ದಿನದ ಸುದ್ದಿ

ಹಳೇಬಿಡಿನಲ್ಲಿ ವಿಶ್ವ ಪಾರಂಪರಿಕ ದಿನ ಆಚರಣೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಹಳೇಬೀಡು: ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆಯಿಂದ ಇಂದು ಹಳೇಬಿಡಿನ ಐತಿಹಾಸಿಕ ಹೊಯ್ಸಳೇಶ್ವರ ದೇವಾಲಯದಲ್ಲಿ ವಿಶ್ವ ಪಾರಂಪರಿಕ ದಿನ ಆಚರಿಸಲಾಗುವುದು.

ಆಜಾದಿ ಕಾ ಅಮೃತ ಮಹೋತ್ಸವದ ಭಾಗವಾಗಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯ ಬೇಲೂರಿನ ಶಾಸಕರಾದ ಕೆ.ಎಸ್. ಲಿಂಗಯ್ಯ, ಕಲ್ಪತರು ಪಿಯು ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಸಿ. ಕುಮಾರ್ ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಮತಿ ಅವರು ಮುಖ್ಯ ಅಥಿತಿಗಳಾಗಿ ಭಾಗವಹಿಸುವರು.

ಇದೇ ವೇಳೆ ಶಾಲಾ ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ. ಜೊತೆಗೆ ಇಂದಿನಿಂದ ಏಪ್ರಿಲ್ ೨೪ರವರೆಗೆ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿದ್ದು, ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version