Connect with us

ರಾಜಕೀಯ

ರಾಹುಲ್ ಗಾಂಧಿ ಪ್ರಧಾನಿಯಾಗಲು ನಮ್ಮ ಅಭ್ಯಂತರವಿಲ್ಲ | ದೇವೇಗೌಡ

Published

on

ಸುದ್ದಿದಿನ ಡೆಸ್ಕ್ | ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧರಿದ್ದೇವೆ‌ ಎಂದು ಹೇಳಿದರು.

ಆದರೆ ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ನಾವು ಕಾಂಗ್ರೆಸ್ ನೊಟ್ಟಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ಮಾತುಕತೆಯನ್ನು ನಡೆಸಿಲ್ಲ ಎಂದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲೇನಾದರೂ ಯುಪಿಎ ಕೂಟ ಗೆದ್ದರೆ ರಾಹುಲ್ ಗಾಂಧಿ ಅವರು ಪ್ರಧಾನಿಯಾಗಲು ನಮ್ಮ ಒಪ್ಪಿಗೆಯಿದೆ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಸಿದ್ದು , ಡಿಕೆ ಪ್ರಮಾಣ ವಚನ ; ಗಣ್ಯಾತಿಗಣ್ಯರ ಉಪಸ್ಥಿತಿ

Published

on

ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಇಂದು ಅಸ್ತಿತ್ವಕ್ಕೆ ಬರಲಿದೆ. ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ನ ಹಿರಿಯ ಮುಖಂಡ ಸಿದ್ದರಾಮಯ್ಯ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇವರೊಂದಿಗೆ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲು ವೇದಿಕೆ ಸಿದ್ಧವಾಗಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12:30ಕ್ಕೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.

ಈ ನಡುವೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯಾಪಕ ಸಿದ್ಧತೆಗಳು ಭರದಿಂದ ಸಾಗಿವೆ. ಸಮಾರಂಭಕ್ಕೆ ರಾಜ್ಯದ ಮೂಲೆ – ಮೂಲೆಗಳಿಂದ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ಆಗಮಿಸಲಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಭದ್ರತಾ ಕಾರ್ಯಕ್ಕಾಗಿ ಒಂದು ಸಾವಿರದ 500 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಪಶ್ಚಿಮ ಬಂಗಾಳದ ಟಿಎಂಸಿ ಉಪನಾಯಕ ಡಾ.ಕಕೋಲಿ ಘೋಷ್ ದಸ್ತಿದಾರ್, ಬಿಹಾರದ ಮುಖ್ಯಮಂತ್ರಿ ನಿತಿಶ್ ಕುಮಾರ್, ನ್ಯಾಷನಲ್ ಕಾನ್ಪರೆನ್ಸ್ ಪಕ್ಷದ ಅಧ್ಯಕ್ಷ ಫಾರುಕ್ ಅಬ್ದುಲ್ಲಾ, ಸಿಪಿಐಎಂ ಮುಖಂಡ ಸೀತಾರಾಮ್ ಯಚೂರಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನಿಸಿದ್ದಾರೆ.

ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್‌ವೀರ್ ಸಿಂಗ್ ಸುಖು ಅವರನ್ನೂ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ.

ಈ ನಡುವೆ, ನೂತನ ಸಚಿವ ಸಂಪುಟ ಸೇರ್ಪಡೆಗೆ ಕಾಂಗ್ರೆಸ್ ವಲಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಸಂಭಾವ್ಯ ಸಚಿವರ ಪಟ್ಟಿಗೆ ಕಾಂಗ್ರೆಸ್ ವರಿಷ್ಠರಿಂದ ಅನುಮೋದನೆ ಪಡೆಯಲು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ನಾಯಕರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಿದ್ದರಾಮಯ್ಯ ಗೆ ಸಿಎಂ ಪಟ್ಟ ; ಡಿಕೆಶಿ ಡಿಸಿಎಂ

Published

on

ಸುದ್ದಿದಿನ, ದೆಹಲಿ : ಕಾಂಗ್ರೆಸ್ ವರಿಷ್ಠರ ಜತೆಗೆಗಿನ ಹಲವು ಸುತ್ತಿನ ಮಾತುಕತೆಯ ಮೂಲಕ ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ.

