ದಿನದ ಸುದ್ದಿ

ಸಾಲ ಸೌಲಭ್ಯ ಯೋಜನೆ ; ಅ.23 ರಂದು ಆಯ್ಕೆ ಸಮಿತಿ ಸಭೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 23 ರಂದು ಮಧ್ಯಾಹ್ನ 3.30 ಕ್ಕೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಸಾಲ ಸೌಲಭ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ಫಲಾನುಭವಿಗಳನ್ನು ಆಯ್ಕೆ ಸಮಿತಿ ಸಭೆಯ ಮೂಲಕ ಆಯ್ಕೆ ಮಾಡಲಾಗುವುದು.

ಆಸಕ್ತರು ಕಡ್ಡಾಯವಾಗಿ ಸಾಲ, ಸೌಲಭ್ಯ ಕೋರಿ ಆನ್‍ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯೊಂದಿಗೆ ಹಾಗೂ ಗುರುತಿನ ಚೀಟಿಯೊಂದಿಗೆ ಹಾಜರಾಗಬೇಕೆಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version