ದಿನದ ಸುದ್ದಿ
ಮುಂದಿನ ವರ್ಷದಿಂದ ಶಾಲಾ ಪಠ್ಯದಲ್ಲಿ ಯೋಗ ಶಿಕ್ಷಣ : ಮುಖ್ಯಮಂತ್ರಿ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ಮುಂದಿನ ವರ್ಷದಿಂದ ಶಾಲಾ ಪಠ್ಯದಲ್ಲಿ ಯೋಗ ಶಿಕ್ಷಣ ಸೇರ್ಪಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಯೋಗ ಕುರಿತ ಬೆಂಗಳೂರಿನ ಹೊರ ವಲಯದ ಪ್ರಶಾಂತಿ ಕುಟಿರಂ ಎಸ್. ವ್ಯಾಸ ಸ್ವಾಯತ್ತ ವಿಶ್ವವಿದ್ಯಾಲಯ ಆಯೋಜಿಸಿದ್ದ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಬಹಳಷ್ಟು ಮಾನಸಿಕ ಒತ್ತಡ ಉಂಟಾಗುತ್ತಿದೆ. ಅದರಲ್ಲೂ ಕೋವಿಡ್ ನಂತರ ಇದು ಹೆಚ್ಚಾಗಿದೆ ಎಂಬ ಮಾತು ಸಾರ್ವತ್ರಿಕವಾಗಿ ಕೇಳಿಬರುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ ಪ್ರೌಢಶಾಲೆ ಮತ್ತು ಕಾಲೇಜುಗಳ ಪಠ್ಯದಲ್ಲಿ ಯೋಗ ಶಿಕ್ಷಣ ಪರಿಚಯಿಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243