ಮೇ 20ರಂದು ಮಧ್ಯಾಹ್ನ12:30ಕ್ಕೆ ಬೆಂಗಳೂರಿನಲ್ಲಿ ನೂತನ ಸಿಎಂ ಮತ್ತು ಡಿಸಿಎಂಗಳ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.ಕಾಂಗ್ರೆಸ್ ನ ರಾಜ್ ದೀಪ್ ಸರ್ ದೇಸಾಯಿ ಟ್ವೀಟ್ ಮೂಲಕ ತಿಳಿಸಿದ್ದು, ಎಸಿಸಿ ಮಲ್ಲಿಕಾರ್ಜುನ ಖರ್ಗೆ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ; ನವಿಲೇಹಾಳಿನಲ್ಲಿ 30 ಅಡಿ ಎತ್ತರದ ಸಿದ್ದರಾಮಯ್ಯ ಫ್ಲೆಕ್ಸ್ ಹಾಕಿ ಸಂಭ್ರಮ

Published

on

ಸುದ್ದಿದಿನ, ದಾವಣಗೆರೆ : ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಡೆಯುವುದರ ಮೂಲಕ ಸ್ಪಷ್ಟ ಬಹುಮತ ಪಡೆದ ಹಿನ್ನೆಲೆಯಲ್ಲಿ ಚನ್ನಗಿರಿ ತಾಲೂಕಿನ ನವಿಲೇಹಾಳು ಗ್ರಾಮದಲ್ಲಿ ಮೂವತ್ತು ಅಡಿಯ ಸಿದ್ದರಾಮಯ್ಯ ಅವರ ಫ್ಲೆಕ್ಸ್ ಹಾಕುವುದರ ಮೂಲಕ ಅಭಿಮಾನಿಗಳು ಸಂಭ್ರಮಿಸಿದರು.

ಮಾಯಕೊಂಡ ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್. ಬಸವಂತಪ್ಪ ಅವರು 70346 ಮತಗಳನ್ನು ಪಡೆದು ಭರ್ಜರಿ ಜಯಭೇರಿ ಭಾರಿಸಿದ ಸಂದರ್ಭ ಊರಿನ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬಸವಂತಪ್ಪ ಹಾಗೂ ಸಿದ್ದರಾಮಯ್ಯ ಅವರ ಫೋಟೋ ಹಿಡಿದು ಮೆರವಣಿಗೆ ಮೂಲಕ ಸಂಭ್ರಮದಲ್ಲಿ ತೊಡಗಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ದಾವಣಗೆರೆ ನೇತ್ರಾಲಯದ ಜೊತೆ ವಿಲೀನಗೊಂಡ ಡಾ. ಅಗರವಾಲ್ಸ್ ಗ್ರೂಪ್ ಆಫ್ ಐ ಹಾಸ್ಪಿಟಲ್ಸ್

ಸುದ್ದಿದಿನ,ದಾವಣಗೆರೆ : ಡಾ. ಸುನೀಲ್ ಜಿ ಸ್ಥಾಪಿಸಿದ ಕಣ್ಣಿನ ಆಸ್ಪತ್ರೆ ದಾವಣಗೆರೆ ನೇತ್ರಾಲಯವು ಡಾ. ಅಗರವಾಲ್ಸ್ ಐ ಹಾಸ್ಪಿಟಲ್ಸ್ ಜೊತೆ ವಿಲೀನವಾಗಿದ್ದು, ರಾಜ್ಯದ  18ನೇ ಕೇಂದ್ರವಾಗಿದೆ. 4200...

ದಿನದ ಸುದ್ದಿ2 days ago

ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 1600 ಕ್ಕೂ ಅಧಿಕ ಕಿರಿಯ ಗುಮಾಸ್ತ, ಕಿರಿಯ ಸಹಾಯಕ ಕಾರ್ಯದರ್ಶಿ ಮತ್ತು ದತ್ತಾಂಶ ನಮೂದಕ ಕಾರ್ಯನಿರ್ವಾಹಕ...

ಭಾವ ಭೈರಾಗಿ3 days ago

ಕವಿತೆ | ಬುದ್ಧ ನಗುತ್ತಾನೆ..!

ರಶ್ಮಿಪ್ರಸಾದ್ (ರಾಶಿ) ಬೋಧಿವೃಕ್ಷದಡಿಯಲಿ ಕುಳಿತು ಬೋಧನೆಯ ನೆಲೆಯಲಿ ನಿಂತರಷ್ಟೇ ನಿನ್ನಂತಾಗುವೆವೆಂಬ ಮೌಢ್ಯವ ಕಂಡು ಬುದ್ಧ ಇನ್ನೂ ನಗುತ್ತಲೇ ಇದ್ದಾನೆ… ನಮ್ಮೊಳಗೆಂದೂ ನೀನಿಲ್ಲ ಬುದ್ಧ.! ಸಕಲವೈಭೋಗಗಳನೂ ತ್ಯಜಿಸಿ ಮೋಹದಾ...

