Connect with us

ದಿನದ ಸುದ್ದಿ

ದಾವಣಗೆರೆ | ಜಿ.ಪಂ ನೂತನ ಅಧ್ಯಕ್ಷರಾಗಿ ದೀಪಾ ಜಗದೀಶ ಅವಿರೋಧ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷರಾಗಿ ಹೊನ್ನಾಳಿ ತಾಲ್ಲೂಕಿನ ಕುಂದೂರು ಕ್ಷೇತ್ರದ ಸದಸ್ಯರಾದ ದೀಪಾ ಜಗದೀಶ ಅವಿರೋಧವಾಗಿ ಆಯ್ಕೆಯಾದರು.

ಜಿಲ್ಲಾ ಪಂಚಾಯತ್‍ನ ಎಸ್.ಎಸ್.ಮಲ್ಲಿಕಾರ್ಜುನ್ ಸಭಾಂಗಣದಲ್ಲಿ ಗುರುವಾರ ಜಿ.ಪಂ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಗೆ ಬೆಳಿಗ್ಗೆ 9.30 ರಿಂದ 10.30 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ದೀಪಾ ಜಗದೀಶ ಒಬ್ಬರೇ 2 ನಾಮಪತ್ರ ಸಲ್ಲಿಸಿದ್ದರು. ಸೂಚಕರಾಗಿ ಜಿ.ಪಂ ಸದಸ್ಯೆ ಶಾಂತಕುಮಾರಿ ಸಹಿ ಹಾಕಿದ್ದರು.

ಪ್ರಾದೇಶಿಕ ಆಯುಕ್ತರಾದ ವಿ.ಪಿ.ಇಕ್ಕೇರಿ ಇವರ ಅಧ್ಯಕ್ಷತೆಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಒಟ್ಟು 29 ಸದಸ್ಯರಲ್ಲಿ 22 ಮಂದಿ ಭಾಗವಹಿಸಿದ್ದರು. ಚುನಾವಣಾ ಕಾರ್ಯಸೂಚಿಯಂತೆ ಆಯುಕ್ತರು ನಾಮಪತ್ರ ಸಲ್ಲಿಸಲಾದ ಏಕೈಕ ಸದಸ್ಯ ಸಾಮಾನ್ಯ ಮಹಿಳೆ ವರ್ಗದ ಮೀಸಲಾತಿ ಪ್ರಕಾರ ದೀಪಾ ಜಗದೀಶ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಅಧ್ಯಕ್ಷೆ ದೀಪಾ ಜಗದೀಶ, ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾಮಟ್ಟದವರೆಗೆ ಎಲ್ಲಾ ಅಧಿಕಾರಿಗಳೊಂದಿಗೆ ಹಾಗೂ ಜಿಲ್ಲಾಡಳಿತದೊಂದಿಗೆ ಸೇರಿಕೊಂಡು ಜನಪರ ಕೆಲಸ ಮಾಡುವೆ. ಮುಂಗಾರು ಸಂದರ್ಭ ಇದಾಗಿದ್ದು, ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಯಲ್ಲಿ ಲೋಪ ಆಗದಂತೆ ನೋಡಿಕೊಳ್ಳುವ ಭರವಸೆ ನೀಡಿದರು.

ಉತ್ತಮ ಭವಿಷ್ಯಕ್ಕೆ ಶಿಕ್ಷಣ ಅತೀ ಮುಖ್ಯವಾಗಿದ್ದು, ನನ್ನ ಅವಧಿಯಲ್ಲಿ ಶಿಕ್ಷಣಕ್ಕೆ ಸಂಬಂಧಪಟ್ಟ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಕೊರೊನಾ ಸಂದರ್ಭ ಇದಾಗಿದ್ದು, ಕೊರೊನಾ ಮಾಹಾಮಾರಿ ವಿರುದ್ಧ ಹೋರಾಡುತ್ತೇನೆ. ಜಿಲ್ಲೆಯಲ್ಲಿರುವ 195 ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಗ್ರಾಮದ ಜನರಲ್ಲಿ ಕೋವಿಡ್-19 ನಿಯಂತ್ರಣದ ಕುರಿತು ಜಾಗೃತಿ ಮೂಡಿಸುವ ಮೂಲಕ ಪುನಃ ಗ್ರೀನ್ ಜೋನ್ ಜಿಲ್ಲೆಯಾಗಿಸಲು ಶ್ರಮಿಸುತ್ತೇನೆ ಎಂದರು.

ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಶ್ರಮಿಸುವೆ. ಶಾಸಕರೊಂದಿಗೆ ಸೇರಿಕೊಂಡು ಒಗ್ಗೂಡಿ ಕೆಲಸ ಮಾಡುವೆ ಎಂದ ಅವರು, ಅಧ್ಯಕ್ಷೆಯಾಗಿ ಆಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಜೊತೆಗೆ ಜಿಲ್ಲೆಯಲ್ಲಿ ಉತ್ತಮ ಆಡಳಿತ ನೀಡಲು ಎಲ್ಲರೂ ಸಹಕರಿಸಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷರಾದ ಲೋಕೇಶ್ವರ್, ಯಶೋಧಮ್ಮ ಮರುಳಪ್ಪ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯತ್ ಸಿಇಓ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದು ಘಟಕಗಳನ್ನು ಸ್ಥಾಪಿಸಿರುವ ಅರ್ಹ ಉದ್ದಿಮೆದಾರರು ಹಾಗೂ ಬ್ಯಾಂಕ ಸಾಲ ಪಡೆದು ಉದ್ದಿಮೆ ಸ್ಥಾಪಿಸಲು ಇಚ್ಚಿಸಿರುವ ಉದ್ದಿಮೆದಾರರು ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಪಿ.ಬಿ ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Continue Reading

Trending