ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಕೆ.ವಿ. ಶಾಂತಕುಮಾರಿ ಆಯ್ಕೆ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/12/zp_Davangere_suddidina-765.jpg&description=ದಾವಣಗೆರೆ | ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಕೆ.ವಿ. ಶಾಂತಕುಮಾರಿ ಆಯ್ಕೆ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/12/zp_Davangere_suddidina-765.jpg&description=ದಾವಣಗೆರೆ | ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಕೆ.ವಿ. ಶಾಂತಕುಮಾರಿ ಆಯ್ಕೆ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಜಗಳೂರು ತಾಲ್ಲೂಕು ದೊಣ್ಣೆಹಳ್ಳಿ ಕ್ಷೇತ್ರದ ಜಿ.ಪಂ. ಸದಸ್ಯೆ ಕೆ.ವಿ. ಶಾಂತಕುಮಾರಿ ಅವರು ಆಯ್ಕೆಯಾದರು.
ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿದ್ದ ದೀಪಾ ಜಗದೀಶ್ ಅವರ ರಾಜೀನಾಮೆಯಿಂದ ಕಳೆದ ಡಿ. 08 ರಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರದಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಚುನಾವಣೆ ಪ್ರಕ್ರಿಯೆ ಜರುಗಿತು.
ಅಧ್ಯಕ್ಷ ಸ್ಥಾನ ಸಾಮಾನ್ಯ (ಮಹಿಳೆ) ವರ್ಗಕ್ಕೆ ಮೀಸಲಿರಿಸಲಾಗಿತ್ತು. ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ನಿಗದಿಪಡಿಸಲಾಗಿದ್ದ ಕಾಲಮಿತಿಯಲ್ಲಿ ಕೆ.ವಿ. ಶಾಂತಕುಮಾರಿ ಅವರು ಮಾತ್ರ ಎರಡು ನಾಮಪತ್ರವನ್ನು ಸಲ್ಲಿಸಿದರು.
ಮಧ್ಯಾಹ್ನ 3-00 ಗಂಟೆಗೆ ಚುನಾವಣಾಧಿಕಾರಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್‍ರಾಜ್ ಸಿಂಗ್ ಅವರು ನಾಮಪತ್ರ ಪರಿಶೀಲಿಸಿ, ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಪ್ರಕಟಿಸಿದರು.
ಒಬ್ಬರೇ ಅಭ್ಯರ್ಥಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ, ಕೆ.ವಿ. ಶಾಂತಕುಮಾರಿ ಅವರು ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನವೀನ್‍ರಾಜ್ ಸಿಂಗ್ ಅವರು ಘೋಷಿಸಿದರು.
ಜಿಲ್ಲಾ ಪಂಚಾಯತಿಯ ಒಟ್ಟು 29 ಸದಸ್ಯರ ಪೈಕಿ, ಸಂತೆಬೆನ್ನೂರು ಕ್ಷೇತ್ರದ ಜಿ.ಪಂ. ಸದಸ್ಯ ಪಿ. ವಾಗೀಶ್ ಅವರು ಕಳೆದ ನ. 05 ರಂದು ಮರಣ ಹೊಂದಿದ್ದರಿಂದ ಜಿ.ಪಂ. ಸದಸ್ಯರ ಸಂಖ್ಯಾಬಲ 28 ಕ್ಕೆ ಇಳಿದಿದೆ. ಚುನಾವಣೆ ಸಂದರ್ಭದಲ್ಲಿ ಒಟ್ಟು 28 ಜಿ.ಪಂ. ಸದಸ್ಯರುಗಳ ಪೈಕಿ 19 ಸದಸ್ಯರು ಹಾಜರಿದ್ದರು.
