಿ.. ಲಿಂಕ್ ಮೇಲೆ ಕ್ಲಿಕ್ ಮಾಡಿ..
https://m.youtube.com/watch?feature=youtu.be&v=uCjN0EJA3n8
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಯಲ್ಲಮ್ಮನ ಸವದತ್ತಿ ಕ್ಷೇತ್ರಾಭಿವೃದ್ಧಿಗೆ ಆದ್ಯತೆ : ಸಿಎಂ ಸಿದ್ದರಾಮಯ್ಯ ಭರವಸೆ
ಸುದ್ದಿದಿನಡೆಸ್ಕ್:ಯಲ್ಲಮ್ಮನ ಗುಡ್ಡವಿರುವ ಸವದತ್ತಿ ಕ್ಷೇತ್ರಕ್ಕೆ ಪ್ರತಿವರ್ಷ ಕೋಟ್ಯಾಂತರ ಭಕ್ತಾದಿಗಳು ಭೇಟಿ ನೀಡುತ್ತಾರೆ. ಅವರಿಗೆ ಉತ್ತಮ ವಸತಿ ಹಾಗೂ ಸುಗಮ ದರ್ಶನಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಲ್ಲಮ್ಮನ ಗುಡ್ಡದಲ್ಲಿ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದರು.
ಯಲ್ಲಮ್ಮನ ಗುಡ್ಡಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ಮತ್ತು ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಗೋವಾದಿಂದಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಅವರಿಗೆ ಉತ್ತಮ ವಸತಿ ಸೌಲಭ್ಯ ಕಲ್ಪಿಸಲು ದೇವಸ್ಥಾನ ಮತ್ತು ಸುತ್ತಮುತ್ತಲಿರುವ ಸರ್ಕಾರಿ ಜಮೀನು ಒತ್ತುವರಿಯನ್ನು ನಿಯಂತ್ರಿಸಲು ತಡೆಗೋಡೆ ನಿರ್ಮಿಸಬೇಕು ಎಂದರು.
ಸವದತ್ತಿಯಲ್ಲಿ ವ್ಯಾಪಾರ ವಹಿವಾಟುದಾರರಿಗೆ ಪ್ರತ್ಯೇಕ ಜಾಗವನ್ನು ಗುರುತಿಸಬೇಕು. ಉತ್ತಮ ಸೌಲಭ್ಯ ಒದಗಿಸಿದಲ್ಲಿ, ಪ್ರವಾಸಿಗರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗಲಿದೆ. ತಿರುಪತಿ, ಧರ್ಮಸ್ಥಳ ಕ್ಷೇತ್ರಗಳ ಮಾದರಿಯಲ್ಲಿ ಸವದತ್ತಿಯಲ್ಲೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಹುಣ್ಣಿಮೆ ದಿನಗಳಲ್ಲಿ ಸವದತ್ತಿಗೆ ಚಕ್ಕಡಿಗಳಲ್ಲಿ ಜನರು ಆಗಮಿಸುತ್ತಾರೆ. ಅವರ ಜಾನುವಾರುಗಳಿಗೆ ಮೇವು ಒದಗಿಸಲು ಮೇವು ಬ್ಯಾಂಕ್ ಸ್ಥಾಪಿಸಬೇಕು. ಈ ಎಲ್ಲ ಸೌಲಭ್ಯಗಳಿಗೆ ನೆರವಾಗಲು ಮುಂದಾಗುವ ದಾನಿಗಳು ಮತ್ತು ಸಂಸ್ಥೆಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಿತರ ಸಚಿವರು, ಅಧಿಕಾರಿಗಳು ಉಪಸ್ಥಿತರಿದ್ದರು. ಸವದತ್ತಿ ಕ್ಷೇತ್ರದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ತಾರತಮ್ಯ ನೀತಿ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ : ಡಿಸಿಎಂ ಡಿ.ಕೆ.ಶಿವಕುಮಾರ್
ಸುದ್ದಿದಿನ,ಬೆಂಗಳೂರು:ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯವಾಗಿದ್ದು ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅತಿಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ ತಾರತಮ್ಯವಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹಣವನ್ನು ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ನೀಡುತ್ತಿದ್ದಾರೆ. ಆಂಧ್ರಕ್ಕಿಂತಲೂ ಕಡಿಮೆ ಹಣ ನಮಗೆ ನೀಡಿದ್ದಾರೆ ಎಂದು ಆರೋಪಿಸಿದರು.
ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮೈಸೂರು ದಸರಾ | ಅಂಬಾರಿ ಹೊತ್ತ ಅಭಿಮನ್ಯು ಜಂಬೂ ಸವಾರಿ
ಸುದ್ದಿದಿನಡೆಸ್ಕ್:ಮೈಸೂರು ದಸರಾ ಅಂಗವಾಗಿ ಶನಿವಾರ ವಿಜಯದಶಮಿಯಂದು ಅದ್ಧೂರಿ ಜಂಬೂ ಸವಾರಿ ನಡೆಯಿತು. ಅಕ್ಟೋಬರ್ 3 ರಂದು ದಸರಾ ಉದ್ಘಾಟನೆಯಾದಾಗಿನಿಂದ ಮೈಸೂರು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿದೆ. ಮೈಸೂರಿನ ಜಂಬೂಸವಾರಿಯಲ್ಲಿ 750ಕೆಜಿಯ ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ರಾಜಗಾಂಭಿರ್ಯದಿಂದ ಸಾಗಿದನು. ಈ ಉತ್ಸವವನ್ನು ಸಾವಿರಾರು ಜನರು ಕಣ್ಣು ತುಂಬಿಸಿಕೊಂಡಿದ್ದಾರೆ.
ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮಧ್ಯಾಹ್ನ 1:55ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿದರು.
ವಿಶ್ವವಿಖ್ಯಾತ ಜಂಬೂಸವಾರಿಯ ಸಲುವಾಗಿ ಅಭಿಮನ್ಯು ಆನೆ 750 ಕೆ.ಜಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ರಾಜಬೀದಿಗಳಲ್ಲಿ ಹೆಜ್ಜೆ ಹಾಕಿದನು. ಈ ಐತಿಹಾಸಿಕ ಕ್ಷಣವನ್ನು ದೇಶ- ವಿದೇಶ ಮತ್ತು ನೆರೆಹೊರೆಯ ಜಿಲ್ಲೆಯ ಲಕ್ಷಾಂತರ ಮಂದಿ ಕಣ್ಣುಂಬಿಕೊಳ್ಳಲು ರಾಜ ಬೀದಿಗಳಲ್ಲಿ ಕಿಕ್ಕಿರಿದು ಸೇರಿದ್ದರು.
ಈ ಜಂಬೂಸವಾರಿ ವೀಕ್ಷಣೆಗೆ ಅರಮನೆಯ ಆವರಣದಲ್ಲಿ 40 ಸಾವಿರ ಆಸನ ವ್ಯವಸ್ಥೆ ಮಾಡಲಾಗಿತ್ತು. ಆದರೂ ಅರಮನೆಯ ಬಳಿಕ ಚಿಕ್ಕ ಗಡಿಯಾರ, ಕೆ.ಆರ್.ಆಸ್ಪತ್ರೆ ಹಾಗೂ ಬನ್ನಿಮಂಟಪದ ರಸ್ತೆಗಳಲ್ಲಿ ಜನ ದಟ್ಟಣೆ ಹೆಚ್ಚಾಗಿದೆ. ಅಷ್ಟೇ ಅಲ್ಲದೇ ಜಂಬೂಸವಾರಿ ಸಾಗುವ ಸಮಯದಲ್ಲಿ ಸಾರ್ವಜನಿಕರು ಡಾ.ರಾಜ್ಕುಮಾರ್ ಪಾರ್ಕ್ನ ಮರಗಳ ಮೇಲೆ ಹಾಗೂ ಕಟ್ಟಡಗಳ ಮೇಲೆ ನಿಂತು ವೀಕ್ಷಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಅ.9 ರಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ6 days ago
ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ
-
ದಿನದ ಸುದ್ದಿ6 days ago
ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ವಸತಿ ಯೋಜನೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಗ್ರಾಮ ಸಭೆ ಕಡ್ಡಾಯ : ಸಚಿವ ಪ್ರಿಯಾಂಕ ಖರ್ಗೆ
-
ದಿನದ ಸುದ್ದಿ6 days ago
ಎಸ್.ಎಸ್.ಎಲ್.ಸಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ; ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನ
-
ದಿನದ ಸುದ್ದಿ6 days ago
ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