ದಿನದ ಸುದ್ದಿ

ಯಡಿಯೂರಪ್ಪ ಅವರೇ, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಸೋಂಕು ಉಲ್ಬಣಗೊಳ್ಳುತ್ತಿದೆ? : ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು: ಕೊರೊನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ ಮತ್ತೆ ಅವತರಿಸಿ ಕೇಕೆ ಹಾಕುತ್ತಿರುವ ಕೊರೊನಾ ವೈರಸ್. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಸೋಂಕು ಉಲ್ಬಣಗೊಳ್ಳುತ್ತಿದೆ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕಾಗಿ ಸಂಪನ್ಮೂಲ ವ್ಯಯಮಾಡಬೇಕಾಗಿದೆ ಎಂಬ ಕುಂಟುನೆಪ ಹೇಳಿ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿದ ಮುಖ್ಯಮಂತ್ರಿ ಅವರು ಈಗ ಏನು ಹೇಳುತ್ತಾರೆ? ಅಷ್ಟೊಂದು ಆದ್ಯತೆ ನೀಡಿದ್ದರೆ ಕೊರೊನಾ ನಿಯಂತ್ರಣಕ್ಕೆ ಬರಬೇಕಿತ್ತಲ್ಲಾ? ಯಾಕೆ ನಿಯಂತ್ರಣ ತಪ್ಪಿದೆ? ಎಂದರು.

ಇದನ್ನೂ ಓದಿ | ದಾವಣಗೆರೆ | ಜನಸ್ಪಂದನ ಸಭೆ ; ಸಾರ್ವಜನಿಕರಿಂದ ಅರ್ಜಿಗಳ ಮಹಾಪೂರ : ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್, ಮಿಸ್ ಮಾಡ್ದೆ ಓದಿ..! 

ಕೊರೊನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಲಾಗಿದೆ ಎಂದು ಮೊನ್ನೆ ಮಂಡಿಸಿದ್ದ ಬಜೆಟ್ ನಲ್ಲಿ ಹೇಳಿರುವ ಮುಖ್ಯಮಂತ್ರಿಗಳು, ಮಾಡಿರುವ ಖರ್ಚಿನ ವಿವರ ಮಾತ್ರ ತಿಳಿಸಿಲ್ಲ. ಈಗಲಾದರೂ ಆ ಹಣ ಯಾವ ಉದ್ದೇಶಗಳಿಗೆ ಖರ್ಚು ಮಾಡಿದ್ದೀರಿ ಎಂಬ ಲೆಕ್ಕದ ವಿವರವನ್ನು ಜನರ ಮುಂದಿಡಿ.

ಕೊರೊನಾ ವೈರಸ್‌ಗೆ ಲಸಿಕೆ ಬಂದಿದೆ, ನಿಮ್ಮ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೊನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ ಎಂದು ನುಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version