Connect with us

ಬಹಿರಂಗ

ರಷ್ಯಾ ಮತ್ತು ಉಕ್ರೇನ್ ನಡುವಣ ಸಂಘರ್ಷವೇನು..?

Published

on

  • ರತ್ನ ಮಾಳಮ್ಮ,ಇತಿಹಾಸ ತಜ್ಞೆ

1991 ರಲ್ಲಿ ಸೋವಿಯತ್ ಒಕ್ಕೂಟವು ಕುಸಿತಗೊಂಡಾಗ ಉಕ್ರೇನ್ ರಷ್ಯಾದಿಂದ ಬೇರ್ಪಟ್ಟು ಸ್ವತಂತ್ರ ರಾಷ್ಟ್ರವಾಗಿ ಘೋಷಿಸಿಕೊಂಡಿತು.ಪಕ್ಕದಲ್ಲೇ ಇದ್ದ ಕ್ರೈಮಿಯಾ (ಭೂಮಿಯ ಮೂರು ಭಾಗವು ನೀರಿನಿಂದ ಆವ್ರತವಾಗಿದ್ದ ಪ್ರದೇಶ) ಎಂಬ ಪರ್ಯಾಯ ದ್ವೀಪವು ಉಕ್ರೈನ್ ಬಳಿ ಉಳಿದುಕೊಂಡಿತ್ತು. 2014ರಲ್ಲಿ ಕ್ರೈಮಿಯಾದ ಗಡಿ ಭಾಗಗಳಲ್ಲಿ ಅನಿರೀಕ್ಷಿತವಾಗಿ ರಷ್ಯಾದ ಸಾವಿರಾರು ಸೈನಿಕರು ಸೇನಾ ಟ್ಯಾಂಕರುಗಳೊಂದಿಗೆ ಬಂದು ಅದನ್ನು ಅಧಿಕೃತವಾಗಿ ರಷ್ಯಾಕ್ಕೆ ಸೇರ್ಪಡೆಗೊಳಿಸಿತು.ಮತ್ತು ದ್ವೀಪದ ಭೂ ಭಾಗದಲ್ಲಿ ತಮ್ಮ ಇರುವಿಕೆಯನ್ನು ಭದ್ರಗೊಳಿಸಲು ಪರಮಾಣುವಿನ ಸ್ಥಾವರಗಳನ್ನು ಸ್ಥಾಪಿಸಿತು.

ಉಕ್ರೈನಿನ ಜನಸಂಖ್ಯಾ ಮತ್ತು ಭೌಗೋಳಿಕ ಸಂಯೋಜನೆಯು ಈಗಿನ ಸಮಸ್ಯೆಗಳಿಗೆ ಮುಖ್ಯ ಕಾರಣವಾಗಿದೆ. ಪ್ರಸ್ತುತ ಉಕ್ರೇನ್ ಆಂತರಿಕವಾಗಿ ಪೂರ್ವ ಉಕ್ರೇನ್ (ಡೊನ್ಬಾಸ್ ಪ್ರದೇಶ) ಮತ್ತು ಪಶ್ಚಿಮ ಉಕ್ರೇನ್ ಎಂಬ ಪ್ರತ್ಯೇಕ ಪ್ರದೇಶಗಳಾಗಿ ವಿಂಗಡಣೆಯಾಗಿದೆ. ಪ್ರತ್ಯೇಕವಾದಿಗಳು ಪೂರ್ವ ಡೊನ್ಬಾಸಿನ ಡೊನೆಟ್ಸ್ಕ್ ಮತ್ತು ಲುಹಾನ್ಸ್ಕ್ ಪ್ರದೇಶಗಳಲ್ಲಿ ಹಂಚಿಕೆಯಾಗಿದ್ದಾರೆ.
ಪ್ರಸ್ತುತ ಸಂಘರ್ಷ ಹೆಚ್ಚುತ್ತಿರುವ ಪೂರ್ವ ಡೊನ್ಬಾಸ್ ಪ್ರದೇಶದ ಮೇಲೆ ರಷ್ಯಾ ತನ್ನ ಪ್ರಭಾವವನ್ನು ಕ್ರೋಢೀಕರಿಸಲು ಪ್ರಯತ್ನಿಸುತ್ತಿದೆ.

ಪೂರ್ವ ಪ್ರದೇಶದ ಜನರು ಬಹುತೇಕ ರಷ್ಯನ್ ಭಾಷೆಯನ್ನು ಮಾತಾನಾಡುವವರು, ರಷ್ಯಾಕ್ಕೆ ಅತ್ಯಂತ ಹತ್ತಿರದಲ್ಲಿರುವವರು ಮತ್ತು ರಷ್ಯಾದೊಂದಿಗೆ ಬಲವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಹೊಂದಿದ್ದಾರೆ. ಹಾಗಾಗಿ ಈ ಪ್ರದೇಶದಲ್ಲಿನ ರಷ್ಯಾದ ಪರ ಗುಂಪುಗಳು ರಷ್ಯಾವನ್ನು ಸೇರಲು ಬಯಸುತ್ತಿವೆ.

