Connect with us

ದಿನದ ಸುದ್ದಿ

ಮಂಗಳೂರು | ಯೋಗದ ವೈದ್ಯಕೀಯ ಲಾಭ ಜಗತ್ತಿಗೇ ತಿಳಿಯಬೇಕು : ಡಾ. ವಿಕ್ರಂ ಶೆಟ್ಟಿ

Published

on


ವಿವಿ ಕಾಲೇಜು: ಸ್ನಾತಕೋತ್ತರ ಯೋಗ ವಿಜ್ಞಾನ ವಿಭಾಗದ ವತಿಯಿಂದ ಯೋಗ ದಿನಾಚರಣೆ


ಸುದ್ದಿದಿನ,ಮಂಗಳೂರು: ಯೋಗದ ಬಗ್ಗೆ ಸಂಶೋಧನೆ ಕೈಗೊಂಡು ಅದರ ಫಲಿತಾಂಶವನ್ನು ಅಂತಾರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಪ್ರಕಟಿಸಿ ಅದರ ವೈದ್ಯಕೀಯ ಲಾಭಗಳನ್ನು ಸಾಬೀತುಪಡಿಸಿದಾಗ ಮಾತ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗಕ್ಕೆ ಇನ್ನಷ್ಟು ಪ್ರಚಾರ ನೀಡಲು ಸಾಧ್ಯ, ಎಂದು ನಿಟ್ಟೆ ಮೀನಾಕ್ಷಿ ಇನ್ಸ್ಟಿಟ್ಯೂಟ್ ಆಫ್ ಕ್ರೇನಿಯೊಫೇಶಿಯಲ್ ಸರ್ಜರಿಯ ನಿರ್ದೇಶಕ ಪ್ರೊ. ಡಾ. ವಿಕ್ರಂ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.

ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ಯೋಗ ವಿಜ್ಞಾನ ವಿಭಾಗದ ವತಿಯಿಂದ ಮಂಗಳವಾರ ಆಯೋಜಿಸಲಾಗಿದ್ದ ʼಅಂತಾರಾಷ್ಟ್ರೀಯ ಯೋಗ ದಿನ- 2022’ ದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಯೋಗ ಇನ್ನಷ್ಟು ಆಕರ್ಷಕವಾಗಬೇಕು. ಎಲ್ಲಾ ವೈದ್ಯರೂ ತಮ್ಮ ರೋಗಿಗಳಿಗೆ ಅದನ್ನು ಸೂಚಿಸುವಂತಾಗಬೇಕು, ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಾ. ಅನಸೂಯ ರೈ, ಯೋಗ ಮತ್ತು ಸಾತ್ವಿಕ ಆಹಾರದ ಲಾಭವನ್ನು ನಾವೀಗ ಅರಿಯುತ್ತಿದ್ದೇವೆ. ಕಾಲೇಜಿನ ಯೋಗ ವಿಜ್ಞಾನ ವಿಭಾಗ ತೆರೆಮರೆಯಲ್ಲಿ ಕ್ರಿಯಾಶೀಲವಾಗಿರುವುದು ಸಂತಸದ ವಿಚಾರ, ಎಂದರಲ್ಲದೆ ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಯೋಗ ದಿನವನ್ನು ಯಶಸ್ವಿಯಾಗಿಸಿದ ಎಲ್ಲರನ್ನೂ ಅಭಿನಂದಿಸಿದರು. ಯೋಗ ವಿಜ್ಞಾನ ವಿಭಾಗದ ಡಾ. ಅಜಿತೇಶ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಾದ ನಯನಾ ಮತ್ತು ಪ್ರತ್ಯಕ್ಷ ಕುಮಾರ್ ಯೋಗಾಸನಗಳನ್ನು ಪ್ರದರ್ಶಿಸಿದರು.

ಕಾಲೇಜಿನ ದೈಹಿಕ ನಿರ್ದೇಶಕ ಡಾ. ಕೇಶವಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿ ಕ್ರೀಡೆಗೂ ಯೋಗದ ಅಗತ್ಯತೆ ಬಗ್ಗೆ ವಿವರಿಸಿದರು. ಹಿರಿಯ ಯೋಗ ವಿದ್ಯಾರ್ಥಿ ರಾಮಚಂದ್ರ ಭಟ್ ಪ್ರಾರ್ಥನೆ ನೆರವೇರಿಸಿದರು.

ವೈದ್ಯೆ, ಯೋಗ ವಿದ್ಯಾರ್ಥಿನಿ ವಿದ್ಯಾ ಭಾರತಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎನ್ಸಿಸಿ ಅಧಿಕಾರಿಗಳಾದ ಡಾ. ಯತೀಶ್ ಕುಮಾರ್, ಡಾ. ಜಯರಾಜ್, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಸುರೇಶ್, ಯೋಗ ವಿಜ್ಞಾನ ವಿಭಾಗದ ಉಮಾನಾಥ ಕೆ, ರಂಗಪ್ಪ ಮೊದಲಾದವರು ಉಪಸ್ಥಿತರಿದ್ದರು. ಈ ಮೊದಲು ಯೋಗ ಶಿಕ್ಷಕರ ಮಾರ್ಗದರ್ಶನದಲ್ಲಿ ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ವೈದ್ಯರೂ ಸೇರಿದಂತೆ ನೂರಾರು ಮಂದಿ ಯೋಗಾಭ್ಯಾಸ ನಡೆಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

Published

on

ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್‌ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.

ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ‍್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್‌ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್‌ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.

ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋಲ್‌ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು

Published

on

ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್‌ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.

ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್‌ಆರ್‌ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್‌ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.

ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending