ದಿನದ ಸುದ್ದಿ
ತಮಿಳು ನಟ ವಿಜಯ್ ಸೈಕಲ್ ನಲ್ಲಿ ಬಂದು ಓಟ್ ಮಾಡಿದ್ದೇಕೆ..? ನಟನ ಆಪ್ತರು ಹೇಳಿದ್ದೇನು ಗೊತ್ತಾ..?

ಸುದ್ದಿದಿನ,ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಮಂಗಳವಾರ ನಡೆಯಿತು. ನಟ, ಸೂಪರ್ ಸ್ಟಾರ್ ಇಳಯ ದಳಪತಿ ವಿಜಯ್ ಸೈಕಲ್‍ನಲ್ಲಿ ಮತಗಟ್ಟೆಗೆ ಬಂದು ವೋಟ್ ಹಾಕಿದ್ದು, ನಟ ವಿಜಯ್ ಗೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ನಟ ಇಳಯದಳಪತಿ ವಿಜಯ್ ಅವರು ಸೈಕಲ್‍ನಲ್ಲಿ ಚೆನ್ನೈನ ನೀಲಾಂಕರೈನಲ್ಲಿರುವ ವೆಲ್ಸ್ ಇಂಟರ್ ನ್ಯಾಷನಲ್ ಪ್ರೀ ಸ್ಕೂಲ್ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಅಭಿಮಾನಿಗಳು ನಟ ವಿಜಯ್ ಅವರ ಜೊತೆಯಲ್ಲಿ ಸೆಲ್ಫೀ, ಫೋಟೋ ಮತ್ತು ವೀಡಿಯೋವನ್ನು ಕ್ಲಿಕ್ಕಿಸಿಕೊಂಡರು. ಈ ಫೋಟೋಗಳು ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಮಂಗಳವಾರ ಸಖತ್ ವೈರಲ್ ಆಗಿದ್ದಾವೆ.
ನಟ ವಿಜಯ್ ಅಭಿಮಾನಿಗಳು ರಸ್ತೆ ಮಧ್ಯದಲ್ಲಿ ಅವರನ್ನು ಸುತ್ತವರಿದ ಕಾರಣ ಅವರು ಮತಗಟ್ಟೆಗೆ ಸೈಕಲ್ ನಲ್ಲಿ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ನಂತರ ನಟ ವಿಜಯ್ ತಮ್ಮ ಸಿಬ್ಬಂದಿಯವರ ದ್ವಿಚಕ್ರವಾಹನದಲ್ಲಿ ಹಿಂದೆ ಕುಳಿತು ಮತಗಟ್ಟೆಗೆ ಹೋದರು. ಮತಗಟ್ಟೆಯ ಬಳಿ ಹಲವಾರು ಅಭಿಮಾನಿಗಳು ನಟ ವಿಜಯ್ ನೋಡಲು ನೆರೆದಿದ್ದರು. ನೆರೆದಿದ್ದವರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಚ್ ಕೂಡ ಮಾಡಬೇಕಾಯಿತು.
ಇಳಯ ದಳಪತಿ ವಿಜಯ್ ಅವರು ಮಾಸ್ಕ್ ಧರಿಸಿಕೊಂಡು ಸೈಕಲ್‌ನಲ್ಲಿ ಮತಗಟ್ಟೆಗೆ ಬಂದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದಂತೆ, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದರು. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಲು ವಿಜಯ್ ಸೈಕಲ್‌ನಲ್ಲಿ ಬಂದಿದ್ದಾರೆ ಎಂದು ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ಬಾರೀ ಚರ್ಚೆ ನಡೆಯಿತು.
ಸೈಕಲ್ ನಟ ವಿಜಯ್ ಬಂದಿದ್ದೇಕೆ..?
ಕಾರ್ ಪಾರ್ಕಿಂಗ್ ಸಮಸ್ಯೆಯನ್ನು ತಪ್ಪಿಸಲು ನಟ ವಿಜಯ್ ಅವರು ಸೈಕಲ್ ನಲ್ಲಿ ಬಂದು ಮತ ಚಲಾಯಿಸಿದರು. ಆದರೆ ಮತಗಟ್ಟೆ ಇರುವ ಕಿರಿದಾದ ಬೀದಿಯಲ್ಲಿ ಪಾರ್ಕಿಂಗ್ ತೊಂದರೆ ತಪ್ಪಿಸಲು ವಿಜಯ್ ಸೈಕಲ್ ನಲ್ಲಿ ಬಂದರು ಎಂದು ಅವರ ಪಿ ಆರ್ ಓ ಸ್ಪಷ್ಟಪಡಿಸಿದ್ದಾರೆ.
“ತಲಪತಿ ವಿಜಯ್ ಅವರು ಕಾರನ್ನು ಬಳಸುವ ಬದಲು ಸೈಕಲ್‌ನಲ್ಲಿ ಹೋಗಲು ನಿರ್ಧರಿಸಿದರು ಏಕೆಂದರೆ ಮತದಾನ ಕೇಂದ್ರವು ಅವರ ನಿವಾಸದ ಪಕ್ಕದಲ್ಲಿಯೇ ಇತ್ತು ಮತ್ತು ಕಾರಿನಲ್ಲಿ ಹೋಗುವುದರಿಂದ ರಸ್ತೆಯಲ್ಲಿ ಹೆಚ್ಚು ಟ್ರಾಫಿಕ್ ಜಾಮ್ ಉಂಟಾಗಬಹುದು. ಇದರ ಹಿಂದೆ ಬೇರೆ ಯಾವುದೇ ಉದ್ದೇಶವಿರಲಿಲ್ಲ!” – ರಿಯಾಜ್ ಕೆ ಅಹ್ಮದ್ ಟ್ವೀಟ್ ಮಾಡಿದ್ದಾರೆ.
#TNElection #TNElections2021 #TNElection2021 #TNAssemblyElections2021 #tnelectionday #Election2021 #Elections2021 #Thalapathy #Vijay #thalapathyfansteam #Thalapathy @actorvijay @Jagadishbliss @BussyAnand @V4umedia_ pic.twitter.com/H6XVkAkKJm
— RIAZ K AHMED (@RIAZtheboss) April 6, 2021
#ThalapathyVijay arrives in cycle to cast his vote in #TamilNaduElections 👍#Thalapathy #Vijay @actorvijay pic.twitter.com/Y0MfcbNUSn
— Suresh Kondi (@V6_Suresh) April 6, 2021
It's not easy to breath wearing mask, driving cycle under the extreme summer heat. But he did it in style ❤️😊
Its not just a ride. Its a Statement. 🔥🔥💥.
Always proud of you @actorvijay sir.🙏🙏#TamilNaduElections2021#Govote#Thalapathy pic.twitter.com/irMBw789qc
— Rathna kumar (@MrRathna) April 6, 2021
No one wudve expected this!#ThalapathyVijay cycling his way to the booth to cast his vote#TNElection #TNElection2021 #Thalapathy pic.twitter.com/hEgwhSBRqR
— Kaushik LM (@LMKMovieManiac) April 6, 2021
Exclusive Video of #Thalapathy @actorvijay a Polling Booth ! #Master #TamilNaduElections2021
pic.twitter.com/CYmpvvzFSW— THALAPATHY FANS KERALA (@TFK_OfficiaI) April 6, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ2 days ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ2 days ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ2 days ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ5 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ5 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ2 days ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