ದಿನದ ಸುದ್ದಿ
ವಿಶ್ವ ತಂಬಾಕು ರಹಿತ ದಿನಾಚರಣೆ: ತಂಬಾಕು ಮುಕ್ತ ಪೀಳಿಗೆ ಸೃಷ್ಠಿಗೆ ಕೈಜೋಡಿಸಿದ ಮಕ್ಕಳು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರು; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಗೆ ಮನವಿ ಪಾತ್ರ ಸಲ್ಲಿಕೆ
ಸುದ್ದಿದಿನ,ಬೆಂಗಳೂರು: ವಿಶ್ವ ತಂಬಾಕು ರಹಿತ ದಿನಾಚರಣೆ 2021ರ ಅಂಗವಾಗಿ ಮಕ್ಕಳು, ಪೋಷಕರು, ಶಿಕ್ಷಕರು, ಮತ್ತು ಸಾರ್ವಜನಿಕ ಆರೋಗ್ಯ ತಜ್ಞರು ಕೈಜೋಡಿಸಿ ‘ತಂಬಾಕು ಮುಕ್ತ ಪೀಳಿಗೆ’ ನಿರ್ಮಾಣ ಮಾಡಲು ಪಣತೊಟ್ಟರು.
ತಂಬಾಕು ಮುಕ್ತ ಪೀಳಿಗೆ ನಿರ್ಮಿಸಲು ಕೈಗೊಳ್ಳಬೇಕಾದ ಕ್ರಮಗಳನ್ನು ಒಳಗೊಂಡ ಮನವಿ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಶ್ರೀಮತಿ. ಶಶಿಕಲಾ ಜೊಲ್ಲೆ ಅವರಿಗೆ ಸಲ್ಲಿಸಲಾಯಿತು.
ತಂಬಾಕು ಮುಕ್ತ ಪೀಳಿಗೆಯು ವಿಶ್ವ ಆರೋಗ್ಯ ಸಂಸ್ಥೆ (WHO) ಭಾರತ ಸೇರಿದಂತೆ ತನ್ನ ಸದಸ್ಯ ರಾಷ್ಟ್ರಗಳಲ್ಲಿ ಪ್ರೋತ್ಸಾಹಿಸುತ್ತಿರುವ ಅಭಿಯಾನವಾಗಿದೆ. ತಂಬಾಕು ಬಳಕೆದಾರರ ಪಟ್ಟಿಯಲ್ಲಿ ಜಾಗತಿಕವಾಗಿ ಭಾರತ ಎರಡನೇ ಸ್ಥಾನದಲ್ಲಿದ್ದು (268 ಮಿಲಿಯನ್), ಪ್ರತಿವರ್ಷ 13 ಲಕ್ಷ ಮಂದಿ ತಂಬಾಕು ಸಂಬಂಧಿತ ಖಾಯಿಲೆಗಳಿಂದ ಮೃತಪಡುತಿದ್ದಾರೆ.
ಭಾರತದಲ್ಲಿನ ಎಲ್ಲ ವಿಧದ ಕ್ಯಾನ್ಸರ್ ಗಳಿಗೆ ತಂಬಾಕು ಬಳಕೆ ಶೇ. 27%ರಷ್ಟು ಕಾರಣವಾಗಿದೆ. ಯುವಜನರಲ್ಲಿ ತಂಬಾಕು ಬಳಕೆ ಕುರಿತ ಜಾಗತಿಕ ಸಮೀಕ್ಷೆ (GYTS) ಪ್ರಕಾರ, ಭಾರತದಲ್ಲಿ ಶೇ. 14.6 ಕ್ಕಿಂತಲೂ ಹೆಚ್ಚು ಹದಿಹರೆಯದವರು (13-15 ವರ್ಷದವರು) ತಂಬಾಕನ್ನು ಬಳಸುತ್ತಾರೆ.
ವಿಶ್ವ ತಂಬಾಕು ರಹಿತ ದಿನಾಚರಣೆ 2021ರ ಅಂಗವಾಗಿ ಕನ್ಸೋರ್ಟಿಯಂ ಫಾರ್ ಟೊಬ್ಯಾಕೋ ಫ್ರೀ ಕರ್ನಾಟಕ (ಸಿಎಫ್‌ಟಿಎಫ್‌ಕೆ) ಸೋಮವಾರ ಆಯೋಜಿಸಿದ್ದ ‘ವಾಯ್ಸ್ ಫಾರ್ ಟೊಬ್ಯಾಕೊ-ಫ್ರೀ ಜನರೇಶನ್’ ವೆಬಿನಾರ್ ನಲ್ಲಿ ಮಾತಾನಾಡಿದ ಕಾಲೇಜು ವಿದ್ಯಾರ್ಥಿನಿ ಸಪ್ನಾ ಹೆಚ್. ಎಂ, “ಪ್ರಸ್ತುತ, ತಂಬಾಕು ಉತ್ಪನ್ನಗಳನ್ನು ಯಾರು ಯಾರಿಗಾದರೂ ಮತ್ತು ಎಲ್ಲಿಯಾದರೂ ಮಾರಾಟ ಮಾಡಲಾಗುತ್ತಿದೆ.
ತಂಬಾಕು ಉತ್ಪನ್ನಗಳು ಮಕ್ಕಳಿಗೆ ಲಭ್ಯವಾಗದಂತೆ ನೋಡಿಕೊಳ್ಳುವುದು ತಂಬಾಕು ಮುಕ್ತ ಪೀಳಿಗೆ ನಿರ್ಮಿಸುವ ನಿಟ್ಟಿನಲ್ಲಿ ಇಡುವ ಮೊದಲ ಮಹತ್ವದ ಹೆಜ್ಜೆಯಾಗುತ್ತದೆ. ಇದನ್ನು ಮಾರಾಟಗಾರರ ಪರವಾನಗಿ ಕಡ್ಡಾಯ ಮಾಡುವ ಮೂಲಕ ಸಾಧ್ಯವಾಗಿಸಬಹುದು,” ಎಂದು ಹೇಳಿದರು.
ವೆಬಿನಾರ್ ನಲ್ಲಿ ಭಾಗಿಯಾಗಿ ಮನವಿಪತ್ರ ಸ್ವೀಕರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಶ್ರೀಮತಿ. ಶಶಿಕಲಾ ಜೊಲ್ಲೆ, “ತನ್ನ ಬಳಕೆದಾರರನ್ನು ಬಲಿಪಡಿಯುವ ಕೆಲವೇ ಉತ್ಪನ್ನಗಳಲ್ಲಿ ತಂಬಾಕು ಕೂಡ ಒಂದು. ಚಲನಚಿತ್ರ ಮತ್ತು ಜಾಹೀರಾತುಗಳಲ್ಲಿ ತಂಬಾಕನ್ನು ವೈಭವೀಕರಿಸುವುದು ಮಕ್ಕಳ ಮೇಲೆ ಭಾರೀ ಪರಿಣಾಮ ಬೀರುತ್ತದೆ. ತಂಬಾಕು ಬಳಕೆಯನ್ನು ತಗ್ಗಿಸಲು ಮನವಿಪತ್ರದಲ್ಲಿ ಮುಂದಿಟ್ಟಿರುವ ಶಿಫಾರಸ್ಸುಗಳನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ,” ಎಂದರು.
“ಮಕ್ಕಳು ತಮ್ಮ ಮನೆಯ ವಾತಾವರಣದಿಂದ ಹೆಚ್ಚು ಕಲಿಯುತ್ತಾರೆ. ಮನೆಗಳಲ್ಲೇ ತಂಬಾಕು ಬಳಕೆ ನಿಲ್ಲಬೇಕು. ತಂಬಾಕು ಬಳಕೆ ಕಡಿಮೆ ಮಾಡುವಲ್ಲಿ ಮಕ್ಕಳು, ಪೋಷಕರು, ಮತ್ತು ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ,” ಎಂದೂ ಜೊಲ್ಲೆ ತಿಳಿಸಿದರು.
ಮಕ್ಕಳಿಗೆ ತಂಬಾಕು ಉತ್ಪನ್ನಗಳು ಸುಲಭವಾಗಿ ಸಿಗದಂತೆ ಮಾಡಲು ತಂಬಾಕು ಮಾರಾಟಕ್ಕೆ ಮಾರಾಟಗಾರರ ಪರವಾನಗಿ ಕಡ್ಡಾಯಗೊಳಿಸುವುದು, ತಂಬಾಕಿನ ಹಾನಿಕಾರಕ ಪರಿಣಾಮಗಳು ಮತ್ತು ತಂಬಾಕು ನಿಯಂತ್ರಣಕ್ಕೆ ಇರುವ ಕಾನೂನುಗಳನ್ನು ಪಠ್ಯಕ್ರಮದಲ್ಲಿ ಅಳವಡಿಸುವುದು, ವಿವಿಧ ಸುವಾಸನೆಗಳ ಮೂಲಕ ಮಕ್ಕಳನ್ನು ತನ್ನತ್ತ ಆಕರ್ಷಿಸುವ ಹುಕ್ಕಾ ಬಾರ್ ಗಳನ್ನು ನಿಷೇಧಿಸುವುದು.
ಜಗಿಯುವ ತಂಬಾಕಿನ ಉತ್ಪಾದನೆ ಮತ್ತು ಮಾರಾಟವನ್ನು ನಿಷೇಧಿಸುವುದು, ಮತ್ತು ತಂಬಾಕು ಬೆಳೆಯುವ ರೈತರಿಗೆ ಪರ್ಯಾಯ ಬೆಳೆ ಬೆಳೆಯುವಂತೆ ಉತ್ತೇಜಿಸಲು ಕ್ರಮಕೈಗೊಳ್ಳುವುದು ಸೇರಿದಂತೆ ಹಲವು ಶಿಫಾರಸುಗಳು ಮನವಿ ಪತ್ರದಲ್ಲಿವೆ. ಈ ಪತ್ರವನ್ನು ಮುಖ್ಯಮಂತ್ರಿ ಶ್ರೀ. ಬಿ. ಎಸ್. ಯಡಿಯೂರಪ್ಪ, ಗೃಹ ಮತ್ತು ಕಾನೂನು ಸಚಿವ ಶ್ರೀ. ಬಸವರಾಜ ಬೊಮ್ಮಾಯಿ, ಮತ್ತು ನಗರಾಭಿವೃದ್ಧಿ ಸಚಿವ ಶ್ರೀ. ಭೈರತಿ ಬಸವರಾಜ್ ಅವರಿಗೂ ಸಲ್ಲಿಸಲಾಗುವುದು.
ಕನ್ಸೋರ್ಟಿಯಂ ಫಾರ್ ಟೊಬ್ಯಾಕೋ ಫ್ರೀ ಕರ್ನಾಟಕದ (ಸಿಎಫ್‌ಟಿಎಫ್‌ಕೆ) ಸಂಚಾಲಕರಾದ ಶ್ರೀ. ಎಸ್. ಜೆ. ಚಂದರ್ ಮಾತನಾಡಿ, “ತಂಬಾಕು ಅಪ್ರಾಪ್ತರ ಮೇಲೆ ವ್ಯಸನಕಾರಿ ಪ್ರಭಾವ ಬೀರುತ್ತದೆ. ಮಕ್ಕಳನ್ನು ಸುಲಭವಾಗಿ ಪ್ರಭಾವಿಸಬಹುದು. ಇದರಿಂದ ಮಕ್ಕಳು ತಂಬಾಕು ಉದ್ಯಮದ ಮುಖ್ಯ ಗುರಿಯಾಗಿದ್ದಾರೆ.
ಅಪ್ರಾಪ್ತರಿಗೆ ತಂಬಾಕಿನ ಲಭ್ಯತೆಯನ್ನು ನಿಷೇಧಿಸಬೇಕು. ಮಕ್ಕಳು, ಪೋಷಕರು, ಶಿಕ್ಷಕರು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರು ತಂಬಾಕು ಮುಕ್ತ ಪೀಳಿಗೆಯನ್ನು ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಈಗ ಪ್ರಾರಂಭಿಸಿರುವ ಅಭಿಯಾನ ಮುಂದಿನ ದಿನಗಳಲ್ಲಿ ಬಹುದೊಡ್ಡ ಚಳುವಳಿಯಾಗಿ ಹೊರಹೊಮ್ಮಲಿದೆ,” ಎಂದರು.
ಕ್ಯಾನ್ಸರ್ ತಜ್ಞ ಡಾ. ರಮೇಶ್ ಬಿಳಿಮಗ್ಗ, ಕರ್ನಾಟಕ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ (ಕೆಎಎಂಎಸ್) ಪ್ರಧಾನ ಕಾರ್ಯದರ್ಶಿ ಶ್ರೀ ಶಶಿ ಕುಮಾರ್, ನಿಮ್ಹಾನ್ಸ್ ನ ಮನೋವೈದ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಮತ್ತು ಮುಖ್ಯಸ್ಥೆ ಹಾಗು ಟೊಬ್ಯಾಕೊ ಕ್ವಿಟ್‌ಲೈನ್‌ನ ಉಸ್ತುವಾರಿ ಡಾ. ಪ್ರತಿಮಾ ಮೂರ್ತಿ, ನ್ಯಾಷನಲ್ ಲಾ ಸ್ಕೂಲ್ ಆಫ್ ಯೂನಿವರ್ಸಿಟಿಯ ಕಾನೂನು ಪ್ರಾಧ್ಯಾಪಕ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ. ಅಶೋಕ್ ಆರ್. ಪಾಟೀಲ್, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಶ್ರೀ. ಹರೀಶ್ ಪಾಂಡೆ, ಮತ್ತು ಇತರರು ಮಕ್ಕಳು, ಪೋಷಕರು ಮತ್ತು ಶಿಕ್ಷಕರೊಂದಿಗೆ ವೆಬಿನಾರ್‌ನಲ್ಲಿ ಭಾಗವಹಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.
ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.
ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


