ದಿನದ ಸುದ್ದಿ
ಪಾದುವ ಕಾಲೇಜಿನಲ್ಲಿ ಯೋಗ ದಿನಾಚರಣೆ
ಸುದ್ದಿದಿನ,ಮಂಗಳೂರು: ಪಾದುವ ಕಾಲೇಜಿನಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ನ ಸಹಭಾಗಿತ್ವದಲ್ಲಿ ಮಂಗಳವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.
ಮುಖ್ಯ ಅತಿಥಿ, ವಿಶ್ವವಿದ್ಯಾನಿಲಯದ ಯೋಗ ವಿಜ್ಞಾನ ವಿಭಾಗದ ಯೋಗ ತರಬೇತುದಾರ ಡಾ. ರಂಗಪ್ಪ, ಯೋಗದ ಹಿನ್ನೆಲೆ ಮತ್ತು ಅದರ ಅಗತ್ಯತೆಯನ್ನು ತಿಳಿಸಿಕೊಟ್ಟರು. ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜನ್ ವಿ. ಎನ್ , ಯೋಗದಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳನ್ನು ತಿಳಿಸಿದರು. ವೇದಿಕೆಯಲ್ಲಿ ಯುವ ರೆಡ್ ಕ್ರಾಸ್, ಜೆ ಸಿ ಐ ಮಂಗಳೂರು ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಲೇಜಿನ ಉಪನ್ಯಾಸಕ ದೀನತ್ ಡೇಸಾ ಸ್ವಾಗತ ಕೋರಿದರು. ದೈಹಿಕ ಶಿಕ್ಷಣ ನಿರ್ದೇಶಕ ಹರಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಡಾ. ರಂಗಪ್ಪ ಅವರ ಮಾರ್ಗದರ್ಶನದಲ್ಲಿ ಸುಮಾರು 1 ಗಂಟೆಗಳ ಕಾಲ ವಿದ್ಯಾರ್ಥಿಗಳು ಯೋಗಾಸನ ಅಭ್ಯಾಸ ನಡೆಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243