ರಾಜಕೀಯ
ಆಪರೇಶನ್ ಕಮಲಕ್ಕೆ ನಾವು ಕೈ ಹಾಕಿಲ್ಲ : ಬಿ.ಎಸ್.ವೈ
ಸುದ್ದಿದಿನ, ಹಾಸನ : ಬಿಜೆಪಿಯ 104 ಶಾಸಕರಿದ್ದು ಒಳ್ಳೆಯ ಕೆಲಸ ಮಾಡಲು ಸಿದ್ದರಿದ್ದೇವೆ. ಕಾಂಗ್ರೆಸ್ ಒಳಜಗಳಕ್ಕೂ ನಮಗೂ ಸಂಬಂಧವಿಲ್ಲ. ರಾಜಕೀಯ ದೊಂಬರಾಟ ಮಾಡುತ್ತ ಆರೋಪ-ಪ್ರತ್ಯಾರೋಪದಲ್ಲಿ ಸಿಎಂ ತೊಡಗಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ರಾಜ್ಯದ ಅಭಿವೃದ್ಧಿ ಮಾಡಲಿ ಎಂದು ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಮಾಜಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಆಪರೇಷನ್ ಕಮಲಕ್ಕೆ ನಾವು ಕೈಹಾಕಿಲ್ಲ. ಕುಮಾರಸ್ವಾಮಿ ಅವರು ಮಾಡಿರುವ ಆರೋಪಗಳನ್ನು ಸಾಬೀತುಪಡಿಸಲಿ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಸಿಎಂ ಕುಮಾರಸ್ವಾಮಿ ಸುಳ್ಳು ಆರೋಪಗಳನ್ನು ಮಾಡುವುದು ಬಿಟ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿ ಎಂದು ತಿರುಗೇಟು ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401