ಅತೀ ಹೆಚ್ಚಾಗಿ ಉಕ್ರೇನಿಯನ್ ಭಾಷೆಯನ್ನು ಮಾತನಾಡುವ, ಯುರೋಪಿಯನ್ ತತ್ವಶಾಸ್ತ್ರದಲ್ಲಿ ನಂಬಿಕೆಯಿರುವ ಪಶ್ಚಿಮದ ಉಕ್ರೇನಿಯನ್ನರು ಸ್ವತಂತ್ರ ಉಕ್ರೇನಿಗಳಾಗಿರಲು ಬಯಸುತ್ತಿದ್ದಾರೆ.ಇವರನ್ನು ಮೂಲ ಉಕ್ರೇನಿಗಳು ಎಂದೂ ಹೇಳಬಹುದು.

ಸೋವಿಯತ್ ಬಿಕ್ಕಟ್ಟಿಗಿಂತ ಮುಂಚೆ ದೀರ್ಘಕಾಲದವರೆಗೆ ‘ಉಕ್ರೇನ್’ ರಷ್ಯಾ ಸಾಮ್ರಾಜ್ಯಕ್ಕೆ ಒಳಪಟ್ಟಿದ್ದರಿಂದ ರಷ್ಯಾ ಮತ್ತು ಉಕ್ರೇನ್ ಒಂದೇ ಎಂದು ರಷ್ಯನ್ನರು ಭಾವಿಸುತ್ತಿದ್ದಾರೆ.
ರಷ್ಯಾ ವಸಾಹತುಶಾಹಿ ಇತಿಹಾಸದ ಆಧಾರದ ಮೇಲೆ ಉಕ್ರೇನಿನ ಮೇಲೆ ಹಕ್ಕು ಸಾಧಿಸಲು ಮುಂದಾಗುತ್ತಿರುವುದು ಸರಿಯಲ್ಲವೆಂದು ಇತರ ದೇಶಗಳು ಅಭಿಪ್ರಾಯ ವ್ಯಕ್ತಪಡಿಸುತ್ತಿವೆ; ಇದು ಇಂದಿನ ಬ್ರಿಟನ್ ಭಾರತವನ್ನು ತಮ್ಮದು ಎಂದು ಹೇಳಿಕೊಳ್ಳುವಂತಿದೆ. ರಷ್ಯಾ 2014 ರಲ್ಲಿ ಕ್ರೈಮಿಯಾವನ್ನು ಹೇಗೆ ವಿವಾದಾತ್ಮಕವಾಗಿ ಸ್ವಾಧೀನಪಡಿಸಿಕೊಂಡಿದೆಯೋ ಅದೇ ರೀತಿಯಲ್ಲಿ ಉಕ್ರೇನಿನ ಪೂರ್ವ ಭಾಗವನ್ನು ವಶಪಡಿಸಿಕೊಳ್ಳಲು ಯತ್ನಿಸುತ್ತಿವೆ. ಕ್ರೈಮಿಯಾ ನೆನಪಿದೆಯೇ? ಉಕ್ರೇನಿನ ಭಾಗವಾಗಿದ್ದ ಪರ್ಯಾಯ ದ್ವೀಪ!

ರಷ್ಯಾ ಉಕ್ರೇನನ್ನು ವಿರೋಧಿಸಲು ಇನ್ನೊಂದು ಪ್ರಮುಖ ಕಾರಣ ಉಕ್ರೇನ್ ‘NATO’ (North Atlantic Treaty Organization)ವನ್ನು ಸೇರಲು ಬಯಸುತ್ತಿವೆ.
NATO 28 ಐರೋಪ್ಯ ರಾಷ್ಟ್ರಗಳು ಮತ್ತು 2 ಉತ್ತರ ಅಮೇರಿಕಾ ರಾಷ್ಟ್ರಗಳನ್ನು ಒಳಗೊಂಡ ಅಂತರಸರ್ಕಾರಿ ಮಿಲಿಟರಿ ಮೈತ್ರಿ ಒಕ್ಕೂಟವಾಗಿದೆ. ರಷ್ಯಾವೂ ಈ ಒಕ್ಕೂಟವನ್ನು ಅತ್ಯಂತ ಕಟುವಾಗಿ ವಿರೋಧಿಸುತ್ತಿವೆ. ತನ್ನಿಂದ ವಿಭಜನೆಗೊಂಡು ಪ್ರತ್ಯೇಕ ರಾಷ್ಟ್ರವಾಗಿರುವ ಉಕ್ರೇನ್ NATO ಒಕ್ಕೂಟಕ್ಕೆ ಸೇರುವುದು ರಷ್ಯಾಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.ಈ ಎಲ್ಲಾ ಕಾರಣಗಳಿಂದ ರಷ್ಯಾವೂ ಉಕ್ರೇನಿನ ಮೇಲೆ ಯುದ್ಧ ಸಾರಿವೆ.

