ದಿನದ ಸುದ್ದಿ

ದಾವಣಗೆರೆ | ಮಹಿಳಾ ಸೇವಾ ಸಮಾಜ ಶಾಲೆಯಲ್ಲಿ ಯೋಗ ದಿನಾಚರಣೆ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಸೇವಾ ಸಮಾಜದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಟಿಎಂ ಚಿನ್ನಮ್ಮ ಮಹೇಶ್ವರಯ್ಯ ಮೆಮೋರಿಯಲ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಇಂದು ವಿಶ್ವ ಯೋಗ ದಿನದ ಅಂಗವಾಗಿ ಯೋಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಮಹಿಳಾ ಸೇವಾ ಸಮಾಜದ ಕಾರ್ಯದರ್ಶಿಗಳಾದ ಶ್ರೀಮತಿ ನೀಲಗುಂದ ಜಯಮ್ಮರವರು ಗಿಡಕ್ಕೆ ನೀರೆರೆಯುವ ಮೂಲಕ ಯೋಗ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡುತ್ತಾ ಪತಂಜಲಿ ಮುನಿಗಳನ್ನು ನೆನೆದು, ಯೋಗ ದಿನಾಚರಣೆಯ ಹಿನ್ನೆಲೆ, ಮಹತ್ವವನ್ನು ತಿಳಿಸಿದರು.

ದೈಹಿಕ ಶಿಕ್ಷಕರಾದ ಶ್ರೀ ಮರುಳಸಿದ್ದಪ್ಪ ಎಂ ಎನ್ , ಶ್ರೀ ಎಂ ಬಿ ಜಗದೀಶ ಕುಮಾರ್ ಹಾಗೂ ರಾಜ್ಯಮಟ್ಟದ ಯೋಗ ಪಟು, ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾದ ಕುಮಾರಿ ಪಲ್ಲವಿ ಕೆ ಯವರ ನೇತೃತ್ವದಲ್ಲಿ ಯೋಗಾಸನವನ್ನು ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಶ್ರೀಮತಿ ದ್ರಾಕ್ಷಾಯಣಮ್ಮ ಆರ್,ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರವಿಕುಮಾರ್ ಹೆಚ್ಎಸ್, ವಿದ್ಯಾರ್ಥಿಗಳು ಹಾಗೂ ಎಲ್ಲಾ ಬೋಧಕ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version