ಬಹಿರಂಗ
ಬಂಗಾಳದ ಕತೆಯೇನು..?
ಭಾರತದ ಅಷ್ಟೆಲ್ಲಾ ರಾಜ್ಯಗಳ ನಡುವೆ ಕನ್ನಡದವರಿಗೆ ಮಾನಸಿಕವಾಗಿ ಹತ್ತಿರ ರಾಜ್ಯವೆಂದರೆ ಬಂಗಾಳವೇ. ಗಳಗನಾಥ, ಬಿ.ವೆಂಕಟಾಚಾರ್ಯ, ಕುವೆಂಪು, ಬೇಂದ್ರೆ, ಡಿವಿಜಿ,ಗೋಕಾಕ, ಎ ಆರ್ ಕೃಷ್ಣಶಾಸ್ತ್ರಿ, ಅವರಂತ ಮಹಾ ಲೇಖಕರ ಮೂಲಕ ನಮಗೆ ರಾಮಕೃಷ್ಣ ಪರಮಹಂಸ, ಬಂಕಿಂಚಂದ್ರ, ನಜುರಲ್ ಇಸ್ಲಾಂ, ಠಾಗೋರ್, ವಿವೇಕಾನಂದ, ಅರಬಿಂದೋ, ಶರಶ್ಚಂದ್ರ, ಮಹಾಶ್ವೇತಾ ದೇವಿ, ಮೊದಲಾದವರು ಕನ್ನಡ ಚಿಂತನೆಯ ಭಾಗವಾದರು.
ಆರ್ಯಸಮಾಜ, ಬ್ರಹ್ಮ ಸಮಾಜ, ರಾಮಕೃಷ್ಣ ಮಿಶನ್ ಗಳು ಒಂದು ಕಾಲಕ್ಕೆ ಕನ್ನಡ ಸಮಾಜವನ್ನೂ ಪ್ರಗತಿಗಾಮಿಯಾಗಿಸಲು ಯತ್ನಿಸಿದ್ದುವು. ಅಪರ್ಣಾ ಸೇನ್, ರಿತುಪರ್ಣಾ ಘೋಷ್ ಮೃಣಾಲ್ ಸೇನ್, ಸತ್ಯಜಿತ್ ರಾಯ್, ರಿತ್ವಿಕ್ ಘಟಕ್, ಉತ್ಪಲಾ ದತ್ ಮೊದಲಾದ ನಿನೇಮಾ ನಿರ್ದೇಶಕರು ಕನ್ನಡಿಗರ ನೆನಪಿನ ಭಾಗವೇ ಆಗಿದ್ದಾರೆ. ಕರ್ನಾಟಕ ವಾರ್ತಾ ಇಲಾಖೆಯಲ್ಲಿ ರವೀಂದ್ರನಾಥ್ ಠಾಗೋರರು ನಿರ್ದೇಶಕರೇ ಆಗಿದ್ದರು!.
ಕನ್ನಡದ ಈಶ್ವರಚಂದ್ರ ವಿದ್ಯಾಸಾಗರರು ಈಗ ಸುಪ್ರಿಂ ಕೋರ್ಟಿನಲ್ಲಿ ವಕೀಲರು. ಎಷ್ಟೊಂದು ಪ್ರಭಾವ! ಬಂಗಾಳದ ಬಾವುಲ್ ಹಾಡುಗಳಿಗೂ, ಪುರುಲಿಯಾದ ಚಾವು ನೃತ್ಯಕ್ಕೂ ಮನಸೋಲದವರುಂಟೇ? ಬಿಷ್ಣುಪುರದ ಟೆರಕೋಟಾ ಜಗತ್ ಪ್ರಸಿದ್ಧವಾಗಿದೆ. ( ಚಿತ್ರ ನೋಡಿ). ಜೆಮಿನಿ ರಾಯ್ ಅತ್ಯದ್ಭುತ ಕಲಾವಿದ. ದುರ್ಗಾ ಪೂಜ ಬಂಗಾಳಿಗಳ ಅಸ್ಮಿತೆಯ ಸಂಕೇತ.
ಕರಾವಳಿ ಕರ್ನಾಟಕದಿಂದ ಹೋಗಿದ್ದ ಬಲ್ಲಾಳ ಸೇನ ಎಂಬವನು 1160 ರ ಸುಮಾರಿನಲ್ಲಿ ಒರಿಸ್ಸಾ, ಬಂಗಾಳವನ್ನು ಆಳಿದ್ದನ್ನು ಬಂಗಾಳಿಗಳೂ ಹೆಮ್ಮೆಯಿಂದ ನೆನಸಿಕೊಳ್ಳುತ್ತಾರೆ. ಐಶ್ವರ್ಯ ರಾಯ್ ನಮ್ಮವರು ಎಂದು ಹೇಳಿಕೊಂಡು ಓಡಾಡುತ್ತಿರುವ ಬಂಗಾಳಿಯರಿಗೆ ಅವರು ರಾಯ್ ಅಲ್ಲ ಮಾರಾಯರೇ, ರೈ ಅಂತ ಹೇಳಿ ಅವರಿಗೆ ತುಳು ಕೇಳಿಸುವುದು ನನ್ನ ನೂರಾರು ಕೆಲಸಗಳಲ್ಲಿ ಒಂದು. ಬಂಗಾಳಿ ಕಾಟನ್ ಸೀರೆಯನ್ನು ಇಷ್ಟ ಪಡದ ಕನ್ನಡತಿಯರು ಯಾರಿದ್ದಾರೆ?