ಮಾತ್ರವಲ್ಲ ರಷ್ಯಾ ಜಗತ್ತಿನ ಇತರ ದೇಶಗಳಿಗೆ ಉಕ್ರೇನಿಗೆ ಸಹಾಯಕವಾಗಿ ನಿಲ್ಲಬಾರದು ಎಂದು ತಾಕೀತು ಮಾಡಿದೆ. ಸಹಾಯಕ್ಕಾಗಿ ಬರುವ ದೇಶಗಳ ಮೇಲೂ ತಾವು ಯುದ್ಧ ಸಾರುವುದಾಗಿ ಘೋಷಿಸಿದೆ. ಅತ್ಯಂತ ಹೆಚ್ಚು ಪರಮಾಣುವನ್ನು ಹೊಂದಿರುವ ರಷ್ಯಾವನ್ನು ಎದುರು ಹಾಕಲು ಇತರ ದೇಶಗಳು ಹಿಂದೇಟು ಹಾಕುತ್ತಿವೆ. ಒಂದು ವೇಳೆ ಇತರ ದೇಶಗಳಿಗೆ ಉಕ್ರೇನ್ ಪರವಾಗಿ ಹೋದರೆ ಜಗತ್ತು ಮೂರನೇ ಮಹಾಯುದ್ಧಕ್ಕೆ ಸಾಕ್ಷಿಯಾಗಬಹುದು ಎಂಬ ಭಯವೂ ಒಂದು ಕಾರಣವಾಗಿರಬಹುದು.

ಒಟ್ಟಾರೆ ಯುದ್ಧವು ರಕ್ತಪಾತಗಳನ್ನು ಹರಿಸುತ್ತಿವೆ,ಹಲವರನ್ನು ಅನಾಥರನ್ನಾಗಿಸುತ್ತಿವೆ. ಯುದ್ಧಗಳು ಕೊನೆಗೊಳ್ಳಲಿ ಜಗತ್ತು ಶಾಂತಿಯಿಂದಿರಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

Published

on

bengaluru-koodlugate-snn-raj-eternia-18-floor-building-demolition
ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ


ಸುದ್ದಿದಿನ,ಬೆಂಗಳೂರು:
ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.

₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ

ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ

ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್‌ ಅಪಾರ್ಟ್‌ಮೆಂಟ್‌ ನಿರ್ದೇಶಕ ಅನೂಜ್‌ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.

ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣ

ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್‌ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.

ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

Continue Reading

ದಿನದ ಸುದ್ದಿ

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

Published

on

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.

ಹೈಲೈಟ್ಸ್

  • ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಶಂಕಿತ ಡ್ರೋನ್ ಹಾರಾಟ
  • 🇵🇰 ಡ್ರೋನ್ ಪಾಕಿಸ್ತಾನದ ದಿಕ್ಕಿಗೆ ವಾಪಸ್ ತೆರಳಿದ ಶಂಕೆ
  • ಡ್ರೋನ್‌ನಿಂದ ವಸ್ತುಗಳನ್ನು ಕೆಳಗೆ ಹಾಕಲಾಗಿದೆಯೇ ಎಂದು ಶೋಧ
  • ಉಧಂಪುರ, ಕಥುವಾ, ರಾಜೌರಿಯಲ್ಲಿ ಜಂಟಿ ಸರ್ಚ್ ಆಪರೇಷನ್
  • ಶಸ್ತ್ರಸಜ್ಜಿತ ವ್ಯಕ್ತಿಗಳ ಮಾಹಿತಿ ಹಿನ್ನೆಲೆ ರಾಜೌರಿಯಲ್ಲೂ ಹೈ ಅಲರ್ಟ್

http://Visit : www.suddidina.com

ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್

ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ

ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.

ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.

ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ

ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಹೆಚ್ಚಿದ ಕಣ್ಗಾವಲು

ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.

ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

Continue Reading

ದಿನದ ಸುದ್ದಿ

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

Published

on

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

  • ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
  • ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
  • NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
  • “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP 

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

http://Visit : www.suddidina.com

ಇಂಡಿಯಾ ಗೇಟ್‌ನಿಂದ ಮೆರವಣಿಗೆ

ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.

ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’

ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.

“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.

“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ” 

  • CJP ಆರೋಪ

ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ

ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.

ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.

ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

Continue Reading

Trending