ದಿನದ ಸುದ್ದಿ
ಜೂ.21 ರಂದು ಸಂತೆಬೆನ್ನೂರಿನಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಸುದ್ದಿದಿನ,ದಾವಣಗೆರೆ : ಜೂ.21 ರಂದು ಬೆಳಿಗ್ಗೆ 5.30ಕ್ಕೆ ಪುಷ್ಕರಣೆ, ಸಂತೆಬೆನ್ನೂರು, ಚನ್ನಗಿರಿ ಇಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಜಿಲ್ಲಾ ಆಯಷ್ ಇಲಾಖೆ ದಾವಣಗೆರೆ ಭಾರತೀಯ ಪುರಾತತ್ವ ಇಲಾಖೆ, ಸ್ಮಾರ್ಟ್‍ಸಿಟಿ ಲಿ., ಹಾಗೂ ಜಿಲ್ಲಾ ಯೋಗ ಒಕ್ಕೂಟ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಜಿಲ್ಲಾ ಪೋಲಿಸ್ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ತಾಲ್ಲೂಕು ಆಡಳಿತ ಚನ್ನಗಿರಿ, ರಾಜ್ಯ ಎನ್.ಸಿ.ಸಿ ಘಟಕ, ರಾಜ್ಯ ಎನ್.ಸಿ.ಸಿ ಘಟಕ, ಪ್ರಜಾಪಿತ ಬ್ರಹ್ಮಕುಮಾರೀಸ್, ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ, ಪತಂಜಲಿ ಯೋಗ ಸಮಿತಿ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಉದ್ಘಾಟಿಸುವರು. ಚನ್ನಗಿರಿ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಕೆ.ಮಾಡಾಳ್ ವಿರೂಪಾಕ್ಷಪ್ಪ ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಉಪಸ್ಥಿತಿರಾಗಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ, ಜಗಳೂರು ಕ್ಷೇತ್ರದ ಶಾಸಕ ಹಾಗೂ ಕನಾಟಕ ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ, ಮಾಯಕೊಂಡ ಕ್ಷೇತ್ರದ ಶಾಸಕ ಹಾಗೂ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ , ಹಾಗೂ ಕರ್ನಾಟಕ ವಿಧಾನ ಪರಿಷತ್‍ನ ಸರ್ಕಾರಿ ಮುಖ್ಯ ಸಚೇತಕರಾದ, ವೈ.ಎ.ನಾರಾಯಣಸ್ವಾಮಿ ಪಾಲ್ಗೊಳ್ಳುವರು.
ಮುಖ್ಯ ಅತಿಥಿಗಳಾಗಿ ದಾವಣಗೆರೆ ದಕ್ಷಿಣ ವಿಧಾನ ಸಭೆ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ದಾವಣಗೆರೆ ಉತ್ತರ ವಿಧಾನ ಸಭೆ ಕ್ಷೇತ್ರದ ಶಾಸಕರಾದ ಎಸ್.ಎ ರವೀಂದ್ರನಾಥ್, ಹರಿಹರ ಕ್ಷೇತ್ರದ ಶಾಸಕರಾದ ಎಸ್.ರಾಮಪ್ಪ, ಹಾಗೂ ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಮೋಹನ್ ಕುಮಾರ್ ಕೊಂಡಜ್ಜಿ, ಆರ್.ಶಂಕರ್, ಕೆ.ಪಿ.ನಂಜುಂಡಿ ವಿಶ್ವಕರ್ಮ, ಡಿ.ಎಸ್ ಅರುಣ್, ರವಿಕುಮಾರ್.ಎನ್, ಕೆ.ಎಸ್ ನವೀನ್, ಡಾ.ತೇಜಸ್ವಿನಿಗೌಡ, ಸಂತೇಬೆನ್ನೂರು ಗ್ರಾ.ಪಂ ಅಧ್ಯಕ್ಷರಾದ ಶಿಲ್ಪಮರುಳಸಿದ್ದೇಶ್ ಭಾಗವಹಿಸುವರು.
ಸರ್ಕಾರದ ಪ್ರಧಾನ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿ.ಪಂ ಆಡಳಿತಾಧಿಕಾರಿಗಳಾದ ಎಸ್.ಆರ್, ಉಮಾಶಂಕರ್, ಆಯುಷ್ ಇಲಾಖೆಯ ಆಯುಕ್ತರಾದ ರಾಮಚಂದ್ರ, ಪೂರ್ವವಲಯದ ಪೊಲೀಸ್ ಮಹಾನಿರೀಕ್ಷಕರಾದ ಡಾ.ಕೆ.ತ್ಯಾಗರಾಜನ್ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ ಚೆನ್ನಪ್ಪ, ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿವರ್ಗದವರು ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ4 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ7 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ3 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ2 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ಕ್ರೀಡೆ2 days agoಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