ಬಂಗಾಳ ಹೆಸರು ದ್ರಾವಿಡ ಮೂಲದ್ದು ಎನ್ನಲಾಗುತ್ತಿದೆ. ಬಂಗ ( ಕರಾವಳಿಯ ಬಂಗರನ್ನು ನೆನಸಿಕೊಳ್ಳಿ) ಎಂಬ ದ್ರಾವಿಡ ಬುಡಕಟ್ಟು ಕ್ರಿಸ್ತ ಪೂರ್ವ 1000 ವರ್ಷಗಳ ಹಿಂದೆ ಅಲ್ಲಿತ್ತಂತೆ!. ಸಂಸ್ಕೃತ ಪಠ್ಯಗಳಲ್ಲಿ ಇದು ವಂಗ ( ಅಂಗ, ವಂಗ, ಕಳಿಂಗ..) ದೇಶ ಎಂದು ಕರೆಯಿಸಿಕೊಂಡಿದೆ. ಕ್ರಿಸ್ತಪೂರ್ವ 100ರ ಸುಮಾರಿನ ಗ್ರೀಕ್ ಪಠ್ಯಗಳು ಈಗಿನ ಬಂಗಾಳವನ್ನು ಗಂಗಾರಿದೈ ಎಂದು ಕರೆದಿವೆ. ಬಂಗಾಳಕ್ಕಿದ್ದ ಕಡಲ ಸಂಪರ್ಕವು ಅದನ್ನು ವಿಶ್ವದ ಇತರ ಭಾಗಗಳಿಗೆ ಸುಲಭವಾಗಿ ಜೋಡಿಸಿತ್ತು.
ಈಗ ಸುಮಾರು 10 ಕೋಟಿ ಜನರಿರುವ ಬಂಗಾಳದ ಚರಿತ್ರೆಯೂ ಸುದೀರ್ಘವಾದುದು. ಮೌರ್ಯರು, ಮಗಧರು, ಗುಪ್ತರು, ಪಾಲರು, ಗೌಡರು, ಸೇನರು, ಅದನ್ನಾಳಿದ್ದಾರೆ. 1021ರಿಂದ 1023ರ ವರೆಗೆ ದಕ್ಷಿಣದ ರಾಜೇಂದ್ರ ಚೋಳನೂ ಬಂಗಾಳದ ಕೆಲವು ಭಾಗಗಳನ್ನು ಆಳಿದ್ದ. 12ನೇ ಶತಮಾನದಲ್ಲಿ ಇಸ್ಲಾಂ ಬಂಗಾಳವನ್ನು ಪ್ರವೇಶಿಸಿತು.
1757ರ ಪ್ರಖ್ಯತವಾದ ಪ್ಲಾಸೀ ಕದನದ ಅನಂತರ ಬಂಗಾಳವು ಬ್ರಿಟಿಷರ ಕೈಕೆಳಗೆ ಬಂತು. 1773ರಿಂದ ಕಲ್ಕತ್ತಾವು ಭಾರತದ ರಾಜಧಾನಿಯೂ ಅಯಿತು.
1943ರ ಭೀಕರವಾದ ಬಂಗಾಳ ಕ್ಷಾಮದಲ್ಲಿ 30ಲಕ್ಷಕ್ಕೂ ಹೆಚ್ಚು ಜನ ಸತ್ತರು. ವಸಾಹತು ಆಡಳಿತವು ಬಂಗಾಳಿಗಳಿಗೆ ಆಧುನಿಕತೆಯ ಪಾಠವನ್ನೂ ಕಲಿಸಿತು. ಫಲವಾಗಿ, ಭಾರತದಲ್ಲಿ ಬಂಗಾಳಿಗಳು ಬುದ್ದಿವಂತರು ಎಂಬ ಪ್ರಶಂಶೆಯೂ ಅವರಿಗೆ ದೊರೆಯಿತು. ಸುಭಾಶ್ಚಂದ್ರ ಬಸು ಅವರೂ ಸೇರಿದಂತೆ, ಸ್ವಾತಂತ್ರ್ಯ ಚಳುವಳಿಗೆ ಬಂಗಾಳಿಗಳ ಕೊಡುಗೆ ಮಹತ್ವದ್ದು. 1947ರಲ್ಲಿ ಬಂಗಾಳವು ಒಡೆದು, ಪೂರ್ವ ಬಂಗಾಳವು ಪಾಕಿಸ್ಥಾನದ ಪಾಲಾಯಿತು.
