Connect with us

ದಿನದ ಸುದ್ದಿ

ವಿಶ್ವ ತಂಬಾಕು ರಹಿತ ದಿನಾಚರಣೆ: ತಂಬಾಕು ಮುಕ್ತ ಪೀಳಿಗೆ ಸೃಷ್ಠಿಗೆ ಕೈಜೋಡಿಸಿದ ಮಕ್ಕಳು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರು; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಗೆ ಮನವಿ ಪಾತ್ರ ಸಲ್ಲಿಕೆ

Published

on

ಸುದ್ದಿದಿನ,ಬೆಂಗಳೂರು: ವಿಶ್ವ ತಂಬಾಕು ರಹಿತ ದಿನಾಚರಣೆ 2021ರ ಅಂಗವಾಗಿ ಮಕ್ಕಳು, ಪೋಷಕರು, ಶಿಕ್ಷಕರು, ಮತ್ತು ಸಾರ್ವಜನಿಕ ಆರೋಗ್ಯ ತಜ್ಞರು ಕೈಜೋಡಿಸಿ ‘ತಂಬಾಕು ಮುಕ್ತ ಪೀಳಿಗೆ’ ನಿರ್ಮಾಣ ಮಾಡಲು ಪಣತೊಟ್ಟರು.

ತಂಬಾಕು ಮುಕ್ತ ಪೀಳಿಗೆ ನಿರ್ಮಿಸಲು ಕೈಗೊಳ್ಳಬೇಕಾದ ಕ್ರಮಗಳನ್ನು ಒಳಗೊಂಡ ಮನವಿ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಶ್ರೀಮತಿ. ಶಶಿಕಲಾ ಜೊಲ್ಲೆ ಅವರಿಗೆ ಸಲ್ಲಿಸಲಾಯಿತು.

ತಂಬಾಕು ಮುಕ್ತ ಪೀಳಿಗೆಯು ವಿಶ್ವ ಆರೋಗ್ಯ ಸಂಸ್ಥೆ (WHO) ಭಾರತ ಸೇರಿದಂತೆ ತನ್ನ ಸದಸ್ಯ ರಾಷ್ಟ್ರಗಳಲ್ಲಿ ಪ್ರೋತ್ಸಾಹಿಸುತ್ತಿರುವ ಅಭಿಯಾನವಾಗಿದೆ. ತಂಬಾಕು ಬಳಕೆದಾರರ ಪಟ್ಟಿಯಲ್ಲಿ ಜಾಗತಿಕವಾಗಿ ಭಾರತ ಎರಡನೇ ಸ್ಥಾನದಲ್ಲಿದ್ದು (268 ಮಿಲಿಯನ್), ಪ್ರತಿವರ್ಷ 13 ಲಕ್ಷ ಮಂದಿ ತಂಬಾಕು ಸಂಬಂಧಿತ ಖಾಯಿಲೆಗಳಿಂದ ಮೃತಪಡುತಿದ್ದಾರೆ.

ಭಾರತದಲ್ಲಿನ ಎಲ್ಲ ವಿಧದ ಕ್ಯಾನ್ಸರ್ ಗಳಿಗೆ ತಂಬಾಕು ಬಳಕೆ ಶೇ. 27%ರಷ್ಟು ಕಾರಣವಾಗಿದೆ. ಯುವಜನರಲ್ಲಿ ತಂಬಾಕು ಬಳಕೆ ಕುರಿತ ಜಾಗತಿಕ ಸಮೀಕ್ಷೆ (GYTS) ಪ್ರಕಾರ, ಭಾರತದಲ್ಲಿ ಶೇ. 14.6 ಕ್ಕಿಂತಲೂ ಹೆಚ್ಚು ಹದಿಹರೆಯದವರು (13-15 ವರ್ಷದವರು) ತಂಬಾಕನ್ನು ಬಳಸುತ್ತಾರೆ.

ವಿಶ್ವ ತಂಬಾಕು ರಹಿತ ದಿನಾಚರಣೆ 2021ರ ಅಂಗವಾಗಿ ಕನ್ಸೋರ್ಟಿಯಂ ಫಾರ್ ಟೊಬ್ಯಾಕೋ ಫ್ರೀ ಕರ್ನಾಟಕ (ಸಿಎಫ್‌ಟಿಎಫ್‌ಕೆ) ಸೋಮವಾರ ಆಯೋಜಿಸಿದ್ದ ‘ವಾಯ್ಸ್ ಫಾರ್ ಟೊಬ್ಯಾಕೊ-ಫ್ರೀ ಜನರೇಶನ್’ ವೆಬಿನಾರ್ ನಲ್ಲಿ ಮಾತಾನಾಡಿದ ಕಾಲೇಜು ವಿದ್ಯಾರ್ಥಿನಿ ಸಪ್ನಾ ಹೆಚ್. ಎಂ, “ಪ್ರಸ್ತುತ, ತಂಬಾಕು ಉತ್ಪನ್ನಗಳನ್ನು ಯಾರು ಯಾರಿಗಾದರೂ ಮತ್ತು ಎಲ್ಲಿಯಾದರೂ ಮಾರಾಟ ಮಾಡಲಾಗುತ್ತಿದೆ.

ತಂಬಾಕು ಉತ್ಪನ್ನಗಳು ಮಕ್ಕಳಿಗೆ ಲಭ್ಯವಾಗದಂತೆ ನೋಡಿಕೊಳ್ಳುವುದು ತಂಬಾಕು ಮುಕ್ತ ಪೀಳಿಗೆ ನಿರ್ಮಿಸುವ ನಿಟ್ಟಿನಲ್ಲಿ ಇಡುವ ಮೊದಲ ಮಹತ್ವದ ಹೆಜ್ಜೆಯಾಗುತ್ತದೆ. ಇದನ್ನು ಮಾರಾಟಗಾರರ ಪರವಾನಗಿ ಕಡ್ಡಾಯ ಮಾಡುವ ಮೂಲಕ ಸಾಧ್ಯವಾಗಿಸಬಹುದು,” ಎಂದು ಹೇಳಿದರು.

ವೆಬಿನಾರ್ ನಲ್ಲಿ ಭಾಗಿಯಾಗಿ ಮನವಿಪತ್ರ ಸ್ವೀಕರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಶ್ರೀಮತಿ. ಶಶಿಕಲಾ ಜೊಲ್ಲೆ, “ತನ್ನ ಬಳಕೆದಾರರನ್ನು ಬಲಿಪಡಿಯುವ ಕೆಲವೇ ಉತ್ಪನ್ನಗಳಲ್ಲಿ ತಂಬಾಕು ಕೂಡ ಒಂದು. ಚಲನಚಿತ್ರ ಮತ್ತು ಜಾಹೀರಾತುಗಳಲ್ಲಿ ತಂಬಾಕನ್ನು ವೈಭವೀಕರಿಸುವುದು ಮಕ್ಕಳ ಮೇಲೆ ಭಾರೀ ಪರಿಣಾಮ ಬೀರುತ್ತದೆ. ತಂಬಾಕು ಬಳಕೆಯನ್ನು ತಗ್ಗಿಸಲು ಮನವಿಪತ್ರದಲ್ಲಿ ಮುಂದಿಟ್ಟಿರುವ ಶಿಫಾರಸ್ಸುಗಳನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ,” ಎಂದರು.

“ಮಕ್ಕಳು ತಮ್ಮ ಮನೆಯ ವಾತಾವರಣದಿಂದ ಹೆಚ್ಚು ಕಲಿಯುತ್ತಾರೆ. ಮನೆಗಳಲ್ಲೇ ತಂಬಾಕು ಬಳಕೆ ನಿಲ್ಲಬೇಕು. ತಂಬಾಕು ಬಳಕೆ ಕಡಿಮೆ ಮಾಡುವಲ್ಲಿ ಮಕ್ಕಳು, ಪೋಷಕರು, ಮತ್ತು ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ,” ಎಂದೂ ಜೊಲ್ಲೆ ತಿಳಿಸಿದರು.

ಮಕ್ಕಳಿಗೆ ತಂಬಾಕು ಉತ್ಪನ್ನಗಳು ಸುಲಭವಾಗಿ ಸಿಗದಂತೆ ಮಾಡಲು ತಂಬಾಕು ಮಾರಾಟಕ್ಕೆ ಮಾರಾಟಗಾರರ ಪರವಾನಗಿ ಕಡ್ಡಾಯಗೊಳಿಸುವುದು, ತಂಬಾಕಿನ ಹಾನಿಕಾರಕ ಪರಿಣಾಮಗಳು ಮತ್ತು ತಂಬಾಕು ನಿಯಂತ್ರಣಕ್ಕೆ ಇರುವ ಕಾನೂನುಗಳನ್ನು ಪಠ್ಯಕ್ರಮದಲ್ಲಿ ಅಳವಡಿಸುವುದು, ವಿವಿಧ ಸುವಾಸನೆಗಳ ಮೂಲಕ ಮಕ್ಕಳನ್ನು ತನ್ನತ್ತ ಆಕರ್ಷಿಸುವ ಹುಕ್ಕಾ ಬಾರ್ ಗಳನ್ನು ನಿಷೇಧಿಸುವುದು.

