ದಿನದ ಸುದ್ದಿ

ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಸಬಲೀಕರಣ, ಸಾಮಾಜಿಕ. ನ್ಯಾಯಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆ ಪೂರಕ ಮತ್ತು ಅವರ ಸಾಧನೆಯ ಮಹತ್ವವನ್ನು ಬೆಳಕಿಗೆ ತರುವ ಉದ್ದೇಶವೇ ಮಹಿಳಾ ದಿನಾಚರಣೆಯ ಉದ್ದೇಶ ಎಂದು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ ವೆಂಕಟೇಶ್ ಬಾಬು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳಾ ಶಕ್ತಿ, ಸಬಲೀಕರಣ ಮತ್ತು ಸಮಾನ ಅವಕಾಶಗಳ ಅಗತ್ಯತೆಯ ಮಹತ್ವವನ್ನು ವಿವರಿಸಿದರು. ಮಹಿಳೆಯರು ಸಮಾಜದ ನಾಂದಿ ಕಲ್ಲು. ಅವರ ಶಿಕ್ಷಣ, ಆರ್ಥಿಕ ಸ್ವಾವಲಂಬನೆ ಮತ್ತು ನಾಯಕತ್ವಕ್ಕೆ ಪ್ರೋತ್ಸಾಹ ನೀಡಿದರೆ, ಸಮಗ್ರ ಅಭಿವೃದ್ಧಿ ಸಾಧ್ಯ. ಮಹಿಳಾ ಶಕ್ತಿಯನ್ನು ಗುರುತಿಸಿ, ಅವರಿಗೆ ಸಮಾನ ಅವಕಾಶಗಳನ್ನು ಒದಗಿಸುವುದು ನಿಜವಾದ ಸಬಲೀಕರಣ”, ಎಂದು ಅಭಿಪ್ರಾಯಪಟ್ಟರು.

“ಮಹಿಳೆಯರು ಕೇವಲ ಗೃಹ ಜೀವನಕ್ಕೆ ಸೀಮಿತವಾಗದೇ, ವೈಜ್ಞಾನಿಕ, ಆರ್ಥಿಕ, ರಾಜಕೀಯ ಹಾಗೂ ಆಡಳಿತಾತ್ಮಕ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದಾರೆ. ಆದರೆ ಇನ್ನೂ ಅವರು ಎದುರಿಸುತ್ತಿರುವ ಸಾಮಾಜಿಕ ಹಾಗೂ ವೃತ್ತಿಪರ ಸವಾಲುಗಳಿಗೆ ಪರಿಹಾರ ಕಾಣುವುದು ಅವಶ್ಯಕ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಮಹಿಳಾ ಸಬಲೀಕರಣದ ಮಹತ್ವದ ಕುರಿತು ತಮ್ಮ ಚಿಂತನೆಗಳನ್ನು ಹಂಚಿಕೊಂಡರು.

ಸಮಾಜ ಶಾಸ್ತ್ರ ಪ್ರಾಧ್ಯಾಪಕ ಪ್ರೊ ಸುರೇಶ್ ಅವರು ಮಾತನಾಡಿ, “ಮಹಿಳೆಯರು ಸ್ವತಂತ್ರ ನಿರ್ಧಾರ ಮಾಡಿಕೊಳ್ಳುವಂತಾಗಬೇಕು. ಸಮಾನತೆ ಮಾತ್ರ ಸಬಲೀಕರಣವಲ್ಲ, ಮಹಿಳೆಯರು ಅವರ ಹಕ್ಕುಗಳನ್ನು ಅರಿತು, ಅವುಗಳನ್ನು ಅನುಷ್ಠಾನಗೊಳಿಸಬೇಕು” ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ವಿಭಾಗದ ಮಹಿಳಾ ಶಿಕ್ಷಕರಿಗೆ ಹಾಗೂ ಕಚೇರಿ ಸಿಬ್ಬಂದಿಗಳಿಗೆ ಸನ್ಮಾನ ಮಾಡಲಾಯಿತು.

ಪ್ರೊ ಬಿ ಸಿ ತಹಸಿಲ್ದಾರ್ ಅವರು ತಮ್ಮ ಅಧ್ಯಕ್ಷರ ಭಾಷಣದಲ್ಲಿ “ಈ ರೀತಿಯ ಕಾರ್ಯಕ್ರಮಗಳು ಮಹಿಳೆಯರ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಜೊತೆಗೆ, ವಿದ್ಯಾರ್ಥಿಗಳು ಮಹಿಳಾ ಸಬಲೀಕರಣದ ಬಗ್ಗೆ ಅರಿವು ಹೊಂದಲು ಸಹಾಯ ಮಾಡುತ್ತದೆ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ನಿರ್ವಹಣಾ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ತೀವ್ರ ಶ್ರಮ ವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version