Connect with us

ದಿನದ ಸುದ್ದಿ

ಯಾದಗಿರಿ ಜಿಲ್ಲೆಯಲ್ಲಿ 528 ಕೊರೊನಾ ಆ್ಯಕ್ಟೀವ್ ಕೇಸ್

Published

on

ಸುದ್ದಿದಿನ,ಯಾದಗಿರಿ: ನೋವೆಲ್ ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳ ಪೈಕಿ ಮಂಗಳವಾರ ಪಾಸಿಟಿವ್ ಬಂದ 61 ವರದಿಗಳು ಸೇರಿ ಜೂನ್ 9ರವರೆಗೆ ಒಟ್ಟು 642 ವರದಿ ಪಾಸಿಟಿವ್ ಬಂದಿವೆ.

ಮಂಗಳವಾರದ 661 ನೆಗೆಟಿವ್ ವರದಿ ಸೇರಿ ಈವರೆಗೆ 16,977 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಹೊಸದಾಗಿ ಕಳುಹಿಸಲಾದ 431 ಮಾದರಿಗಳು ಸೇರಿದಂತೆ 1,437 ಮಾದರಿಗಳ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್-19 ಖಚಿತಪಟ್ಟ 642 ವ್ಯಕ್ತಿಗಳ ಪೈಕಿ 113 ಜನ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. ಉಳಿದ 528 ಪ್ರಕರಣಗಳು ಸಕ್ರಿಯವಾಗಿರುತ್ತವೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1,059 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2,426 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 29 ಕಂಟೇನ್‍ಮೆಂಟ್ ಝೋನ್‍ಗಳನ್ನು ರಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹೊಸ ಜಿಲ್ಲಾಸ್ಪತ್ರೆಯಲ್ಲಿ 123 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪೂರ ಕೊರೊನಾ ಕೇರ್ ಸೆಂಟರ್‍ನಲ್ಲಿ 71 ಜನರನ್ನು, ಸುರಪುರ ಕೊರೊನಾ ಕೇರ್ ಸೆಂಟರ್‍ನಲ್ಲಿ 80 ಮತ್ತು ಏಕಲವ್ಯ ಕೊರೊನಾ ಕೇರ್ ಸೆಂಟರ್‍ನಲ್ಲಿ 179 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 31 ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್‍ಗಳಲ್ಲಿ ಒಟ್ಟು 1,350 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950ಗೆ ಮಂಗಳವಾರ 5 ಕರೆಗಳು ಬಂದಿವೆ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕರಲ್ಲಿ ಮನವಿ

ಕೋವಿಡ್-19 ಪೀಡಿತ ದೇಶಗಳಿಂದ ಹಿಂತಿರುಗಿರುವ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಯಾರಾದರು ಭಾರತಕ್ಕೆ ಹಿಂತಿರುಗಿದ ಮತ್ತು ಬೇರೆ ರಾಜ್ಯಗಳಿಂದ ಯಾದಗಿರಿ ಜಿಲ್ಲೆಗೆ ಹಿಂತಿರುಗಿದ ದಿನದಿಂದ 14 ದಿನಗಳವರೆಗೆ ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ನಿಗದಿತ ಕ್ವಾರಂಟೈನ್ ಕೇಂದ್ರದಲ್ಲಿ ಪ್ರತ್ಯೇಕವಾಗಿರಬೇಕು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳಬೇಕು.

ಮಾಹಿತಿಗಾಗಿ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಅಥವಾ ವಾಟ್ಸ್‍ಆ್ಯಪ್ ಸಂಖ್ಯೆ:9449933946 ಅಥವಾ 24*7 ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ಟಿಶ್ಯೂ ಪೇಪರನ್ನು ಬಳಸಿ. ಕೈ ಸ್ವಚ್ಛಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಿ ಮತ್ತು ಸಾಮಾಜಿಕ ಸಮೂಹ ಗುಂಪು ಸೇರುವುದನ್ನು ಮಾಡಬಾರದು ಎಂದು ಅವರು ಸಲಹೆ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

Published

on

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.

ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪ‌ರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

Published

on

ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.

ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸ್‌ಆ್ಯಪ್/ ಎಸ್‌ಎಂಎಸ್‌ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.

ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‌ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.

ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ

Published

on

ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.

ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending