ದಿನದ ಸುದ್ದಿ
ಸೌಹಾರ್ದತೆ ಮತ್ತು ಶಾಂತಿಗಾಗಿ ಯೋಗ
![](https://suddidina.com/wp-content/uploads/2018/06/Yoga-suddidina.jpg)
ಸುದ್ದಿದಿನ ಡೆಸ್ಕ್ : ಇಂದು ವಿಶ್ವದೆಲ್ಲೆಡೆ ನಾಲ್ಕನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಇಂದು ಬೆಳಿಗ್ಗೆ 6.30 ಕ್ಕೆ ದೆಹರಾಧೂನ್ ಅಲ್ಲಿ , 60000 ಜನರೊಂದಿಗೆ ಯೋಗ ದಿನಾಚರಣೆ ಆಚರಿಸುತ್ತಾ .. ” ಯೋಗ ವಿಶ್ವದ ರಾಷ್ಟ್ರ ಗಳ ಸೌಹಾರ್ದತೆಯನ್ನು ಬೆಳೆಸಲು ಕೊಂಡಿ ಆಗಿದೆ” ಎಂದು ನುಡಿದರು.
ಉಪ ರಾಷ್ಟ್ರಪತಿ ವಂಕಯ್ಯ ನಾಯ್ಡು ಅವರು ಮುಂಬೈನ ಬಾಂದ್ರಾ ದಲ್ಲಿ ಯೋಗ ದಿನಾಚರಣೆ ಆಚರಿಸುತ್ತ,”ಯೋಗ ಮನುಷ್ಯ ನನ್ನ ಯೋಗ್ಯ ನಾಗಿಸುತ್ತದೆ “ಎಂದರು.
ಕರ್ನಾಟಕದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವ ಯೋಗ ದಿನಾಚರಣೆ ಸಂದರ್ಭದಲ್ಲಿ “ಯೋಗ ದೇಹ ಮತ್ತು ಮನಸ್ಸಿನ ಕ್ರಯಾಶೀಲ ಚಟುವಟಿಕೆ ಗೆ ಅತ್ಯುತ್ತಮ ” ಎಂದಿದ್ದಾರೆ. ಯೋಗ ಕೇವಲ ಒಂದು ದಿನದ ಆಚರಣೆ ಆಗಿದೆ, ನಿಮ್ಮ ದಿನನಿತ್ಯ ದ ಚಟುವಟಿಕೆ ಆಗಲಿ ಎಂದು ವಿನಂತಿಸಿಕೊಂಡರು.
ಬಾಬಾ ರಾಮ್ ದೇವ್ ಅವರ ರಾಜಸ್ಥಾನದ ಮುಖ್ಯ ಮಂತ್ರಿ ವಸುಂಧರ ರಾಜೇ ಅವರ ನೇತೃತ್ವದಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸುತ್ತಾ “ಯೋಗದಿಂದ ಯುವಪೀಳಿಗೆಯ ಖಿನ್ನತೆ ಮತ್ತು ಉದ್ವೇಗ ಕಡಿಮೆಯಾಗುತ್ತದೆ ” ಎಂದು ಯೋಗಾಸನದ ಮಹತ್ವ ಸಾರಿದರು.
ಕೊರೆಯುವ ಚಳಿಯಲ್ಲಿ ಸೇನಾ ಸಿಬ್ಬಂದಿಗಳು ಲಡಾಕ್ ನ 18000 ಅಡಿ ಎತ್ತರದ ಹಿಮ ಪರ್ವತ ದಲ್ಲಿ ಯೋಗ ದಿನಾಚರಣೆ ಆಚರಿಸುತ್ತಿದ್ದಾರೆ.
ಭಾರತದ ನೌಕಾಪಡೆ ಕೊಚ್ಚಿಯ INS ಜಮುನಾ ನೌಕೆಯಲ್ಲಿ ಯೋಗಾಸನ ಮಾಡುವುದರೊಂದಿಗೆ ಯೋಗ ದಿನಾಚರಣೆ ಆಚರಿಸುತ್ತಿದ್ದಾರೆ.ಭಾರತದ ವಾಯುಪಡೆ ಯ ಸಿಬ್ಬಂದಿ ಆಕಾಶದಿಂದ 15000 ಅಡಿ ಮೇಲೆ ಹೋಗಿ ಗಾಳಿಯಲ್ಲಿ ಯೋಗಾಸನ ಮಾಡಿದರು.
ಇಂಡೋ-ಟಿಬೆಟ್ ಬಾರ್ಡರ್ ನ ಸೈನಿಕರು..ಅಡಿಗರು ದನಿಯಲ್ಲಿ ಮುಳುಗಿ… “ನದಿ ಯೋಗ” ಮಾಡುವುದರೊಂದಿಗೆ ಯೋಗ ದಿನಾಚರಣೆ ಆಚರಿಸುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ5 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ3 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!
-
ದಿನದ ಸುದ್ದಿ3 days ago
ದಾವಣಗೆರೆ | ರೈತ ಮುಖಂಡರೊಂದಿಗೆ ಸಭೆ ; ಕಾಡಾ ಸಭೆ ಶೀಘ್ರ, ಕಾಲುವೆಗೆ ನೀರು ಬಿಡಲು ದಿನಾಂಕ ನಿಗದಿ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್