Connect with us

ದಿನದ ಸುದ್ದಿ

ಆರ್ಟಿಪಿಎಸ್ ನಲ್ಲಿ ಕಲ್ಲಿದಲು ಸಂಗ್ರಹಣೆ ಶೂನ್ಯ; ಕಾಡಲಿದೆಯಾ ವಿದ್ಯುತ್ ಸಮಸ್ಯೆ

Published

on

ಸುದ್ದಿದಿನ ರಾಯಚೂರು: 1720MW ಸಾಮರ್ಥ್ಯದ ರಾಯಚೂರಿನ ಉಷ್ಣ ಸ್ಥಾವರದಲ್ಲಿ ಕಲ್ಲಿದ್ದಲು ಸಂಗ್ರಹಣೆ ಶೂನ್ಯವಾಗಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ವೆಸ್ಟರ್ನ್ ಕೋಲ್ ಪೀಲ್ಡ್ಸ್ (WLC) ಒಪ್ಪಂದದ ಪ್ರಕಾರ ಕಲ್ಲಿದ್ದಲು ಪೂರೈಸದೇ ಇರುವುದು ಇದಕ್ಕೆ ಕಾರಣವಾಗಿದೆ. ಇದರಿಂದಾಗಿ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಸಮಸ್ಯೆ ಉಂಟಾಗಲಿದೆ.

ಉಷ್ಣ ಸ್ಥಾವರಕ್ಕೆ ಒಪ್ಪಂದದಂತೆ ನೀಡಬೇಕಾಗಿದ್ದ ಕಲ್ಲಿದ್ದಲಿನ ಒಟ್ಟು ಪ್ರಮಾಣದಲ್ಲಿ ಸುಮಾರು 6ಲಕ್ಷ ಟನ್ ಗಳಷ್ಟು ಈವರೆಗೆ ಪೂರೈಕೆ ಮಾಡದಿರುವುದು ಕಲ್ಲಿದ್ದಲು ಶೂನ್ಯ ಸಂಗ್ರಹಣೆಗೆ ಕಾರಣವಾಗಿದೆ. ಈ ಪ್ರಮಾಣದ ಕೊರತೆಯನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಎಂ.ಸಿ.ಎಲ್ ಮುಖಾಂತರ ಪೂರೈಕೆ ಮಾಡಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ WCL ನಿಂದ ಒಪ್ಪಂದದ ಪ್ರಕಾರ ಪೂರ್ಣ ಪ್ರಮಾಣದ ಕಲ್ಲಿದ್ದಲು ಪೂರೈಕೆ ಮಾಡದ ಪರಿಣಾಮ ರಾಜ್ಯದಲ್ಲಿ ನಿರಂತರವಾಗಿ ನಿಗದಿತ ಪ್ರಮಾಣದ ವಿದ್ಯುತ್ ಉತ್ಪಾದನೆಗೆ ಸಮಸ್ಯೆಯಾಗಲಿದೆ. ಆದ್ದರಿಂದ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಜನರಿಗೆ ವಿದ್ಯುತ್ ವ್ಯತ್ಯಯ ಸಮಸ್ಯೆ ಕಾಡಲಿದೆ.

ದಿನದ ಸುದ್ದಿ

ಜೈವಿಕ ಗೊಬ್ಬರಗಳ ಮಾರಾಟ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಜೈವಿಕ ಕೇಂದ್ರದಲ್ಲಿ, ಉತ್ತಮ ಗುಣಮಟ್ಟದ ಜೈವಿಕ ನಿಯಂತ್ರಕಗಳಾದ ಟ್ರೈಕೋಡರ್ಮ, ಸೂಡೊಮೋನಾಸ್ ಹಾಗೂ ಜೈವಿಕ ಗೊಬ್ಬರಗಳಾದ ದ್ರವರೂಪದ ಜೈವಿಕ ಗೊಬ್ಬರ ಘನರೂಪದ ಜೈವಿಕ ಗೊಬ್ಬರ ಅಜಟೋಬ್ಯಾಕ್ಟರ್ ಜೈವಿಕ ಗೊಬ್ಬರ ಗಳನ್ನು ತಯಾರು ಮಾಡಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತದೆ.

ಇವುಗಳು ಮಣ್ಣಿನ ಜೈವಿಕ ಮತ್ತು ಭೌತಿಕ ಗುಣಗಳನ್ನು ಕಾಪಾಡಿ ಭೂಮಿಯ ಫಲವತ್ತತೆ ಹೆಚ್ಚಿಸುವಲ್ಲಿ, ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆಸಕ್ತ ರೈತರು ಉತ್ತಮ ಗುಣಮಟ್ಟದ ಜೈವಿಕ ನಿಯಂತ್ರಕ ಹಾಗೂ ಜೈವಿಕ ಗೊಬ್ಬರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಹೆಚ್ಚಿನ ಮಾಹಿತಿಗಾಗಿ ಮೊ.ಸಂ:9611556835 ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂಗಳೂರು : ಐಷಾರಾಮಿ ಹೋಟೆಲ್‌ಗಳಿಗೆ ಬಾಂಬ್ ಬ್ಲಾಸ್ಟ್ ಬೆದರಿಕೆ

Published

on

ಸುದ್ದಿದಿನ ಡೆಸ್ಕ್ : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಮೂರು ಐಷಾರಾಮಿ ಹೊಟೇಲ್‌ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ.

ಇಂದು ಬೆಳಗ್ಗೆ ಹೊಟೇಲ್ ಸಿಬ್ಬಂದಿ ಇ-ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬೆಳಕಿಗೆ ಬಂದಿದೆ. ಮಧ್ಯರಾತ್ರಿ 2 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಉಲ್ಲೇಖಿಸಲಾಗಿದೆ. ತಕ್ಷಣವೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೊಟೇಲ್‌ಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ತೆರಳಿ, ಪರಿಶೀಲನೆ ನಡೆಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

HELPLINE | ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣ ; ಸಂತ್ರಸ್ತರು ಎಸ್‌ಐಟಿ ಸಂಪರ್ಕಿಸಿ

Published

on

ಸುದ್ದಿದಿನ ಡೆಸ್ಕ್ : ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಸಹಾಯವಾಣಿಗೆ ಈವರೆಗೆ 30ಕ್ಕೂ ಹೆಚ್ಚು ಕರೆಗಳು ಬಂದಿವೆ.

ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತರು ಎಸ್‌ಐಟಿ ಸಂಪರ್ಕಿಸಿ ದೂರು ನೀಡಬಹುದು. ಅವರು ಹೇಳಿದ ಸ್ಥಳಕ್ಕೆ ಬಂದು ಮಾಹಿತಿ ಸಂಗ್ರಹಿಸಲು ತಂಡ ಸಿದ್ಧವಿದೆ. ಗುರುತು ಹಾಗೂ ಮಾಹಿತಿ ವಿಷಯದಲ್ಲಿ ಗೌಪ್ಯತೆ ಕಾಪಾಡಲಾಗುತ್ತದೆ. ನೇರವಾಗಿ ಅಧಿಕಾರಿಗಳನ್ನೂ ಸಂಪರ್ಕಿಸಬಹುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಸಹಾಯವಾಣಿ: 6360938947

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending