Connect with us

ರಾಜಕೀಯ

ನಾನೇನೋ ಲಕ್ಕಿಡಿಪ್ ಸಿಎಂ, ನಿಮ್ಮ ಸಿಎಂ ಕಥೆ ಏನು? : ಬಿಜೆಪಿಗೆ ಪ್ರಶ್ನೆಗಳ ಮೂಲಕವೇ ಬಿಸಿ ಮುಟ್ಟಿಸಿದ ಹೆಚ್.ಡಿ.ಕುಮಾರಸ್ವಾಮಿ

Published

on

ಸುದ್ದಿದಿನ,ಬೆಂಗಳೂರು: ತಮ್ಮನ್ನು ಲಕ್ಕಿಡಿಪ್ ಎಂದ ಬಿಜೆಪಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿಯ ಕುಟುಂಬ ರಾಜಕಾರಣದ ಜನ್ಮ ಜಾಲಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ಪು ಎಂಬುದನ್ನು ಮರೆತರೆ ಹೇಗೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಸಿಎಂ ಬೊಮ್ಮಾಯಿ ಅವರ ಹೆಸರು ಪ್ರಸ್ತಾಪ ಮಾಡದೆಯೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಧಿಕಾರದ ನೆರಳೂ ಕಾಣದೆ ಬೆಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರ್ಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್‌ʼಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ, ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಹೆಸರೆತ್ತದೆಯೇ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಲಕ್ಕಿಡಿಪ್‌ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ʼಆಪರೇಷನ್‌ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ? ಎಂದು ಬಿಜೆಪಿಯ ಬಿಜೆಪಿಯ ಅಪರೇಶನ್ ಕಮಲದ ರಾಜಕಾರಣವನ್ನು ಪ್ರಶ್ನೆ ಮಾಡಿದ್ದಾರೆ.

ಇನ್ನು, ಜಗತ್ತಿನ ಅಂಕುಡೊಂಕಿನ ಮಾತು ಹಾಗಿರಲಿ. ಪ್ರಧಾನಿಮಂತ್ರಿ ಸಂಚರಿಸಿದ ರಸ್ತೆಯನ್ನೇ ನೋಡಿದರೆ ಸಾಕು, ಅರಿವಾಗುತ್ತದೆ ನಿಮ್ಮ ಅಂಕೆಷ್ಟು, ಡೊಂಕೆಷ್ಟು!!. ʼಮಿಷನ್‌ ದಕ್ಷಿಣ್‌ʼ ಮೂಲ ತಾತ್ಪರ್ಯ ಏನು? ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್‌ʼನಲ್ಲಿ ಮಂಥನ. ಅದರ ಮರ್ಮ ಅರಿಯದವರು ಯಾರೂ ಇಲ್ಲ ಎಂದು ಹೆಚ್ ಡಿಕೆ ಟೀಕಿಸಿದ್ದಾರೆ.

ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ. ಸ್ವಪಕ್ಷವನ್ನೇ ಒಡೆದು ನನ್ನ ಜತೆ ಬರಲು ರೆಡಿ ಇದ್ದ ಆ ನಿಮ್ಮ ನಾಯಕರನ್ನು ನಾನೇ ತಡೆಯದೇ ಇದ್ದಿದ್ದರೆ, ನೀವು ಮತ್ತು ನಿಮ್ಮ ಪಕ್ಷ ಆವತ್ತೇ ನಡುನೀರಿನಲ್ಲಿ ಮುಳುಗಿಹೋಗುತ್ತಿದ್ದಿರಿ. ಅನುಮಾನ ಇದ್ದರೆ ಒಮ್ಮೆ ಅವರನ್ನೇ ಕೇಳಿ. ನನ್ನ ನಡುಕದ ಬಗ್ಗೆ ಆಮೇಲೆ ಮಾತನಾಡಿ ಎಂದು 2006ರ ಸರಕಾರ ರಚನೆಯ ಸಂದರ್ಭವನ್ನು ಬಿಜೆಪಿಗೆ ನೆನಪಿಸಿದ್ದಾರೆ.

ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ. ಮತ್ತೆ ನಿಮ್ಮ ಅವಗಾಹನೆಗೆ, ಇಲ್ಲಿದೆ ನೋಡಿ,
1.ಯಡಿಯೂರಪ್ಪ & ಸನ್ಸ್‌
2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ
3.ಅಶೋಕ್-ರವಿ
4.ವಿ.ಸೋಮಣ್ಣ-ಅರುಣ್‌ ಸೋಮಣ್ಣ
5.ಅರವಿಂದ ಲಿಂಬಾಳಿ-ರಘು
6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್‌
7.ಜಗದೀಶ ಶೆಟ್ಟರ್-ಪ್ರದೀಪ್‌ ಶೆಟ್ಟರ್‌
8.ಮುರುಗೇಶ ನಿರಾಣಿ-ಹನುಮಂತ ನಿರಾಣಿ
9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್
10.ಜಾರಕಿಹೊಳಿ ಕುಟುಂಬ
11.ಕತ್ತಿ ಕುಟುಂಬ
12.ಜೊಲ್ಲೆ ಕುಟುಂಬ
13.ಅಂಗಡಿ ಕುಟುಂಬ
14.ಉದಾಸಿ ಕುಟುಂಬ
15.ಶ್ರೀರಾಮುಲು ಕುಟುಂಬ
16.ರೆಡ್ಡಿ ಬ್ರದರ್ಸ್‌

ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. ‘ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ’ ಎನ್ನುವುದೂ ಗೊತ್ತಿದೆ ಎಂದು ಕಮಲ ಪಾಳೆಯದಲ್ಲಿರುವ ಕುಟುಂಬ ರಾಜಕಾರಣವನ್ನು ಅವರು ಪಟ್ಟಿ ಮಾಡಿದ್ದಾರೆ.

ರಾಷ್ಟ್ರವ್ಯಾಪಿ ವ್ಯಾಪಿಸಿರುವ ಕಮಲದ ಕುಟುಂಬವ್ಯಾಧಿ ಕೊಂಡಿಗಳನ್ನು ಬಿಚ್ಚಬೇಕೆ?, ನೀವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೌರಿಶಂಕರದಷ್ಟು ಎತ್ತರ ಕಾಣುವ ʼಬಿಜೆಪಿ ಪರಿವಾರ ಪರ್ವತʼಗಳ ಬಗ್ಗೆ ಹೇಳಬೇಕಾದರೆ ‘ಪರಿವಾರಕೋಟಿ’ಯನ್ನೇ ಬರೆಯಬಹುದು ಎಂದು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

 

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್‌ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್‌ರಾಮ್ ಅನುಯಾಯಿಗಳು ಭಾಗವಹಿಸಿದ್ದರು.

ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ಚುನಾವಣಾ ಆಯೋಗ ಸಮಾವೇಶ

Published

on

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.

ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.

ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending