ದಿನದ ಸುದ್ದಿ
ಫೆ.23 ರಂದು ಸೈಬರ್ ಸೆಕ್ಯೂರಿಟಿ ಮತ್ತು ಇ-ಆಡಳಿತ ಕುರಿತು ಕಾರ್ಯಾಗಾರ
ಸುದ್ದಿದಿನ,ದಾವಣಗೆರೆ : ಕೇಂದ್ರ ಸರ್ಕಾರದ ಸಾಮಾರ್ಥ್ಯಾ ಭಿವೃದ್ದಿ ಯೋಜನೆಯಡಿಯಲ್ಲಿ ಆಡಳಿತ ತರಬೇತಿ ಸಂಸ್ಥೆ ಮೈಸೂರು ಮತ್ತು ಇ-ಆಡಳಿತ ಕೇಂದ್ರ ಬೆಂಗಳೂರು ಇವರ ಸಹಯೋಗದೊಂದಿಗೆ ಜಿಲ್ಲಾ ತರಬೇತಿ ಸಂಸ್ಥೆ ದಾವಣಗೆರೆ ಇವರು ‘ಸೈಬರ್ ಸೆಕ್ಯೂರಿಟಿ ಮತ್ತು ಇ-ಆಡಳಿತ’ ಕುರಿತು ಒಂದು ದಿನದ ವಿಶೇಷ ಕಾರ್ಯಾಗಾರವನ್ನು ಫೆ.23 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಾಗಾರವನ್ನು ಆಡಳಿತ ಸುಧಾರಣಾ ಇಲಾಖೆ(ಇ-ಆಡಳಿತ)ಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಜೀವ್ ಚಾವ್ಲಾ ಇವರ ಮಾರ್ಗದರ್ಶನದಲ್ಲಿ ರಾಜ್ಯ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಮೂಲಕ ಆಯೋಜಿಸಲಾಗುತ್ತಿದ್ದು, ದಾವಣಗೆರೆ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ಕಾರ್ಯಾಗಾರದ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸುವರು ಎಂದು ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243