ದಿನದ ಸುದ್ದಿ1 week ago

ಸಿದ್ದು , ಡಿಕೆ ಪ್ರಮಾಣ ವಚನ ; ಗಣ್ಯಾತಿಗಣ್ಯರ ಉಪಸ್ಥಿತಿ

ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಇಂದು ಅಸ್ತಿತ್ವಕ್ಕೆ ಬರಲಿದೆ. ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ನ ಹಿರಿಯ ಮುಖಂಡ ಸಿದ್ದರಾಮಯ್ಯ ಇಂದು ಪ್ರಮಾಣ ವಚನ...

ದಿನದ ಸುದ್ದಿ1 week ago

ಮುಂಗಾರು ಪ್ರವೇಶ ವಿಳಂಬ

ಸುದ್ದಿದಿನ ಡೆಸ್ಕ್ : ನೈರುತ್ಯ ಮುಂಗಾರು ಪ್ರವೇಶ ಈ ವರ್ಷ ಸಾಮಾನ್ಯ ದಿನಕ್ಕಿಂತ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....

ದಿನದ ಸುದ್ದಿ1 week ago

ಸಿದ್ದರಾಮಯ್ಯ ಗೆ ಸಿಎಂ ಪಟ್ಟ ; ಡಿಕೆಶಿ ಡಿಸಿಎಂ

ಸುದ್ದಿದಿನ, ದೆಹಲಿ : ಕಾಂಗ್ರೆಸ್ ವರಿಷ್ಠರ ಜತೆಗೆಗಿನ ಹಲವು ಸುತ್ತಿನ ಮಾತುಕತೆಯ ಮೂಲಕ ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ. ಮೇ 20ರಂದು...

ದಿನದ ಸುದ್ದಿ2 weeks ago

ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ; ನವಿಲೇಹಾಳಿನಲ್ಲಿ 30 ಅಡಿ ಎತ್ತರದ ಸಿದ್ದರಾಮಯ್ಯ ಫ್ಲೆಕ್ಸ್ ಹಾಕಿ ಸಂಭ್ರಮ

ಸುದ್ದಿದಿನ, ದಾವಣಗೆರೆ : ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಡೆಯುವುದರ ಮೂಲಕ ಸ್ಪಷ್ಟ ಬಹುಮತ ಪಡೆದ ಹಿನ್ನೆಲೆಯಲ್ಲಿ ಚನ್ನಗಿರಿ ತಾಲೂಕಿನ ನವಿಲೇಹಾಳು ಗ್ರಾಮದಲ್ಲಿ ಮೂವತ್ತು ಅಡಿಯ ಸಿದ್ದರಾಮಯ್ಯ...

ದಿನದ ಸುದ್ದಿ2 weeks ago

ಹಲವು ವರ್ಷಗಳ ಬಳಿಕ ಕಾಂಗ್ರೆಸ್ ಗೆ ಅತಿ ಹೆಚ್ಚು ಸ್ಥಾನ ; ಯಾವ ವರ್ಷಗಳಲ್ಲಿ ಎಷ್ಟು..?

ಸುದ್ದಿದಿನ ಬೆಂಗಳೂರು : ಹಲವು ವರ್ಷಗಳ ಬಳಿಕ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಹೊಸ ಹುಮ್ಮಸ್ಸು ಪಡೆದಿದೆ. 1989ರಲ್ಲಿ 178ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಭರ್ಜರಿ...

ಭಾವ ಭೈರಾಗಿ2 weeks ago

ಕವಿತೆ | ನಿನ್ನ ಮಗನ ಕೊಂದರು…

ಮೂಲ : ಬ್ರೆಕ್ಟ್, ಅನುವಾದ : ಸಿದ್ಧಲಿಂಗಯ್ಯ “ಓ ಗೆಳತಿ ವ್ಲಾಸೋವ ನಿನ್ನ ಮಗನ ಕೊಂದರು ಹೋರಾಟದ ಜೀವಿ ಒಡನಾಡಿ ಬಂಧುವನ್ನು ನಿನ್ನ ಮಗನ ಕೊಂದರು. ಅವನಂಥ...

ದಿನದ ಸುದ್ದಿ2 weeks ago

ಚುನಾವಣೆ | ದಾವಣಗೆರೆ ಜಿಲ್ಲೆಯ ಕ್ಷೇತ್ರವಾರು ಕಂಪ್ಲೀಟ್ ಡೀಟೆಲ್ಸ್

ಸುದ್ದಿದಿನ,ದಾವಣಗೆರೆ : ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯ7 ಕ್ಷೇತ್ರಗಳಿಂದ 6 ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಒಬ್ಬರು ಬಿಜೆಪಿಯಿಂದ ಜಯ ಗಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ...

Trending