ದಿನದ ಸುದ್ದಿ
ಭದ್ರಾ ನದಿಗೆ ನೀರು: ಎಚ್ಚರಿಕೆ ವಹಿಸಲು ಸೂಚನೆ
ಸುದ್ದಿದಿನ, ದಾವಣಗೆರೆ: 2018ನೇ ಮುಂಗಾರು ಹಂಗಾಮಿನಲ್ಲಿ ಭದ್ರಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು ಜಲಾಶಯದ ಮಟ್ಟವು ತ್ವರಿತಗತಿಯಲ್ಲಿ ಏರಿಕೆಯಾಗುತ್ತಿರುತ್ತದೆ. ಜಲಾಶಯದ ಪ್ರವಾಹ ಪರಿಸ್ಥಿತಿಯ ನಿಯಂತ್ರಣಕ್ಕಾಗಿ ಯಾವುದೇ ಸಮಯದಲ್ಲಾದರೂ ಜಲಾಶಯದಿಂದ ನೀರನ್ನು ನದಿ ಪಾತ್ರಕ್ಕೆ ಹರಿಸುವ ಸಾಧ್ಯತೆಯಿರುತ್ತದೆ.
ಆದ್ದರಿಂದ, ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು, ತೋಟಗಾರಿಕೆ ಮಾಡುವುದು ಮತ್ತು ಪಂಪ್‌ಸೆಟ್‌ಗಳಿಂದ ನೀರೆತ್ತುವುದನ್ನೂ ಇತ್ಯಾದಿಗಳನ್ನು ನಿರ್ಬಂದಿಸಲಾಗಿರುತ್ತದೆ. ಎಂದು ಬಿ.ಆರ್. ಪ್ರಾಜೆಕ್ಟ್‌ನ ಕರ್ನಾಟಕ ನೀರಾವರಿ ನಿಗಮ ನಿಯಮಿತ ಭದ್ರಾ ಯೋಜನಾ ವೃತ್ತದ ಸದಸ್ಯ ಕಾರ್ಯದರ್ಶಿಗಳು ಹಾಗೂ ಅಧೀಕ್ಷಕ ಇಂಜನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401