Connect with us

ದಿನದ ಸುದ್ದಿ

ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ; ಇದು ಅನಿರೀಕ್ಷಿತ ಫಲಿತಾಂಶ ಎಂದ ಕಟಿಲ್

Published

on

ಸುದ್ದಿದಿನ, ಬೆಂಗಳೂರು : ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಮತಗಳ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆಡಳಿತಾರೂಢ ಬಿಜೆಪಿ ಸೋಲು ಅನುಭವಿಸಿದೆ. ಕಾಂಗ್ರೆಸ್ 136 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಸ್ಪಷ್ಟ ಬಹುಮತ ಗಳಿಸಿದೆ.

ಬಿಜೆಪಿ 65 ಸ್ಥಾನಗಳಲ್ಲಿ ತೃಪ್ತಿಪಟ್ಟುಕೊಳ್ಳಬೇಕಾಯಿತು. ಜೆಡಿಎಸ್ 19, ಇತರರು ನಾಲ್ಕು ಕ್ಷೇತ್ರಗಳಲ್ಲಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರು ಈಗಾಗಲೇ ಸಮಾಲೋಚನಾ ಕಾರ್ಯ ಮುಂದುವರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಆಡಳಿತಾರೂಢ ಬಿಜೆಪಿಯ ಬಹುತೇಕ ಸಚಿವರು ಪರಾಭವಗೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವಿ ಕ್ಷೇತ್ರದಿಂದ ಪುನರಾಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಲಕ್ಷ್ಮಣ ಸವದಿ ಸೇರಿದಂತೆ ಗೆಲುವು ಸಾಧಿಸಿದ್ದಾರೆ. ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಮೇಲುಕೋಟೆ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಹಿರಿಯ ಮುಖಂಡ ಡಾ. ಜಿ. ಪರಮೇಶ್ವರ್ ಆಯ್ಕೆಯಾಗಿದ್ದಾರೆ. ಅರಸಿಕೆರೆಯಿಂದ ಕಾಂಗ್ರೆಸ್‌ನ ಕೆ.ಎಂ. ಶಿವಲಿಂಗೇಗೌಡ ಪುನರಾಯ್ಕೆಯಾಗಿದ್ದಾರೆ.

ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ್, ನಾಗಮಂಗಲದಲ್ಲಿ ಚಲುವರಾಯಸ್ವಾಮಿ, ರಾಮನಗರ ಜಿಲ್ಲೆಯ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿದ್ದಾರೆ.

ನಾಡಿನ ಗಮನ ಸೆಳೆದಿರುವ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ತಮ್ಮ ಸಮೀಪ ಸ್ಪರ್ಧಿ ಬಿಜೆಪಿಯ ವಿ. ಸೋಮಣ್ಣ ಅವರನ್ನು ಸೋಲಿಸಿ, ಜಯಗಳಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿ ಸಚಿವ ಆರ್. ಅಶೋಕ, ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಗೆಲುವು ಸಾಧಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಅಭ್ಯಥಿ ಜಗದೀಶ್ ಶೆಟ್ಟರ್ ಅವರನ್ನು ಪರಾಭವಗೊಳಿಸಿದ್ದಾರೆ.

ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗ ಶೆಟ್ಟಿ ಆಯ್ಕೆಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ವಿ. ದೇಶಪಾಂಡೆ ಆಯ್ಕೆಯಾಗಿದ್ದಾರೆ. ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಪ್ರಚಾರ ಮಾಡದೇ ಜಯಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರನ್ನು, ಆಯ್ಕೆ ಮಾಡುವ ಮೂಲಕ ಜನತೆ ಅಚ್ಚರಿ ಫಲಿತಾಂಶವನ್ನು ನೀಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಪರಾಭವಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಕ್ಷೇತ್ರದಿಂದ ಬೇಲೂರು ಗೋಪಾಲಕೃಷ್ಣ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಜೆಡಿಎಸ್‌ನ ಶಾರದಾ ಪೂರ್ವ ನಾಯಕ್, ಭದ್ರಾವತಿ ಕ್ಷೇತ್ರದಿಂದ ಕಾಂಗ್ರೆಸ್‌ನ ಸಂಗಮೇಶ್ ಆಯ್ಕೆಯಾಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಶಿಕಾರಿಪುರದಿಂದ, ಸೊರಬ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಚುನಾಯಿತರಾಗಿದ್ದಾರೆ. ಬೊಮ್ಮಾಯಿ ಸಚಿವ ಸಂಪುಟದ ಸಹೋದ್ಯೋಗಿಗಳಾದ ಡಾ. ಕೆ. ಸುಧಾಕರ್, ಶ್ರೀರಾಮುಲು, ನಾರಾಯಣಗೌಡ, ಗೋವಿಂದ ಕಾರಜೋಳ, ವಿ.ಸೋಮಣ್ಣ, ಜೆ.ಸಿ. ಮಾಧುಸ್ವಾಮಿ, ಆರ್. ಅಶೋಕ ಕನಕಪುರದಿಂದ, ಬಿ.ಸಿ. ಪಾಟೀಲ್, ಎಂ.ಟಿ.ಬಿ. ನಾಗರಾಜ್, ಹಾಲಪ್ಪ ಆಚಾರ್ ಪರಾಭವಗೊಂಡ ಸಚಿವರು.ಬಿಜೆಪಿ ಮುಖಂಡ ಸಚಿವ ಆರಗ ಜ್ಞಾನೇಂದ್ರ ಆಯ್ಕೆಯಾಗಿದ್ದಾರೆ. ಹಾಸನದಿಂದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಪ್ರತಿಸ್ಪರ್ಧಿ ಪ್ರೀತಮ್ ಗೌಡ ಅವರನ್ನು ಪರಾಭವಗೊಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ವಕ್ತಾರರು, ಜಯಗಳಿಸಿದ ಅಭ್ಯರ್ಥಿಗಳೆಲ್ಲರೂ ನಾಳೆ ರಾಜಧಾನಿ ಬೆಂಗಳೂರಿಗೆ ಬರುವಂತೆ ಸೂಚನೆ ನೀಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಪಕ್ಷದ ಸೋಲಿನ ಹೊಣೆಯನ್ನು ತಾವೆ ಹೊರುವುದಾಗಿ ಬಸವರಾಜ ಬೊಮ್ಮಾಯಿ ತಿಳಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಹಾವೇರಿಯಲ್ಲಿ ತಿಳಿಸಿದ್ದಾರೆ.
ಸಂಘಟನೆ ಕೊರತೆ ಸೇರಿದಂತೆ ಇತರ ಕಾರಣಗಳಿಂದಾಗಿ ಪಕ್ಷಕ್ಕೆ ಸೋಲು ಉಂಟಾಗಿದೆ ಇಂದು ಸಂಜೆ ಬೆಂಗಳೂರಿಗೆ ತೆರಳಿ, ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ನೀಡುವುದಾಗಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಬಹುಮತ ನೀಡಿದ್ದು, ನಮ್ಮ ಪಕ್ಷ ಪ್ರತಿಪಕ್ಷದಲ್ಲಿ ಕುಳಿತು ಸಮರ್ಪಕ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸಲಿದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಪಕ್ಷವಾಗಿ ನಮ್ಮ ಕುಂದು ಕೊರತೆಯನ್ನು ಸರಿದೂಗಿಸಿಕೊಂಡು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ,ಸಂಘಟಿತವಾಗಿ ಹೋರಾಟ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್ ನ ಹಿರಿಯ ಮುಖಂಡ ರಾಹುಲ್ ಗಾಂಧಿ ದೆಹಲಿಯಲ್ಲಿಂದು ಪ್ರತಿಕ್ರಿಯಿಸಿ, ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಟ್ಟು ಬಹುಮತ ನೀಡಿದ್ದಾರೆ. ಅವರ ವಿಶ್ವಾಸ ಉಳಿಸಿಕೊಂಡು ಹೋಗಲು ಪಕ್ಷ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ವಕ್ತಾರ ಜೈರಾಂ ರಮೇಶ್ ಮಾತನಾಡಿ, ಕರ್ನಾಟಕ ವಿಧಾನಸಭಾ ಚುನಾವಣೆ 2024 ರ ಸಂಸತ್ ಚುನಾವಣೆಗೆ ದಿಕ್ಸೂಚಿ ಎಂದು ಹೇಳಿದ್ದಾರೆ.

ಜನತೆ ನೀಡಿದ ತೀರ್ಪನ್ನು ತಾವು ಗೌರವದಿಂದ ಸ್ವೀಕರಿಸುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಬೆಂಗಳೂರಿನಲ್ಲಿಂದು ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ ಪ್ರತಿಕ್ರಿಯಿಸಿ, ಫಲಿತಾಂಶ ಅನಿರೀಕ್ಷಿತ, ಪಕ್ಷಕ್ಕೆ ಹಿನ್ನಡೆಯಾಗಿದೆ. ರಾಜ್ಯವು ಒಳ್ಳೆಯ ವಿರೋಧ ಪಕ್ಷವಾಗಿ ಜವಾಬ್ದಾರಿಯಾಗಿದೆ ಎಂದು ಕಾರ್ಯನಿರ್ವಹಿಸಲಿದೆ ಎಂದು ಅವರು ತಿಳಿಸಿದರು.
ಆಯ್ಕೆಗೊಂಡಿರುವ ಅಭ್ಯರ್ಥಿಗಳಿಗೆ ರಾಜ್ಯಾಧ್ಯಕ್ಷ ಅಭಿನಂದನೆ ಸಲ್ಲಿಸಿ, ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಿಜೆಪಿಯ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ಆಯ್ಕೆ

Published

on

ಸುದ್ದಿದಿನ,ಚಿತ್ರದುರ್ಗ : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಯಾಗಿ ಚಿತ್ರದುರ್ಗದ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ರವರು ಅಧಿಕೃತ ನೇಮಕ ಪತ್ರ ನೀಡುವುದರ ಮೂಲಕ ಆಯ್ಕೆ ಮಾಡಲಾಯಿತು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು.

ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂಸಹ ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.ಬರುವ 2024 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಕೂಡ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ : ಅವಧಿ ವಿಸ್ತರಣೆ

Published

on

ಸುದ್ದಿದಿನ ಡೆಸ್ಕ್ : ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್‌ಗಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಅವರು, ಕಾಂಗ್ರೆಸ್‌ನ ಮಾದೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending