ದಿನದ ಸುದ್ದಿ
ಹವಾಮಾನ ವರದಿ
ಸುದ್ದಿದಿನ ಡೆಸ್ಕ್ : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಕಡೆ, ಕರಾವಳಿ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಮಳೆಯಾಗಿದೆ. ಹಾವೇರಿ ಜಿಲ್ಲೆ, ಹಿರೇಕೆರೂರುನಲ್ಲಿ ಅತಿ ಹೆಚ್ಚು 8 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಹಾಸನ 7, ಹುಂಚದ ಕಟ್ಟೆ, ಚೆನ್ನರಾಯ ಪಟ್ಟಣ ತಲಾ 6, ಮುಂಡಗೋಡು, ಹರಪ್ಪನಹಳ್ಳಿ, ತ್ಯಾಗರ್ತಿ, ಬೆಂಗಳೂರು ನಗರದಲ್ಲಿ ತಲಾ 5 ಸೆಂಟಿ ಮೀಟರ್ ಮಳೆಯಾಗಿದೆ.
ಕಲಬುರಗಿಯಲ್ಲಿ 41.1ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ ದಾಖಲಾಗಿದೆ. ಮುನ್ಸೂಚನೆಯಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ನಿರೀಕ್ಷಿತ. ಬೆಂಗಳೂರು ಹಾಗೂ ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಮಳೆ ಸಂಭವ. ಗರಿಷ್ಠ 32 ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243