ದಿನದ ಸುದ್ದಿ

ಹುಬ್ಬಳ್ಳಿ ಪ್ರಕರಣದಲ್ಲಿ ಯಾವ ಅಮಾಯಕನ ಬಂಧನ ಆಗಿಲ್ಲ : ಸಿಎಂ ಬಸವರಾಜ ಬೊಮ್ಮಾಯಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಚಿಕ್ಕಮಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಆಗಮಿಸಿ ಕ್ಷೇತ್ರದ ದರ್ಶನ ಪಡೆದರು.

ತೋರಣ ಗಣಪತಿ ದೇವಾಲಯ, ಆದಿ ಶಂಕರಚಾರ್ಯರ ಪೀಠಕ್ಕೆ ತೆರಳಿ ದರ್ಶನ ಪಡೆದುಕೊಂಡ ಮುಖ್ಯಮಂತ್ರಿ, ಶೃಂಗೇರಿಯ ಭಾರತಿತೀರ್ಥ ಮಹಾಸ್ವಾಮೀಜಿ ಹಾಗೂ ವಿಧುಶೇಖರತೀರ್ಥ ಸ್ವಾಮೀಜಿ ಅವರೊಂದಿಗೆ ಸಮಾಲೋಚನೆ ನಡೆಸಿದರು.

ಇದಕ್ಕೂ ಮುನ್ನ ಮಾದ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಹುಬ್ಬಳ್ಳಿ ಪ್ರಕರಣದಲ್ಲಿ ಯಾವ ಅಮಾಯಕನ ಬಂಧನ ಆಗಿಲ್ಲ, ಸಾಕ್ಷಿಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ ಎಂದು ತಿಳಿಸಿದರು.

ಯಾವ ಪ್ರಕರಣದಲ್ಲೂ ಮೃಧು ಧೋರಣೆ ತೋರಿಲ್ಲ, ಹುಬ್ಬಳ್ಳಿ ಘಟನೆ ಸಂಬಂಧ ಕ್ರಮ ಕೈಗೊಳ್ಳಲಾಗಿದೆ. ಗುತ್ತಿಗೆದಾರ ಸಾವು ಪ್ರಕರಣದಲ್ಲಿ ತಕ್ಷಣವೇ ಎಫ್‌ಐಆರ್ ದಾಖಲಿಸಲಾಗಿದೆ. ಶಿವಮೊಗ್ಗ ಪ್ರಕರಣದಲ್ಲೂ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version