1977ರಿಂದ 2011ರವರೆಗೆ ಪಶ್ಚಿಮ ಬಂಗಾಳವನ್ನು ಕಮ್ಯುನಿಷ್ಟರು ಆಳಿದರು. 1987ರ ಅಸೆಂಬ್ಲಿ ಚುನಾವಣೆಯಲ್ಲಿ 294 ಸೀಟುಗಳಲ್ಲಿ 251 ಸೀಟುಗಳನ್ನು ಗೆಲ್ಲುವಷ್ಟರ ಮಟ್ಟಿಗೆ ಅವರು ಜನಪ್ರಿಯರೂ ಆಗಿದ್ದರು. ಜ್ಯೋತಿ ಬಸು ಅವರಂತ ಧೀಮಂತ ನಾಯಕನ್ನು ಕಮ್ಯುನಿಸ್ಟರು ದೇಶಕ್ಕೆ ಕೊಟ್ಟರು. ಬಂಗಾಳದ ನಕ್ಸಲ್ ಬಾರೀ ಎಂಬ ಹಳ್ಳಿಯಲ್ಲಿ ಚಾರುಮುಜುಂದಾರ್ ನೇತೃತ್ವದಲ್ಲಿ ಆರಂಭವಾದ ಕ್ರಾಂತಿಕಾರೀ ಚಳುವಳಿಯು ಇಂದು ನಕ್ಸಲ್ ಚಳುವಳಿಯೆಂದೇ ಎಂದೇ ಪ್ರಸಿದ್ಧವಾಗಿದೆ.
ನನ್ನ ಬಂಗಾಳೀ ಗೆಳೆಯರೆಲ್ಲ ( ಪ್ರೊ. ಆದಿತ್ಯ ಮುಖರ್ಜೀ, ಬಿಷ್ಣುಪ್ರಿಯಯಾ ದತ್ ಪಾರ್ತೋ ದತ್, ಕುಣಾಲ್ ಮೊದಲಾದವರು) ತುಂಬ ಸೌಮ್ಯವಾದಿಗಳು. ಮನೆಯಲ್ಲಿ ನಮಗೆಲ್ಲ ಅಡುಗೆ ಮಾಡಿ ಹಾಕುವ ಮೊಯಿನಾ ವಾರಕ್ಕೊಮ್ಮೆ ಸಾಸಿವೆ ಹಾಕಿದ ಮೀನು ( ಮಾಚೆರ್ ಜೋಲ್) ಮಾಡಿದರೆ ನಮಗೆಲ್ಲ ಆ ದಿನ ಏನೋ ಸಂಭ್ರಮ!.
ಈಚಿನ ದಿನಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸೆ, ಸಾವು , ರಕ್ತದ ಹರಿವು, ಪ್ರತಿಮಾ ಭಂಜನೆಗಳು ಬಂಗಾಲದ ಬಗೆಗಣ ಉತ್ಸಾಹವನ್ನು ಕಡಿಮೆ ಮಾಡಿ, ಮನಸನ್ನು ಮುದುಡಿಸುತ್ತಿದೆ. ಶಕ್ತಿ ರಾಜಕಾರಣವು ಎಷ್ಟೊಂದು ಹೇಯವಾದ ಹಂತಕ್ಕೆ ತಲುಪಿಬಿಟ್ಟಿದೆ! ತನ್ನ ಶ್ರೀಮಂತ ಪರಂಪರೆಯನ್ನು ಬಂಗಾಳ ಉಳಿಸಿಕೊಳ್ಳುವುದೇ ತಿಳಿಯದು.
–ಪುರುಷೋತ್ತಮ ಬಿಳಿಮಲೆ
( ಚಿತ್ರ: ಬಿಷ್ಣುಪುರದ ಟರಕೋಟಾ ದೇವಳ, ನನ್ನ ಬಾಂಗ್ಲಾ ವಿದ್ಯಾರ್ಥಿಗಳೊಡನೆ ಶೈಕ್ಷಣಿಕ ಪ್ರವಾಸ ಹೋದಾಗ ತೆಗೆದದ್ದು 2013)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್‌ನ ಎಸ್‌ಎನ್‌ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್ ಅಪಾರ್ಟ್‌ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

ದಿನದ ಸುದ್ದಿ
ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
- ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
- ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
- NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
- “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.
CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.
http://Visit : www.suddidina.com
ಇಂಡಿಯಾ ಗೇಟ್‌ನಿಂದ ಮೆರವಣಿಗೆ
ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.
ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.
‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’
ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.
“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.
“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ”
|
ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ
ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.
ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.
ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

-
ಅಂತರಂಗ7 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ4 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ4 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ4 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ5 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ5 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ5 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ



