ದಿನದ ಸುದ್ದಿ

ಮಾಜಿ ಸಚಿವ ವೈ.ನಾಗಪ್ಪ ನಿಧನ : ಸಂತಾಪ ಸೂಚನೆ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಹರಿಹರದಿಂದ ಮೂರು ಬಾರಿ ಶಾಸಕರಾಗಿ ಹಾಗೂ ಈ ಹಿಂದೆ 2004-05 ರ ಅವಧಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಮಾಜ ಕಲ್ಯಾಣ ಖಾತೆಯ ಸಚಿವರಾಗಿದ್ದ ಡಾ.ವೈ.ನಾಗಪ್ಪ ಅವರು ನಿಧಿನದಿಂದ ಮನಸ್ಸಿಗೆ ನೋವುಂಟಾಗಿದೆ.

ಶ್ರೀಯುತರ ಅಗಲಿಕೆಯಿಂದ ನಮ್ಮ ನಾಡಿನ ಹಿರಿಯ ಮುಖಂಡರೊಬ್ಬರನ್ನು ಕೆಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿಯನ್ನು ಮತ್ತು ಅವರ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version