ದಿನದ ಸುದ್ದಿ

ಪ್ರತಿಬಾರಿ ಕೂಡ ಶಾಂತಿ ಮಂತ್ರವನ್ನು ಪಠಿಸಲು ಸಾಧ್ಯವಿಲ್ಲ : ಪ್ರಧಾನಿ ಮೋದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಭಾರತೀಯ ಸಶಸ್ತ್ರ ಪಡೆಗಳು ಮಧ್ಯರಾತ್ರಿಯ ನಂತರ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಿವೆ.

ಒಟ್ಟು ಒಂಬತ್ತು ತಾಣಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ತನ್ನ ಕ್ರಮಗಳು ಕೇಂದ್ರೀಕೃತವಾಗಿವೆ ಎಂದು ಸಚಿವಾಲಯ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿಯಿಡೀ ಆಪರೇಷನ್ ಸಿಂಧೂರವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿದರು.
ಇದೇ ವೇಳೆ ಪಾಕಿಸ್ತಾನದ ಯಾವುದೇ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಲಾಗಿಲ್ಲ. ಗುರಿಗಳ ಆಯ್ಕೆ ಮತ್ತು ಕಾರ್ಯಗತಗೊಳಿಸುವ ವಿಧಾನದಲ್ಲಿ ಭಾರತವು ಸಾಕಷ್ಟು ಸಂಯಮವನ್ನು ಪ್ರದರ್ಶಿಸಿದೆ ಎಂದು ಸಚಿವಾಲಯ ತಿಳಿಸಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ೨೫ ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಈ ದಾಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂಬ ಬದ್ಧತೆಗೆ ಸಶಸ್ತ್ರ ಪಡೆಗಳು ಬದ್ಧವಾಗಿವೆ ಎಂದು ಅದು ಹೇಳಿದೆ.

ಆಪರೇಷನ್ ಸಿಂಧೂರ್ ಅನ್ನು ಯಶಸ್ವಿಯಾಗಿ ನಡೆಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಸಶಸ್ತ್ರ ಪಡೆಗಳನ್ನು ಶ್ಲಾಘಿಸಿದ್ದಾರೆ. ಕಾರ್ಯಾಚರಣೆಯನ್ನು ಕುರಿತಂತೆ ಅವರು ನವದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಮಾಹಿತಿ ನೀಡಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಪ್ರತೀಕಾರದ ಕ್ರಮದ ಬಗ್ಗೆ ಪ್ರಧಾನಿ ವಿವರಿಸಿದರು ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಆಪರೇಷನ್ ಸಿಂಧೂರ್ ಹಿನ್ನೆಲೆಯಲ್ಲಿ ಸರ್ಕಾರವು ನಾಳೆ ಬೆಳಿಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆಯನ್ನು ಕರೆದಿದೆ. ಸಭೆಯ ಸಮಯದಲ್ಲಿ, ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ಕಾರ್ಯಾಚರಣೆಯ ಕುರಿತು ಸರ್ಕಾರ ಮಾಹಿತಿ ನೀಡಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು.

ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ರಾಷ್ಟ್ರಪತಿ, ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಿದರು ಎಂದು ತಿಳಿಸಿದ್ದಾರೆ.

ಪೆಹಲ್ಗಾಮ್ ದಾಳಿಯಲ್ಲಿ ಉಗ್ರರು ಅಮಾಯಕರ ಮೇಲೆ ದಾಳಿ ಮಾಡಿದ್ದರು. ಕೇಂದ್ರ ಸರ್ಕಾರ ಸಚಿವ ಸಂಪುಟ ತೀರ್ಮಾನ ಮಾಡಿ, ರಾಜತಾಂತ್ರಿಕ ಕ್ರಮ ತೆಗೆದುಕೊಂಡಿತ್ತು. 9 ಉಗ್ರರ ನೆಲೆಗಳ ಮೇಲೆ ದಾಳಿ ಮಾಡಲಾಗಿದೆ. ಇದರಲ್ಲಿ ಭಾರತದ ಸೈನ್ಯ ಯಶಸ್ವಿಯಾಗುವ ವಿಶ್ವಾಸವಿದೆ. ಈ ಹಿಂದೆ ಕೂಡ ದೇಶದಲ್ಲಿ ಸಾಕಷ್ಟು ಉಗ್ರರ ದಾಳಿಯಾಗಿತ್ತು. ಪ್ರತಿಬಾರಿ ಕೂಡ ಶಾಂತಿ ಮಂತ್ರವನ್ನು ಪಠಿಸಲು ಸಾಧ್ಯವಿಲ್ಲ. ಭಾರತದ ಸಿಂಧೂರ ಪಾಕ್ ಆಕ್ರಮಿತ ಕಾಶ್ಮೀರವನ್ನ ವಶಪಡಿಸಿಕೊಳ್ಳಲು ಸೂಕ್ತ ಸಮಯ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version