ಎಂ.ಆರ್. ಮಹೇಶ್, ಅರ್ಚನಾ ಬಸವರಾಜ, ಬಸವರಾಜ ಕೆ.ಎಸ್., ಜಿ.ಸಿ. ನಿಂಗಪ್ಪ ಹದಡಿ, ರೇಣುಕ ಕರಿಬಸಪ್ಪ, ಕೆ.ಹೆಚ್. ಓಬಳಪ್ಪ, ಬಿ. ಫಕೀರಪ್ಪ, ತೇಜಸ್ವಿ ವಿ. ಪಾಟೀಲ್, ಎಂ. ಯೋಗೇಶ ಸೇರಿದಂತೆ ಜಿಲ್ಲಾ ಪಂಚಾಯತಿಯ ಒಟ್ಟು 09 ಸದಸ್ಯರು ಗೈರುಹಾಜರಾಗಿದ್ದರು.
ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷರ ಅಧಿಕಾರ ಅವಧಿಯು 2020 ರ ಡಿಸೆಂಬರ್ 23 ರಿಂದ 2021 ರ ಮೇ. 02 ರವರೆಗೆ ಸೀಮಿತವಾಗಿರುತ್ತದೆ ಎಂದು ಚುನಾವಣಾಧಿಕಾರಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್‍ರಾಜ್ ಸಿಂಗ್ ಅವರು ಘೋಷಿಸಿದರು, ಅಲ್ಲದೆ ನೂತನ ಅಧ್ಯಕ್ಷರಿಗೆ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ
ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.
ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್‌ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ
ಸುದ್ದಿದಿನ,ದಾವಣಗೆರೆ : ನಗರದ ಧವನ್ ಕಾಲೇಜಿನಲ್ಲಿ Viksit47 ಅಕಾಡೆಮಿ ವತಿಯಿಂದ ಉಚಿತ ತರಬೇತಿ ಕಾರ್ಯಗಾರವನ್ನು ಇದೇ 25 ರಂದು ಆಯೋಜಿಸಲಾಗಿದೆ ಎಂದು ಮುಖ್ಯಸ್ಥರಾದ ತೇಜಸ್ ಹೆಚ್.ಎನ್ ಅವರು ತಿಳಿಸಿದ್ದಾರೆ.
ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಮುಂತಾದ 12 ಕೋರ್ಸುಗಳ ಪ್ರವೇಶಕ್ಕೆ ಕೃಷಿಕರ ಕೋಟಾದ ಅಡಿಯಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ 50% ಮೀಸಲಾತಿ ಇರುತ್ತದೆ,ಈ ಮೀಸಲಾತಿಯನ್ನು ಪಡೆಯಲು KCET ಪರೀಕ್ಷೆಯ ಜೊತೆಗೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ನಡೆಸುವ ಪ್ರಾಯೋಗಿಕ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ಈ ಉಚಿತ ಕಾರ್ಯಗಾರದಲ್ಲಿ ಅಗ್ರಿ ಪ್ರಾಕ್ಟಿಕಲ್ ಪರೀಕ್ಷೆಯ ಕುರಿತು ಸಂಪೂರ್ಣ ತರಬೇತಿಯನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ದ್ಬಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ಈ ಸದುಪಯೋಗ ಪಡಿಸಿಕೊಳ್ಳಬೇಕು. ಅಕ್ಕ ಪಕ್ಕದ ಜಿಲ್ಲೆಯ ವಿದ್ಯಾರ್ಥಿಗಳು ಸಹ ಇದರ ಸದುಪಯೋಗ ಪಡಿಸಿಕೊಳ್ಳಬಹುದು,ಮತ್ತು ಕಾಲೇಜುಗಳ ಆಡಳಿತ ಮಂಡಳಿಯವರು ತಮ್ಮ ವಿದ್ಯಾರ್ಥಿಗಳನ್ನು ಈ ಉಚಿತ ಕಾರ್ಯಗಾರದಲ್ಲಿ ಭಾಗವಹಿಸುವಂತೆ ವಿನಂತಿಸಿದ್ದಾರೆ.
ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಮೊಬೈಲ್ ನಂ: 8217413646 ಗೆ ಕರೆಮಾಡಲು ಸೂಚಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.
ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ6 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ3 days agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ22 hours agoಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
-
ದಿನದ ಸುದ್ದಿ16 hours agoಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ
-
ದಿನದ ಸುದ್ದಿ2 days agoಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
-
ದಿನದ ಸುದ್ದಿ16 hours agoಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ
-
ದಿನದ ಸುದ್ದಿ2 days agoನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