ಜಗಿಯುವ ತಂಬಾಕಿನ ಉತ್ಪಾದನೆ ಮತ್ತು ಮಾರಾಟವನ್ನು ನಿಷೇಧಿಸುವುದು, ಮತ್ತು ತಂಬಾಕು ಬೆಳೆಯುವ ರೈತರಿಗೆ ಪರ್ಯಾಯ ಬೆಳೆ ಬೆಳೆಯುವಂತೆ ಉತ್ತೇಜಿಸಲು ಕ್ರಮಕೈಗೊಳ್ಳುವುದು ಸೇರಿದಂತೆ ಹಲವು ಶಿಫಾರಸುಗಳು ಮನವಿ ಪತ್ರದಲ್ಲಿವೆ. ಈ ಪತ್ರವನ್ನು ಮುಖ್ಯಮಂತ್ರಿ ಶ್ರೀ. ಬಿ. ಎಸ್. ಯಡಿಯೂರಪ್ಪ, ಗೃಹ ಮತ್ತು ಕಾನೂನು ಸಚಿವ ಶ್ರೀ. ಬಸವರಾಜ ಬೊಮ್ಮಾಯಿ, ಮತ್ತು ನಗರಾಭಿವೃದ್ಧಿ ಸಚಿವ ಶ್ರೀ. ಭೈರತಿ ಬಸವರಾಜ್ ಅವರಿಗೂ ಸಲ್ಲಿಸಲಾಗುವುದು.

ಕನ್ಸೋರ್ಟಿಯಂ ಫಾರ್ ಟೊಬ್ಯಾಕೋ ಫ್ರೀ ಕರ್ನಾಟಕದ (ಸಿಎಫ್‌ಟಿಎಫ್‌ಕೆ) ಸಂಚಾಲಕರಾದ ಶ್ರೀ. ಎಸ್. ಜೆ. ಚಂದರ್ ಮಾತನಾಡಿ, “ತಂಬಾಕು ಅಪ್ರಾಪ್ತರ ಮೇಲೆ ವ್ಯಸನಕಾರಿ ಪ್ರಭಾವ ಬೀರುತ್ತದೆ. ಮಕ್ಕಳನ್ನು ಸುಲಭವಾಗಿ ಪ್ರಭಾವಿಸಬಹುದು. ಇದರಿಂದ ಮಕ್ಕಳು ತಂಬಾಕು ಉದ್ಯಮದ ಮುಖ್ಯ ಗುರಿಯಾಗಿದ್ದಾರೆ.

ಅಪ್ರಾಪ್ತರಿಗೆ ತಂಬಾಕಿನ ಲಭ್ಯತೆಯನ್ನು ನಿಷೇಧಿಸಬೇಕು. ಮಕ್ಕಳು, ಪೋಷಕರು, ಶಿಕ್ಷಕರು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರು ತಂಬಾಕು ಮುಕ್ತ ಪೀಳಿಗೆಯನ್ನು ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಈಗ ಪ್ರಾರಂಭಿಸಿರುವ ಅಭಿಯಾನ ಮುಂದಿನ ದಿನಗಳಲ್ಲಿ ಬಹುದೊಡ್ಡ ಚಳುವಳಿಯಾಗಿ ಹೊರಹೊಮ್ಮಲಿದೆ,” ಎಂದರು.

ಕ್ಯಾನ್ಸರ್ ತಜ್ಞ ಡಾ. ರಮೇಶ್ ಬಿಳಿಮಗ್ಗ, ಕರ್ನಾಟಕ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ (ಕೆಎಎಂಎಸ್) ಪ್ರಧಾನ ಕಾರ್ಯದರ್ಶಿ ಶ್ರೀ ಶಶಿ ಕುಮಾರ್, ನಿಮ್ಹಾನ್ಸ್ ನ ಮನೋವೈದ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಮತ್ತು ಮುಖ್ಯಸ್ಥೆ ಹಾಗು ಟೊಬ್ಯಾಕೊ ಕ್ವಿಟ್‌ಲೈನ್‌ನ ಉಸ್ತುವಾರಿ ಡಾ. ಪ್ರತಿಮಾ ಮೂರ್ತಿ, ನ್ಯಾಷನಲ್ ಲಾ ಸ್ಕೂಲ್ ಆಫ್ ಯೂನಿವರ್ಸಿಟಿಯ ಕಾನೂನು ಪ್ರಾಧ್ಯಾಪಕ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ. ಅಶೋಕ್ ಆರ್. ಪಾಟೀಲ್, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಶ್ರೀ. ಹರೀಶ್ ಪಾಂಡೆ, ಮತ್ತು ಇತರರು ಮಕ್ಕಳು, ಪೋಷಕರು ಮತ್ತು ಶಿಕ್ಷಕರೊಂದಿಗೆ ವೆಬಿನಾರ್‌ನಲ್ಲಿ ಭಾಗವಹಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending